ಕುಡಿಯುವ ನೀರು ಕಲುಷಿತಗೊಳ್ಳದಂತೆ ಅಗತ್ಯ ಕ್ರಮಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Date:

ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆಯಿದ್ದು, ಮುಂಜಾಗರೂಕತೆವಹಿಸದಿದ್ದಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಹೆಚ್ಚುವ ಸಾಧ್ಯತೆ ಇರುವುದರಿಂದ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜನಿಯರುಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದರು.

- Advertisement -

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೊದಲ ಬಾರಿಗೆ ಕರೆದಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆಯ ರಾಜ್ಯದ ಎಲ್ಲ ಎಂಜನಿಯರುಗಳ ಸಭೆಯಲ್ಲಿ ಮಾತನಾಡಿದ ಸಚಿವರು, “ರಾಜ್ಯದ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು, ಜೂನಿಯರ್‌ ಎಂಜನಿಯರುಗಳು, ವಾಟರ್‌ಮನ್‌ಗಳು ಹಾಗೂ ಇನ್ನಿತರರಿಗೆ ನೀರಿನ ಗುಣಮಟ್ಟ ಪರೀಕ್ಷೆ ಕುರಿತಂತೆ ತರಬೇತಿ ನೀಡಲು ತಕ್ಷಣದ ಕ್ರಮ ಕೈಗೊಳ್ಳುವಂತೆ” ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಗ್ರಾಮೀಣ ನೀರು ಸರಬರಾಜು ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ವಾರಕ್ಕೆ ಒಂದು ದಿನ ಪ್ರವಾಸ ಮಾಡಿ ನೀರು ಸರಬರಾಜು ವ್ಯವಸ್ಥೆಯ ಬಗ್ಗೆ ಪರಿಶೀಲನೆ ಮಾಡಿ ಆಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿದರು. ಪ್ರತಿ ತಿಂಗಳು 2ನೆಯ ತಾರೀಕು ತಾವು ನಡೆಸುವ ರಾಜ್ಯ ಮಟ್ಟದ ವಿಡಿಯೊ ಸಭೆಯಲ್ಲಿ ಈ ವರದಿಗಳನ್ನು ಪರಿಶೀಲಿಸುವುದಾಗಿ ಸಚಿವರು ಹೇಳಿದರು.

ಕೊಳವೆಬಾವಿಗಳ ಸುತ್ತಮುತ್ತಲೂ ಪರಿಸರವನ್ನು ಶುಚಿಯಾಗಿರಿಸಿಕೊಳ್ಳುವುದು, ತ್ಯಾಜ್ಯನೀರು ಕಾಲುವೆಗಳಲ್ಲಿ ಕುಡಿಯವ ನೀರಿನ ಕೊಳವೆಗಳು ಹಾದು ಹೋಗದಂತೆ ಎಚ್ಚರವಹಿಸುವುದು, ನೀರು ಸರಬರಾಜು ಕೊಳವೆಗಳ ಕೊನೆಗಳಲ್ಲಿ ಬಿಗಿಯಾಗಿ ಎಂಡ್‌ಕ್ಯಾಪ್‌ ಅಳವಡಿಸುವುದು ಸೇರಿದಂತೆ ಹಲವು ಮೂಂಜಾಗರೂಕತಾ ಕ್ರಮಗಳ ಮೂಲಕ ನೀರು ಕಲುಷಿತಗೊಳ್ಳುವುದನ್ನು ತಡೆಯಬಹುದೆಂದು ಸಚಿವರು ಕಿವಿಮಾತು ಹೇಳಿದರು.

ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ: ಗಂಭೀರ ಪರಿಗಣನೆ

ಜಲಜೀವನ ಮಿಷನ್‌ ಹಾಗೂ ಬಹುಗ್ರಾಮ ಯೋಜನೆ ಕಾರ್ಯಕ್ರಮಗಳಡಿ ಕೈಗೆತ್ತಿಕೊಂಡಿರುವ ಕೆಲವು ಯೋಜನೆಗಳು ಪೂರ್ಣಗೊಳ್ಳುವಲ್ಲಿ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬೇರೆಲ್ಲ ಯೋಜನೆಗಳಿಗೆ ಹೋಲಿಸಿದಲ್ಲಿ ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದು ಅತ್ಯಂತ ಮುಖ್ಯವಾದುದು ಎಂದು ಹೇಳಿದರಲ್ಲದೆ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಗತಿಯಲ್ಲಿರುವ ಜಿಲ್ಲಾವಾರು ಕಾಮಗಾರಿಗಳ ವಿಮರ್ಶೆ ಮಾಡಿದ ಸಚಿವರು ಹಲವಾರು ಸೂಚನೆ, ಸಲಹೆಗಳನ್ನು ನೀಡಿದರು.

ಸಭೆಗೆ ಗೈರುಹಾಜರಾದ ಎರಡು ಜಿಲ್ಲೆಗಳ ಎಂಜನಿಯರುಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಸಚಿವರು ಸೂಚಿಸಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರವೇಜ್‌, ಗ್ರಾಮೀಣ ನೀರು ಸರಬರಾಜು ಇಲಾಖೆಯ ಆಯುಕ್ತ ಕೆ.ನಾಗೇಂದ್ರ ಪ್ರಸಾದ್‌, ಮುಖ್ಯ ಅಭಿಯಂತರರಾದ ಎಜಾಜ್‌ ಹುಸೇನ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ ಬಹುರೂಪ

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ...

ಮೋದಿ, ಶಾ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಪ್ರಧಾನಿಯ ‘ವೈಚಾರಿಕ ನಕ್ಸಲರು’ ಹೇಳಿಕೆಗೆ ಬಘೇಲ್ ತಿರುಗೇಟು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ವಿರುದ್ಧ...

ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ,...