ದೇಶಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಣಿಪುರದ ಮಹಿಳೆಯರ ಬೆತ್ತಲೆ ಮೆರವಣಿಗೆಯ ವೈರಲ್ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ಶಿಫಾರಸು ಮಾಡಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.
ಮಹಿಳೆಯರ ಬೆತ್ತಲೆ ಮೆರವಣಿಗೆ ಘಟನೆಯ 26 ಸೆಕೆಂಡುಗಳ ವೀಡಿಯೊ ಕಳೆದ ಜುಲೈ 19 ರಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು.
ಈ ವಿಡಿಯೋ ಮಾಡಿದ ವ್ಯಕ್ತಿ ಮತ್ತು ಮೊಬೈಲ್ ಅನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿಯೂ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಸಿಬಿಐಗೆ ವಹಿಸಲು ಆಸಕ್ತಿ ತೋರಿರುವುದಾಗಿ ತಿಳಿದು ಬಂದಿದೆ.