ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು; ಅಧಿಕಾರಿಗಳಿಗೆ ಸಚಿವ ಜಮೀರ್ ಸೂಚನೆ

Date:

Advertisements

ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಸಚಿವರು, “ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ ಶಾಲೆ, ಕಾಲೇಜ್, ವಸತಿ ಶಾಲೆ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಯಾವುದೇ ಹಂತದಲ್ಲೂ ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಮುಖ್ಯವಾಗಿ ಉನ್ನತ ಶಿಕ್ಷಣದ ವೇಳೆ ಶಿಕ್ಷಣದಿಂದ ದೂರ ಸರಿಯದಂತೆ ನೋಡಿಕೊಳ್ಳಬೇಕು” ಎಂದು ಜಮೀರ್ ಅಹಮದ್ ತಿಳಿಸಿದರು.

“ರಾಜ್ಯದಲ್ಲಿರುವ 126 ಅಲ್ಪಸಂಖ್ಯಾತ ವಸತಿ ಶಾಲಾ ಕಾಲೇಜುಗಳ ಪೈಕಿ 29 ಬಾಡಿಗೆ ಕಟ್ಟಡದಲ್ಲಿವೆ. ಮುಂದಿನ ಒಂದು ವರ್ಷದಲ್ಲಿ ಎಲ್ಲವೂ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಣೆ ಮಾಡಬೇಕು. ಅಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಹೆಚ್ಚಿಸಬೇಕು. ನಿಗದಿತ ವಿದ್ಯಾರ್ಥಿಗಳಿಗಿಂತ ಬೇಡಿಕೆ ಹೆಚ್ಚಾಗಿದ್ದರೆ ಹೆಚ್ಚುವರಿ ಕಟ್ಟಡ ನಿರ್ಮಿಸಿ ವ್ಯವಸ್ಥೆ ಕಲ್ಪಿಸಬೇಕುʼʼ ಎಂದರು.

Advertisements

ಕೊಳೆಗೇರಿಗಳಲ್ಲೂ ಮುಸ್ಲಿಂ ಕಾಲೋನಿಗಳ ಅಭಿವೃದ್ಧಿ ಹೆಸರಿನಲ್ಲಿ ಬಿಲ್ ಪಾವತಿ ಆಗಿರುವ ಬಗ್ಗೆ ಹಾಗೂ ಬೆಂಗಳೂರಿನಲ್ಲಿಯೇ ಹೆಚ್ಚು ಅನುದಾನ ಬಳಕೆ ಆಗಿರುವ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗೋಡ್ಸೆ ಭಾರತದ ಸುಪುತ್ರ ಎನ್ನಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು: ಭೂಪೇಶ್ ಬಘೇಲ್ ಟೀಕೆ

“ಜಿಲ್ಲಾ ಹಾಗೂ ತಾಲೂಕು ಪ್ರವಾಸದ ಸಂದರ್ಭದಲ್ಲಿ ಪ್ರತಿ ಕಾಮಗಾರಿಯ ಪರಿಶೀಲನೆ ನಡೆಸುತ್ತೇನೆ. ಈ ವೇಳೆ ಯಾವುದೇ ಕಾಮಗಾರಿಗಳಲ್ಲಿ ದುರುಪಯೋಗ ಅಥವಾ ಲೋಪ ಕಂಡು ಬಂದರೆ ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿ ಯೋಜನೆಯಡಿ ಕಳೆದ 5 ವರ್ಷಗಳ ಕಾಮಗಾರಿಯಲ್ಲಿ ಗುತ್ತಿಗೆದಾರರಿಗೆ ಪಾವತಿಸಿದ ಹಣದ ಮಾಹಿತಿಯನ್ನು ವಿವರಿಸುವಂತೆ ಸಚಿವರು ಅಧಿಕಾರಿಗಳಿಗೆ ಕೇಳಿದರು.

ಮುಂದೆ ಕಾಲೋನಿಗಳ ಅಭಿವೃದ್ಧಿ ಪ್ರಸ್ತಾವನೆಗಳು ಬಂದರೆ ಸ್ಥಳಕ್ಕೆ ಹೋಗಿ ಆ ಕಾಮಗಾರಿಯ ಅಗತ್ಯದ ಬಗ್ಗೆ ಪರಿಶೀಲಿಸಬೇಕು. ಅದರ ವರದಿ ನೀಡಲು ತಜ್ಞರ ತಂಡ ರಚಿಸಬೇಕು ಎಂದು ತಿಳಿಸಿದ್ದಾರೆ.

ವಿದ್ಯಾಸಿರಿ ಯೋಜನೆಯಡಿ ಹಾಸ್ಟೆಲ್ ವ್ಯವಸ್ಥೆ ಸಿಗದ 18,800 ವಿದ್ಯಾರ್ಥಿಗಳಿಗೆ ವಾರ್ಷಿಕ 27 ಕೋಟಿ ರೂ. ಪಾವತಿಯಾಗುತ್ತಿದೆ. ಅದನ್ನು ತಪ್ಪಿಸಲು ಅಗತ್ಯ ಇರುವ ಕಡೆ ಹೊಸ ಹಾಸ್ಟೆಲ್ ಕಟ್ಟಡ ನಿರ್ಮಾಣ ಮಾಡಿ ಅದಕ್ಕೆ ಬೇಕಾದ ಜಾಗವನ್ನು ಗುರುತಿಸುವಂತೆ ಸಚಿವರು ನಿರ್ದೇಶನ ನೀಡಿದರು.

ಮೌಲಾನ ಅಜಾದ್ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕೆಲವೆಡೆ ಎರಡು ಅಂಕಿ ದಾಟದಿದ್ದರೂ ಶಿಕ್ಷಕರು ಹಾಗೂ ಸಿಬ್ಬಂದಿ ಹೆಚ್ಚುವರಿಯಾಗಿ ಇರುವ ಬಗ್ಗೆ ಪರಿಶೀಲಿಸಿ ಅಗತ್ಯ ಇರುವ ಕಡೆಗೆ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚಿಂತನೆ ನಡೆಸುವಂತೆ ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X