ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರದ ಉತ್ತೇಜನ: ಸಚಿವ ಶಿವಾನಂದ ಪಾಟೀಲ

Date:

Advertisements

ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಯುಗದಲ್ಲಿ ಪಾರಂಪರಿಕ ಉದ್ಯೋಗವನ್ನೂ ಉಳಿಸಿ ಬೆಳೆಸುವ ಅಗತ್ಯವಿದ್ದು, ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರ ಉತ್ತೇಜನ ನೀಡಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಚರಕ ಮತ್ತು ದೇಸಿ ಟ್ರಸ್ಟ್ ಸಂಯುಕ್ತವಾಗಿ ಬೆಂಗಳೂರಿನಲ್ಲಿ ಆಯೋಜಿಸಿರುವ ಎರಡು ದಿನಗಳ ‘ಕೊಡು-ಕೊಳ್ಳುವವರ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಔದ್ಯೋಗಿಕ ಬೆಳವಣಿಕೆ ಮತ್ತು ವೈಜ್ಞಾನಿಕ ಬೆಳವಣಿಗೆ ಮುಖ್ಯವಾದರೂ ಪ್ರಕೃತಿ ಸಂರಕ್ಷಣೆಯೊಂದಿಗೆ ಈ ಚಟುವಟಿಕೆಗಳನ್ನು ನಿರ್ಲಕ್ಷ್ಯ ಮಾಡಬಾರದು. ಹೆಗ್ಗೋಡಿನ ಚರಕ ಸಂಸ್ಥೆ ಸಾಂಪ್ರದಾಯಿಕ ನೇಕಾರಿಕೆಯನ್ನು ಉಳಿಸಿ ಬೆಳೆಸಲು ಶ್ರಮಸುತ್ತಿದ್ದು, ಸಂಸ್ಥೆಗೆ ಸರ್ಕಾರ ಅಗತ್ಯ ನೆರವು ಸಹಕಾರ ನೀಡಲು ಬದ್ಧವಿದೆ ಎಂದು ಹೇಳಿದರು.

Advertisements

ವಿದ್ಯುತ್ ಮಗ್ಗ ಅಭಿವೃದ್ಧಿ ನಿಗಮ ಹಾಗೂ ಕೈಮಗ್ಗ ಅಭಿವೃದ್ಧಿ ನಿಗಮ ಎರಡನ್ನೂ ವಿಲೀನಗೊಳಿಸಿ ಏಕ ನಿಗಮ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ. ನೇಕಾರ ಸಮುದಾಯ ತೀವ್ರ ಸಂಕಷ್ಟದಲ್ಲಿದೆ. ಎರಡರೆಡು ನಿಗಮಗಳಿಂದ ನೇಕಾರರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗದಿರುವುದು ಮನಗಂಡು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ ಎಂದರು.

ಕೈಮಗ್ಗದ ಬಟ್ಟೆಗಳನ್ನು ಸರ್ಕಾರದ ಇಲಾಖೆಗಳು ಖರೀದಿಸಬೇಕೆಂಬ ನಿಯಮ ಇದೆ. ಆದರೆ, ಕೆಲವು ಇಲಾಖೆ ಅಧಿಕಾರಿಗಳ ಹಾಗೂ ಸಚಿವರ ಇಚ್ಛಾಶಕ್ತಿಯ ಕೊರತೆಯಿಂದ ಇದಕ್ಕೆ ಚಾಲನೆ ಸಿಕ್ಕಿಲ್ಲ. ಇವರಿಗೆ ಮನವರಿಕೆ ಮಾಡುವ ಕೆಲಸ ನಡೆದಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಸಚಿವ ಪ್ರಿಯಾಂಕ್‌ ಖರ್ಗೆಗೆ ಅಮೆರಿಕ ಪ್ರವಾಸ ನಿರ್ಬಂಧ ಹೇರಿದ ಕೇಂದ್ರ: ಏನಿದು ಪ್ರಕರಣ?

ಈ ಹಿಂದೆ ನರ್ಬಾಡ್ ನೇಕಾರ ಸಮುದಾಯಕ್ಕೆ ಹೆಚ್ಚಿನ‌ ಅನುದಾನ ನೀಡುತ್ತಿತ್ತು. ಈಗ ಅದು ಕಡೆಗಣಿಸಿದೆ. ನಬಾರ್ಡ್‌ ಕೂಡ ವಾಣಿಜ್ಯ ಬ್ಯಾಂಕುಗಳ ಸ್ವರೂಪ ಪಡೆದುಕೊಳ್ಳತೊಡಗಿದೆ. ಕೃಷಿಗೆ ನೀಡುತ್ತಿದ್ದ ನೆರವಿನ ಪ್ರಮಾಣವನ್ನೂ ಕಡಿಮೆ ಮಾಡಿದ್ದು, ಇದು ಕೃಷಿ ಕ್ಷೇತ್ರದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದ ಸಚಿವರು, ಭವಿಷ್ಯದಲ್ಲಿ ನರ್ಬಾಡ್ ಮೂಲಕ ನೇಕಾರರಿಗೆ ಹೆಚ್ಚಿನ‌ ಅನುದಾನ ಕೊಡಿಸಲು ಪ್ರಯತ್ನಿಸಲಾಗುವುದು ಎಂದರು.

