ಗ್ರಾ.ಪಂ.ಗಳು ಮಾ.10ರೊಳಗೆ ಜನಸ್ನೇಹಿ ಆಯವ್ಯಯ ಮಂಡಿಸಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ

Date:

Advertisements

ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1) ರಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದ್ದಾರೆ.

ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಗ್ರಾಮ ಪಂಚಾಯತಿಗಳು ತಮ್ಮ ಆಯವ್ಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸೂಚಿಸಬೇಕೆಂದು ಸಚಿವರು ಪಂಚಾಯತ್‌ ರಾಜ್‌ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಗಳಿಗೆ ವಿಶೇಷವಾದ ಮಹತ್ವವಿದೆ, ಗ್ರಾಮ ಪಂಚಾಯತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದು ಸಂವಿಧಾನದ ಆಶಯವಾಗಿದೆ. ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಗ್ರಾಮ ಪಂಚಾಯಿತಿಗಳು ಸ್ಥಳೀಯವಾಗಿ ಜನರಿಗೆ ಅವಶ್ಯವಾಗಿ ಬೇಕಾದ ಮೂಲಸೌಕರ್ಯಗಳನ್ನು ಒದಗಿಸಲು ಹಾಗೂ ದೈನಂದಿನ ಸೇವೆಗಳನ್ನು ನೀಡಲು ತಾವೇ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

Advertisements

ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಈ ವಿಷಯವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಆಯವ್ಯಯ ಸಿದ್ದಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಗ್ರಾಮ ಪಂಚಾಯತಿಗಳು ಇನ್ನಷ್ಟು ಉತ್ತರದಾಯಿಯಾಗಿ ಕಾರ್ಯನಿರ್ವಹಿಸಬೇಕೆಂದು ಸಚಿವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X