ತನಿಖಾ ಸಂಸ್ಥೆಗಳ ದುರ್ಬಳಕೆ; ಕೇಂದ್ರದ ವಿರುದ್ಧ ಜುಲೈ 1ರಂದು ಸಂಸತ್‌ನಲ್ಲಿ ‘ಇಂಡಿಯಾ’ ಪ್ರತಿಭಟನೆ

Date:

ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಿಬಿಐ ಮತ್ತು ಇಡಿಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಆ ಮೂಲಕ ವಿಪಕ್ಷಗಳನ್ನು ಹತ್ತಿಕ್ಕುವ ತಂತ್ರ ನಡೆಸುತ್ತಿದ್ದಾರೆ ಎಂಬ ಆರೋಪ ಕೆಲವು ವರ್ಷಗಳಿಂದ ಕೇಳಿಬರುತ್ತಿದೆ. ಇದೀಗ, ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ವಿರುದ್ಧ ಇಂಡಿಯಾ ಒಕ್ಕೂಟದ ನಾಯಕರು ಜುಲೈ 1ರ ಸೋಮವಾರ ಸಂಸತ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್ ಹೇಳಿದ್ದಾರೆ.

- Advertisement -

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ. ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಮೋದಿ ನಕಲಿ ಕೇಸ್ ಹಾಕುತ್ತಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯಿಂದ ಹಿಡಿದು ಮಮತಾ ಬ್ಯಾನರ್ಜಿ, ಡಿಎಂಕೆ ನಾಯಕರವರೆಗೂ ಪ್ರತಿ ವಿರೋಧ ಪಕ್ಷದ ನಾಯಕರ ವಿರುದ್ಧ ಸಿಬಿಐ ಮತ್ತು ಇಡಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ತನಿಖೆ ನಡೆಸುತ್ತಿದೆ. ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಬಂಧಿಸಿದ್ದಾರೆ. ಯಾರು ವಿರುದ್ಧವಾಗಿ ಮಾತನಾಡುತ್ತಾರೋ ಮತ್ತು ಬಿಜೆಪಿಗೆ ಸೇರಲು ನಿರಾಕರಿಸುತ್ತಾರೋ ಅವರ ವಿರುದ್ಧ ಇಡಿ ಮತ್ತು ಸಿಬಿಐ ದಾಳಿ ಮಾಡುತ್ತವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮೋದಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಚರ್ಚಿಸಲು ನಡೆದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ‘ಇಂಡಿಯಾ’ ಒಕ್ಕೂಟದ ನಾಯಕರು ಬಿಜೆಪಿ ವಿರುದ್ಧ ಸಂಸತ್ತಿನ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.

“ಸಿಬಿಐ ಮತ್ತು ಇಡಿ ಕೂಡ ಸುಪ್ರೀಂ ಕೋರ್ಟ್ ಅನ್ನು ದಾರಿ ತಪ್ಪಿಸುತ್ತಿವೆ. ರೂಸ್ ಅವೆನ್ಯೂ ಕೋರ್ಟ್ ತನ್ನ ಆದೇಶದಲ್ಲಿ ‘ಅರವಿಂದ್ ಕೇಜ್ರಿವಾಲ್ ವಿರುದ್ಧ ಇಡಿ ಯಾವುದೇ ಸಾಕ್ಷ್ಯವನ್ನು ಒದಗಿಸಿಲ್ಲ. ತನಿಖಾ ಸಂಸ್ಥೆಯು ದುರುದ್ದೇಶಪೂರಿತ ಉದ್ದೇಶದಿಂದ ಕೆಲಸ ಮಾಡುತ್ತಿದೆ’ ಎಂದು ಹೇಳಿದೆ. ಇಡಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಯಾವುದೇ ಹಣದ ಜಾಡನ್ನು ಪತ್ತೆ ಮಾಡಿಲ್ಲ. ಯಾವುದೇ ಪುರಾವೆಗಳನ್ನು ಕಲೆ ಹಾಕಿಲ್ಲ. ಅಲ್ಲದೆ, ಯಾವುದೇ ಅಕ್ರಮ ಹಣವನ್ನು ವಸೂಲಿ ಮಾಡಿಲ್ಲ. ಹಾಗಾಗಿ ಅರವಿಂದ್ ಕೇಜ್ರಿವಾಲ್ ನಿರಪರಾಧಿ” ಎಂದು ಸಿಂಗ್‌ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...