ಸಚಿವರ ಮಾತನಾಡುವ ಶೈಲಿ ನಮ್ಮ ಸಾವಿರಾರು ಮತಗಳನ್ನು ಹಾಳು ಮಾಡಿದೆ: ಬಿಜೆಪಿ ಶಾಸಕ

Date:

“ಸಚಿವರೊಬ್ಬರ ಮಾತಿನ ಶೈಲಿಯು ಲೋಕಸಭಾ ಚುನಾವಣೆಯ ಪಕ್ಷದ ಸಾವಿರಾರು ಮತಗಳನ್ನು ಹಾಳು ಮಾಡಿದೆ” ಎಂದು ಬಿಜೆಪಿ ಶಾಸಕ ಮೃಣಾಲ್ ಸೈಕಿಯಾ ಹೇಳಿದ್ದಾರೆ.

- Advertisement -

ಖುಮ್ಟೈ ಶಾಸಕರಾದ ಮೃಣಾಲ್ ಸೈಕಿಯಾ ಅವರು ಬಿಜೆಪಿ ಸಚಿವ ಜಯಂತ ಮಲ್ಲ ಬರುವಾ ಸಾರ್ವಜನಿಕವಾಗಿ ಪಕ್ಷದ ಒಳ ವಿಚಾರಗಳನ್ನು ಮಾತನಾಡುವುದನ್ನು ತಡೆಯುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಗೌರವಾನ್ವಿತ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೇ, ದಯವಿಟ್ಟು ಸಚಿವ ಜಯಂತ ಮಲ್ಲ ಬರುವಾ ಅವರಿಗೆ ಪಕ್ಷದ ವ್ಯವಹಾರಗಳ ಬಗ್ಗೆ ಮಾತನಾಡದಂತೆ ತಿಳಿಸಿ. ಈ 2024ರ ಚುನಾವಣೆಯಲ್ಲಿ ಅವರ ಮಾತಿನ ಶೈಲಿ ಈಗಾಗಲೇ ಅಸ್ಸಾಂನಲ್ಲಿ ಸಾವಿರಾರು ಮತಗಳನ್ನು ಹಾಳು ಮಾಡಿದೆ ಎಂಬುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು” ಎಂದು ಮೃಣಾಲ್ ಸೈಕಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಪಕ್ಷದ ಸೋಲಿಗೆ ಬಿಜೆಪಿಯನ್ನು ದೂಷಿಸಲಾಗದು: ಕಾಂಗ್ರೆಸ್ ನಾಯಕ

ಬಿಜೆಪಿ ಹಳೆಯ ನಾಯಕರುಗಳ ವಿರುದ್ಧವಾಗಿ ಜಯಂತ ಮಲ್ಲ ಬರುವಾ ಅವರು ಹೇಳಿಕೆಗಳನ್ನು ನೀಡಿದ್ದರು. ಪಕ್ಷಕ್ಕೆ ಸಮರ್ಪಣೆ ಅತ್ಯಂತ ಮುಖ್ಯವಾಗಿದ್ದು ನಮ್ಮ ನಾಯಕರು ಎಷ್ಟು ಸಮಯವನ್ನು ನೀಡುತ್ತಾರೆ ಎಂದು ಬರುವಾ ಬಹಿರಂಗವಾಗಿ ಪ್ರಶ್ನಿಸಿದ್ದರು.

ಪಕ್ಷದ ನಾಯಕತ್ವವನ್ನು ಸಾರ್ವಜನಿಕವಾಗಿ ಟೀಕಿಸಿದ್ದಕ್ಕಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಅಶೋಕ್ ಶರ್ಮಾ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು ಇದಾದ ಬಳಿಕ ಬರುವಾ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗಳು ಮತದಾನದ ದಿನದಂದು ಪಕ್ಷದ ವಿರುದ್ಧ ಮತದಾರರನ್ನು ಪ್ರಚೋದಿಸುತ್ತದೆ ಎಂದು ಬಿಜೆಪಿಯ ಇತರೆ ನಾಯಕರು ಆರೋಪಿಸಿದ್ದಾರೆ.

ಕೆಲವು ಸಮಯದಿಂದ ಅಸ್ಸಾಂನಲ್ಲಿ ಬಿಜೆಪಿ ತನ್ನ ಹಳೆಯ ಮತ್ತು ಹೊಸ ಕಾರ್ಯಕರ್ತರ ನಡುವಿನ ಘರ್ಷಣೆಯಿಂದ ಪ್ರಭಾವಕ್ಕೆ ಒಳಗಾಗಿದೆ. ಶರ್ಮಾ ಹಿರಿಯ ಬಿಜೆಪಿ ನಾಯಕರಾಗಿದ್ದರೆ, ಬರುವಾ ಈ ಹಿಂದೆ ಕಾಂಗ್ರೆಸ್‌ನಲ್ಲಿ ಇದ್ದವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...