ಮದರಸಗಳಲ್ಲಿ ಕನ್ನಡ, ಇಂಗ್ಲಿಷ್ ಶಿಕ್ಷಣಕ್ಕೆ ಒತ್ತು ನೀಡಲು ಸಚಿವ ಝಮೀರ್ ಅಹಮದ್ ಸೂಚನೆ

Date:

  • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
  • ವಕ್ಫ್ ಮಂಡಳಿಯಲ್ಲಿ 1265 ನೋಂದಣಿಯಾದ ಮದರಸ

ಮದರಸಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸಲು ಒತ್ತು ನೀಡುವಂತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮದರಸಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರೆ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ರಾಜ್ಯದ ವಕ್ಫ್ ಮಂಡಳಿಯಲ್ಲಿ 1265 ನೋಂದಣಿಯಾದ ಮದರಸಗಳಿದ್ದು, ಆ ಪೈಕಿ 100 ಮದರಸಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ ಎಂದು ಸೂಚಿಸಿದ ಸಚಿವರು, ಮುಂದಿನ ವರ್ಷದಿಂದ ಎಲ್ಲ ಮದರಸಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮದರಸಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರೆ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶ ಸಿಗಲಿದೆ ಎಂದು ಅಭಿಪ್ರಾಯಿಸಿದರು.

ಅಲ್ಪಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುವ ಪ್ರೋತ್ಸಾಹ ಧನ ಮೊತ್ತ 20 ಲಕ್ಷ ರೂ. ನಿಂದ 30 ಲಕ್ಷ ರೂ. ಗಳಿಗೆ ಹೆಚ್ಚಿಸಲು ಹಾಗೂ ಐ ಐ ಟಿ, ಎನ್ ಐ ಟಿ ಸೇರಿದಂತೆ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ನೀಡುತ್ತಿರುವ ಎರಡು ಲಕ್ಷ ರೂ. ಪ್ರೋತ್ಸಾಹ ಧನ ಮೊತ್ತ ನಾಲ್ಕು ಲಕ್ಷ ರೂ. ಗಳಿಗೆ ಹೆಚ್ಚಿಸಲು ಇದೇ ಸಂದರ್ಭದಲ್ಲಿ ಸಚಿವರು ಸೂಚಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಆಝಾದ್ ಮಾದರಿ ಶಾಲೆಗಳ 9,10 ಹಾಗೂ 12ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಸಚಿವರು ಇದೇ ವೇಳೆ ಬಿಡುಗಡೆ ಮಾಡಿದರು.

ಕಳೆದ ಎರಡು ವರ್ಷಗಳಲ್ಲಿ ಅಲ್ಪಸಂಖ್ಯಾತ ನಿರ್ದೇಶನಾಲಯ ವತಿಯಿಂದ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದರು.

ಎಷ್ಟು ಮೊತ್ತದ ಕಾಮಗಾರಿ ಕೈಗೊಳ್ಳಲಾಗಿದೆ, ಎಷ್ಟು ಮೊತ್ತ ಪಾವತಿಗೆ ಬಾಕಿ ಇದೆ, ಕಾಮಗಾರಿ ಪ್ರಮಾಣ, ಗುತ್ತಿಗೆ ದಾರರಿಗೆ ಪಾವತಿಸಿರುವ ಮೊತ್ತ ಕುರಿತು ಸಮಗ್ರ ವರದಿ ನೀಡುವಂತೆ ಸಚಿವರು ಸೂಚನೆ ನೀಡಿದರು.

ಕ್ಯೂ ಆರ್ ಕೋಡ್
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ 9,10 ಹಾಗೂ 12 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿಯಲ್ಲಿ ಪ್ರತಿ ವಿಷಯದ ಬಗ್ಗೆ ಕ್ಯೂ ಆರ್ ಕೋಡ್ ಸಹ ಮುದ್ರಿಸಿದ್ದು ವಿದ್ಯಾರ್ಥಿಗಳಿಗೆ ಯಾವುದಾದರೂ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ ಕ್ಯೂ ಆರ್ ಕೋಡ್ ಸ್ಕಾನ್ ಮಾಡಿದರೆ ವಿಡಿಯೋ ಸಮೇತ ಮಾಹಿತಿ ಲಭ್ಯವಾಗಲಿದೆ.

ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಮೊಕಾಶಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಝೀರ್, ವಕ್ಫ್ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಖಾನ್ ಫರ್ವೇಝ್ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು....

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ...