2025 ಮುಗಿಯುವುದರೊಳಗೆ ಸರ್ಕಾರದಲ್ಲಿ ಸಣ್ಣ ಪುಟ್ಟ ಬದಲಾವಣೆ ಖಚಿತ: ಸತೀಶ್ ಜಾರಕಿಹೊಳಿ

Date:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಹುದ್ದೆ ಸೇರಿದಂತೆ ನಾನು ಪಕ್ಷದ ಯಾವುದೇ ಹುದ್ದೆಗೆ ಪ್ರಯತ್ನ ಮಾಡಿಲ್ಲ. 2025 ಮುಗಿಯುವುದರೊಳಗಾಗಿ ರಾಜ್ಯ ರಾಜಕಾರಣದಲ್ಲಿ ಸಣ್ಣ ಬದಲಾವಣೆಗಳಾಗಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಎಲ್ಲಿದ್ದೇನೋ ಅಲ್ಲಿಯೇ ಇದ್ದೇನೆ. ನಮ್ಮನ್ನು ಪುಷ್ ಮಾಡೋರು ಯಾರೂ ಇಲ್ಲ. ವರ್ಷಾಂತ್ಯಕ್ಕೆ ಕಾಂಗ್ರೆಸ್‌ನಲ್ಲಿ ಬದಲಾವಣೆ ಆಗಲಿದೆ. ಹಾಗಂತ ದೊಡ್ಡ ಬದಲಾವಣೆ ಏನಿಲ್ಲ. ಸಚಿವರ ಬದಲಾವಣೆ ಆಗಲಿದೆ” ಎಂದು ಹೇಳುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂಬುದನ್ನು ಮಾರ್ಮಿಕವಾಗಿ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನ ನಡಿಸಿಲ್ಲ. ಪ್ರಯತ್ನ ನಡೆಸಿದ್ದರೆ ಮುಂದುವರೆಸಬಹುದು. ನಾನು ಎಲ್ಲಿದ್ದೆನೋ ಅಲ್ಲೇ ಇದ್ದೇನೆ. ದೆಹಲಿಗೆ ಹೋದ ಮೇಲೆ ಸಕ್ರಿಯವಾಗುವುದು ಸ್ವಾಭಾವಿಕ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ. ಯುದ್ಧ ಇದ್ದಾಗ ಶಸ್ತ್ರ ಹಿಡಿಯಬೇಕು. ಯುದ್ಧ ಇಲ್ಲದೇ ಇರುವಾಗ ಶಸ್ತ್ರ ಹಿಡಿಯುವ ಅಗತ್ಯ ಇಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರಸ್ಥರು ಅನ್ನ ತಿನ್ನುವವರೇ ಆದರೆ, ಭೂ ಸ್ವಾಧೀನ ಕೈಬಿಡಲಿ

“ಶಾಸಕ ಬಿ.ಆರ್. ಪಾಟೀಲ ಅವರ ಹೇಳಿಕೆ ವಿಚಾರವೂ ದೆಹಲಿಯಲ್ಲಿ ಚರ್ಚೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ವರಿಷ್ಠರು ಮಾತನಾಡಿದ್ದಾರೆ. ಅನುದಾನ, ವರ್ಗಾವಣೆ ಎಂದು ಹೇಳಲು ಆಗುವುದಿಲ್ಲ. ಕ್ಷೇತ್ರದಲ್ಲಿ ಬೇರೆ ಬೇರೆ ಸಮಸ್ಯೆಗಳು ಇರುತ್ತದೆ. ಶಾಸಕ ರಾಜು ಕಾಗೆ ಅವರು ಒಂದು ವರ್ಷದಿಂದ ನನ್ನ ಬಳಿಯೂ ಸಾಕಷ್ಟು ಹೇಳಿದ್ದಾರೆ. ಹಾಗೆಂದು, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಎಲ್ಲವನ್ನೂ ಸರಿ ಮಾಡುತ್ತಾರೆ” ಎಂದು ತಿಳಿಸಿದರು.

ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರದ ಬಗ್ಗೆ ಮಾತನಾಡಿ, “ಮೊದಲಿನಿಂದ ನೀರಾವರಿ ಸಮಸ್ಯೆ ಬಗ್ಗೆ ರಾಜು ಕಾಗೆ ಹೇಳುತ್ತಲೇ ಇದ್ದಾರೆ. ಇದು ಸಿಎಂ ಗಮನಕ್ಕೆ ಕೂಡ ಬಂದಿದೆ. ಈ ಬಗ್ಗೆ ಸಿಎಂ ಅವರು ಡಿಸಿಎಂ ಕರೆದು ಹೇಳ್ತಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಹಣವಿದೆ, ಹಣವಿಲ್ಲ ಅಂತ ಯಾರು ಹೇಳಿದ್ದು? ಬಾಕಿ ಬಿಲ್‌ಗಳು ಕೂಡ ಇದ್ದಾವೆ. ಸುಮಾರು 3 ವರ್ಷದಷ್ಟು ಬಿಲ್ ಬಾಕಿ ಇದ್ದೇ ಇರುತ್ತವೆ” ಎಂದರು.

ಸಚಿವ ಕೆ.ಎನ್. ರಾಜಣ್ಣ ನಾವು ಆಗಾಗ ಸೇರುತ್ತಲೇ ಇರುತ್ತೇವೆ. ಹುಲಿ ಯಾವತ್ತಿದ್ರೂ ಹುಲಿನೇ, ವಯಸ್ಸಾದ್ರೂ ಹುಲಿ ಹುಲಿನೇ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ನೋಡಿಕೊಂಡು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳ್ಳು. ಬಿಜೆಪಿ ಫಾರ್ಮುಲಾ ಬೇರೆ ನಮ್ಮದು ಬೇರೆ. ಅವರ ತತ್ವ, ಸಿದ್ಧಾಂತ ಬೇರೆ ನಮ್ಮದು ಬೇರೆ. ಬಿಜೆಪಿಗೂ ನಮಗೂ ವ್ಯತ್ಯಾಸ ಇದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...