ಸೈಬರ್‌ ತಾಣ ಸುರಕ್ಷತೆ ಬಗ್ಗೆ 10 ಲಕ್ಷ ಮಕ್ಕಳಿಗೆ ತರಬೇತಿ: ಸಚಿವ ಪ್ರಿಯಾಂಕ್‌ ಖರ್ಗೆ

Date:

Advertisements

ಮೆಟಾ ಕಂಪೆನಿ ಜೊತೆಗೂಡಿ 10 ಲಕ್ಷ ಮಕ್ಕಳಿಗೆ ಸೈಬರ್‌ ತಾಣದ ಸುರಕ್ಷತೆ ಬಗ್ಗೆ ತರಬೇತಿ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಗುರುವಾರ ಬೆಂಗಳೂರಿನಲ್ಲಿನಡೆದ ಕಾರ್ಯಕ್ರಮದಲ್ಲಿ ಸಚಿವರು ‘ಡಿಜಿಟಲ್ ನಾಗರೀಕ್ʼ ಮತ್ತು ʼ ಎಆರ್-ವಿಆರ್ ಕೌಶಲ್ಯʼ ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಸಾಮಾಜಿಕ ಜಾಲತಾಣಗಳು ಮತ್ತು ಸೈಬರ್‌ ತಾಣಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಬೆದರಿಕೆಗಳಿಂದ ರಕ್ಷಿಸಿಕೊಳ್ಳಲು ಹಾಗೂ ಶಕ್ತಿಯುತವಾದ ಪಾಸ್‌ವರ್ಡ್‌ಗಳನ್ನು ರೂಪಿಸುವುದು ಮತ್ತು ಮೋಸದ ಜಾಲಗಳನ್ನು ಗುರುತಿಸುವ ಸಂಬಂಧ ಅಗತ್ಯವಿರುವ ಶಿಕ್ಷಣದ ಮೂಲಕ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ಕರ್ನಾಟಕ ಸರ್ಕಾರ ಬದ್ಧವಾಗಿದೆ” ಎಂದರು.

Advertisements

“ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳೊಂದಿಗೆ ಮಕ್ಕಳಿಗೆ ತರಬೇತಿ ನೀಡುವುದು ಮಾತ್ರವಲ್ಲದೆ ಅವರಲ್ಲಿ ಜಾಗರೂಕತೆ ಮತ್ತು ಜವಾಬ್ದಾರಿಯ ಮನಸ್ಥಿತಿಯನ್ನು ಹುಟ್ಟುಹಾಕಲಾಗುವುದು ಹಾಗೂ ಇದು ಮುಂದಿನ ಜೀವನದಲ್ಲಿ ಎಚ್ಚರಿಕೆಯ ಗಂಟೆಯಾಗಿ ಉಳಿಯುತ್ತದೆ” ಎಂದು ಹೇಳಿದರು.

“ಕರ್ನಾಟಕ ಸರ್ಕಾರ ಮತ್ತು ಮೆಟಾ ಕಂಪೆನಿ ಜಂಟಿಯಾಗಿ 2025ರ ವೇಳೆಗೆ ರಾಜ್ಯದ ಒಂದು ಲಕ್ಷ ಶಿಕ್ಷಕರು ಮತ್ತು 10 ಲಕ್ಷ ವಿದ್ಯಾರ್ಥಿಗಳನ್ನು ಡಿಜಿಟಲ್ ಸುರಕ್ಷತಾ ಜ್ಞಾನ ಮತ್ತು ವರ್ಧಿತ ವಾಸ್ತವತೆ (ಆಗ್ಯುಮೆಂಟೆಡ್ ರಿಯಾಲಿಟಿ)/ಅಗೋಚರ ವಾಸ್ತವತೆ (ವರ್ಚುವಲ್ ರಿಯಾಲಿಟಿ ) ಕೌಶಲ್ಯಗಳೊಂದಿಗೆ ಸಬಲೀಕರಣಗೊಳಿಸುವ ಮಹತ್ವಾಕಾಂಕ್ಷೆಯ ಪಯಣವನ್ನು ಪ್ರಾರಂಭಿಸಿದೆ” ಎಂದು ತಿಳಿಸಿದರು.

ಮೆಟಾ ಕಂಪೆನಿಯ ಭಾರತದ ಪಬ್ಲಿಕ್ ಪಾಲಿಸಿಯ ಮ್ಯಾನೇಜರ್‌ ಪ್ರಿಯಾಂಕಾ ರಾವ್ ಮಾತನಾಡಿ, “ಭಾರತದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ಈ ಮಹತ್ತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ” ಎಂದರು.

ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ. ಎಕರೂಪ್ ಕೌರ್, ಪ್ರಾಥಮಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂಎಸ್.ಶ್ರೀಕರ್, ಪಿಯು ಮಂಡಳಿಯ ನಿರ್ದೇಶಕರಾದ ಸಿಂಧು ಬಿ ರೂಪೇಶ್; ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತೆ ಕಾವೇರಿ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಶಿಕ್ಷಣ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X