ಕೈಮಗ್ಗ ಮತ್ತು ಜವಳಿ ಇಲಾಖೆ ಅಭಿವೃದ್ಧಿ ಆಯುಕ್ತೆ ಕೆ. ಜ್ಯೋತಿ ಮಾತನಾಡಿ, ಸರ್ಕಾರ ‘ಮಹಾತ್ಮ ಗಾಂಧಿ ವಸ್ತ್ತೋದ್ಯಮ’ ಯೋಜನೆ ರೂಪಿಸಿದ್ದು, ಇದರಲ್ಲಿ ಕೈಮಗ್ಗ ನೇಕಾರರನ್ನೇ ಷೇರುದಾರರನ್ನಾಗಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ‌ ನೀಡಿದರು.

ಸರ್ಕಾರ ಎರಡು ವರ್ಷದ ಹಿಂದೆ ಈ ಯೋಜನೆಯನ್ನು ಘೋಷಿಸಿತ್ತು. ಆದರೆ, ಅದಕ್ಕೆ ಚಾಲನೆ ಸಿಕ್ಕಿರಲಿಲ್ಲ. ಈಗ ‘ಮಹಾತ್ಮ ಗಾಂಧಿ ವಸ್ತ್ರೋದ್ಯಮ’ ಕೋಶ ಎಂಬ ಲಿಮಿಟೆಡ್ ಕಂಪನಿ ಆರಂಭಿಸಲಾಗುತ್ತಿದೆ ಎಂದರು.

ಈ ಹಿಂದೆ ಹತ್ತಿ, ರೇಷ್ಮೆ, ಉಣ್ಣೆ ಕೈಮಗ್ಗ ನೇಕಾರರು ರಾಜ್ಯದಲ್ಲಿ 40 ಸಾವಿರ ಜನ ಇದ್ದರು: ಈಗ 20 ಸಾವಿರಕ್ಕೆ ಬಂದಿದೆ. ಈಗ ಮತ್ತೊಮ್ಮೆ ಕೈಮಗ್ಗ ನೇಕಾರರ ಸರ್ವೆ ನಡೆಸಲಾಗುವುದು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಚರಕ ಸಂಸ್ಥೆ ಸಂಸ್ಥಾಪಕ ಪ್ರಸನ್ನ, ಸರ್ಕಾರ ಕೈಮಗ್ಗ ನೇಕಾರರ ಅನುಕೂಲಕ್ಕಾಗಿ ಮಹಾತ್ಮ ಗಾಂಧಿ ವಸ್ತ್ರೋದ್ಯಮ’ ಜಾರಿಗೆ ಮುಂದಾಗಿದೆ. ಇದು ಕೈಮಗ್ಗ ನೇಕಾರರ ಬದುಕಿನಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ ಎಂದರು.

ಭಾರತ ದೇಶ ಹತ್ತಿ ಕೈಮಗ್ಗದಲ್ಲಿ ಅತ್ಯಂತ ಪ್ರಖ್ಯಾತಿ ಹೊಂದಿದ್ದು, ಬ್ರಿಟಿಷರ ಕಾಲದಲ್ಲೇ ಗರಿಷ್ಠ ಪ್ರಮಾಣದಲ್ಲಿ ರಫ್ತು ಮಾಡಲಾಗುತ್ತಿತ್ತು. ಆದರೆ ಈಗ ಸಾಂಪ್ರದಾಯಕ ನೇಕಾರಿಕೆ ಸಂಕಷ್ಟದಲ್ಲಿದೆ. ಹೀಗಾಗಿ ಪರಿಹಾರ ಕಂಡುಕೊಳ್ಳಲು ಚರಕ ಸಂಸ್ಥೆ ಕಳೆದ 3೦ ವರ್ಷಗಳಿಂದ ಕೆಲಸ ಮಾಡುತ್ತಿದೆ ಎಂದರು.

ಸಮಾರಂಭದಲ್ಲಿ ನರ್ಬಾಡ್ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ. ಸುರೇಂದ್ರ ಬಾಬು ಮಾತನಾಡಿದರು. ಕೈಮಗ್ಗ ಮತ್ತು ಜವಳಿ‌ ಇಲಾಖೆ ನಿವೃತ್ತ ಆಯುಕ್ತ ಬಿ.ಎಫ್. ಪಾಟೀಲ್, ನೇಕಾರ ಸೇವಾ ಕೇಂದ್ರದ ಮುಖ್ಯಸ್ಥ ಪ್ರಭಾಕರ್, ಚರಕ ಸಂಸ್ಥೆ ಅಧ್ಯಕ್ಷೆ ಮಹಾಲಕ್ಷ್ಮಿ, ಡಿಕನಿ ಡೈರಿಯ ಗೋಪಿ, ದೇಸಿ ಟ್ರಸ್ಟ್‌ನ ಶಾರದಾ ಮತ್ತಿತರರು ಉಪಸ್ಥಿತರಿದ್ದರು. ಪದ್ಮಶ್ರೀ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X