- ಅಕ್ರಮ ಮರುಳು ಸಾಗಾಣಿಕೆ ಟ್ರಾಕ್ಟರ್ ಹರಿದು ಪೊಲೀಸ್ ಪೇದೆ ಸಾವು
- ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾಂತ್ವನ, ಪರಿಹಾರ ಕೊಡಿಸುವ ಭರವಸೆ
ಕಲಬುರಗಿ ಜಿಲ್ಲೆಯಲ್ಲಿನ ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಡಳಿತಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, “ಜಿಲ್ಲೆಯಲ್ಲಿ ಅಕ್ರಮ ಮರುಳು ಸಾಗಾಣಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದೆ. ಹೀಗಿದ್ದರೂ ಮರಳು ಸಾಗಣೆ ಟ್ರಾಕ್ಟರ್ ಹರಿದು ಪೊಲೀಸ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದು ನಿಜಕ್ಕೂ ಬೇಸರದ ಸಂಗತಿ” ಎಂದರು.
ಈ ಘಟನೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಬಂಧಿಸಿದವರಿಗೆ ಹಾಗೂ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಆದೇಶ ನೀಡಿ ಈ ಕೂಡಲೇ ಅಕ್ರಮ ಮರುಳು ಸಾಕಾಣಿಕೆ ವಿರುದ್ಧ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸಿದ್ದೇನೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಜೇವರ್ಗಿ ತಾಲೂಕು ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲ್ಲೂರು ಚೆಕ್ ಪೋಸ್ಟ್ ಬಳಿ ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಅಕ್ರಮ ಮರುಳುಸಾಗಾಣಿಕೆ ಮಾಡುತ್ತಿದ್ದ ಟ್ರಾಕ್ಟರ್ ಹರಿದು ಸಾವನ್ನಪ್ಪಿದ್ದರು. ಮೃತ ಪೊಲೀಸ್ ಸಿಬ್ಬಂದಿ ಕುಟುಂಬದೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಸಾಂತ್ವನ ಹೇಳಿ, ಶೀಘ್ರದಲ್ಲಿಯೇ ಸೂಕ್ತ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ?:ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗೆ ಎಸ್ಐಟಿ ರಚನೆ; ವಾರದ ಬಳಿಕ ನಿರ್ಧಾರ
ಜೊತೆಗೆ ಸಾವನ್ನಪ್ಪಿದ್ದ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ ಭೀಮು ಚವ್ಹಾಣ (51) ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಮಾತುಕತೆ ನಡೆಸಿದ ಸಚಿವರು, ತನಿಖೆಗೆ ಆದೇಶಿಸಿರುವುದಾಗಿ ಹೇಳಿದರು.