ತುಮಕೂರು | ‘ಗೋ ಬ್ಯಾಕ್ ಅರುಣ್ ಸೋಮಣ್ಣ’: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ

Date:

  • ಗೋ ಬ್ಯಾಕ್ ಅಭಿಯಾನ ಪ್ರಾರಂಭಿಸಿದ ಬಿಜೆಪಿ ಕಾರ್ಯಕರ್ತರು
  • ಸ್ಥಳೀಯ ಸಂಸದ ಮತ್ತು ಶಾಸಕರಿಗೆ ಕಾರ್ಯಕರ್ತರ ಛೀಮಾರಿ

ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಕಳೆದ ವಾರ ಕಾಂಗ್ರೆಸ್ ಸೇರುತ್ತಾರೆಂಬ ಸುದ್ದಿ ಹರಡಿದ್ದರಿಂದ ಎಚ್ಚೆತ್ತ ಬಿಜೆಪಿ ಹೈಕಮಾಂಡ್ ಸೋಮಣ್ಣ ಪುತ್ರ ಡಾ. ಅರುಣ್‌ ಸೋಮಣ್ಣ ಅವರನ್ನು ತುಮಕೂರು ಜಿಲ್ಲಾ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಿದೆ. ಬಿಜೆಪಿ ನಾಯಕರ ನಿರ್ಧಾರದ ವಿರುದ್ಧ ತುಮಕೂರು ಕೇಸರಿ ಪಡೆಯಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಆಕ್ರೋಶ ಹೊರಬಿದ್ದಿದೆ.

ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ರವಿ ಶಂಕರ್ ಹೆಬ್ಬಾಕ ಅವರು ಮಂಗಳವಾರ ರಾತ್ರಿ ಪಕ್ಷದ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಡಾ. ಅರುಣ್‌ ಸೋಮಣ್ಣ ಅವರನ್ನು ತುಮಕೂರು ಜಿಲ್ಲಾ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದರು. ಆ ಆದೇಶದ ವಿರುದ್ಧ ಬಿಜೆಪಿಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿ ಎಸ್ ಯಡಿಯೂರಪ್ಪ ವಿರೋಧಿಗಳಿಗೆ ನಮ್ಮ ಬೆಂಬಲವಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಿನ್ನೆ ರಾತ್ರಿಯಿಂದಲೇ ಪೋಸ್ಟ್‌ರ್‌ಗಳು ಹರಿದಾಡುತ್ತಿವೆ.

ಈ ಸುದ್ದಿ ಓದಿದ್ದೀರಾ? ಅರುಣ್‌ಗೆ ಪಕ್ಷದ ಜವಾಬ್ದಾರಿ; ಸೋಮಣ್ಣನ ಅಸಮಾಧಾನಕ್ಕೆ ಬಿಜೆಪಿ ಮದ್ದು

ತುಮಕೂರಿನಲ್ಲಿ ಬಿಜೆಪಿ ಮುಖಂಡರ ಕೊರತೆ ಇರುವುದರಿಂದ ಬೆಂಗಳೂರಿನಿಂದ ಆಮದು ಮಾಡಿಕೊಳ್ಳಲಾಗಿದೆ. ‘ಆಮದಾಗಿ ಬಂದಿರುವ ಅರುಣ್ ಸೋಮಣ್ಣ ಅವರಿಗೆ ಸ್ವಾಗತ’, ‘ಗೋ ಬ್ಯಾಕ್ ಅರುಣ್ ಸೋಮಣ್ಣ’ ಎನ್ನುವ ಪೋಸ್ಟರ್‌ಗಳು ವೈರಲ್‌ ಆಗಿವೆ.

ಬಿಜೆಪಿ ಸಂಸದರೇ, ಶಾಸಕರೇ, ನಿಮ್ಮ ಚುನಾವಣೆಯಲ್ಲಿ ಕೆಲಸ ಮಾಡಿದ್ದು ಸಾಮಾನ್ಯ ಕಾರ್ಯಕರ್ತರು. ಆದರೆ, ಯಾವುದೋ ಜಿಲ್ಲೆಯವರಿಗೆ ಉಪಾಧ್ಯಕ್ಷ ಸ್ಥಾನ ನೀಡಿರುವ ನಿಮಗೆ ಪಕ್ಷದ ಕಾರ್ಯಕರ್ತನಾಗಿ ಶತಕೋಟಿ ನಮನ ಎಂದೂ ವ್ಯಂಗ್ಯವಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ...