ತನಿಖಾ ಸಂಸ್ಥೆಗಳ ದುರ್ಬಳಕೆ; ಸುಪ್ರೀಂ ಕೋರ್ಟ್‌ ಕದ ತಟ್ಟಿದ 14 ವಿಪಕ್ಷಗಳು

Date:

  • ತನಿಖಾ ಸಂಸ್ಥೆಗಳ ಮಾರ್ಗಸೂಚಿ ಸ್ಪಷ್ಟಪಡಿಸುವಂತೆ ಮನವಿ
  • ವಿಪಕ್ಷಗಳ ನಾಯಕರಿಗೆ ತನಿಖಾ ಸಂಸ್ಥೆಗಳ ಮೂಲಕ ಬೆದರಿಕೆ

ಕೇಂದ್ರಿಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಏಪ್ರಿಲ್ 5ರಂದು ಸುಪ್ರೀಂಕೋರ್ಟ್ ಪ್ರಕರಣದ ವಿಚಾರಣೆ ನಡೆಸಲಿದೆ.

ಕೇಂದ್ರ ಸರ್ಕಾರವು ಕಳೆದ ಕೆಲ ವರ್ಷಗಳಿಂದ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳ ನಾಯಕರು ಆರೋಪ ಹೊರಿಸುತ್ತಿದ್ದರು. ಆದರೆ, ಇದೀಗ ಸರ್ವೋಚ್ಛ ನ್ಯಾಯಾಲಯದ ಕದ ತಟ್ಟಿದ್ದಾರೆ.

“ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯದಂತಹ (ಇಡಿ) ಸಂಸ್ಥೆಗಳು ಬಿಜೆಪಿಯ ವಿರೋಧಿಗಳನ್ನು ಮಾತ್ರ ಗುರಿಯಾಗಿಸಿವೆ. ವಿರೋಧ ಪಕ್ಷಗಳ ನಾಯಕರಿಗೆ ತನಿಖಾ ಸಂಸ್ಥೆಗಳ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಸಂಸ್ಥೆಗಳಿಗೆ ಹೆದರಿ ನಾಯಕರು ಬಿಜೆಪಿ ಸೇರ್ಪಡೆಯಾದರೆ ಅವರ ಪ್ರಕರಣಗಳನ್ನು ಕೈಬಿಡಲಾಗುತ್ತಿದೆ” ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಜನತಾ ದಳ(ಯು), ಭಾರತ್ ರಾಷ್ಟ್ರ ಸಮಿತಿ, ರಾಷ್ಟ್ರೀಯ ಜನತಾ ದಳ, ಸಮಾಜವಾದಿ ಪಕ್ಷ, ಶಿವಸೇನೆ (ಉದ್ಧವ್ ಠಾಕ್ರೆ ಬಣ), ನ್ಯಾಷನಲ್ ಕಾನ್ಫರೆನ್ಸ್, ನ್ಯಾಶನಲಿಸ್ಟ್ ಕಾಂಗ್ರೆಸ್‌, ಎಡಪಕ್ಷಗಳು ಹಾಗೂ ಡಿಎಂಕೆ ಒಟ್ಟಾಗಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿವೆ.

ವಿರೋಧ ಪಕ್ಷಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಮಿತಿ ಏಪ್ರಿಲ್‌ 5ರಂದು ಪ್ರಕರಣದ ವಿಚಾರಣೆಯನ್ನು ಪಟ್ಟಿ ಮಾಡಿದೆ.

“ತನಿಖೆ ನಡೆಸುತ್ತಿರುವ ಶೇ.90ರಷ್ಟು ಪ್ರಕರಣಗಳು ವಿರೋಧ ಪಕ್ಷದ ನಾಯಕರ ಮೇಲಿವೆ. ಆದ್ದರಿಂದ, ತನಿಖಾ ಸಂಸ್ಥೆಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟಪಡಿಸಬೇಕು” ಎಂದು ಮನು ಸಿಂಘ್ವಿ ಹೇಳಿದ್ದಾರೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

ಕೋಟಕ್ ಮಹೀಂದ್ರ ಬ್ಯಾಂಕ್‌ನ ಹೊಸ ಗ್ರಾಹಕರ ಸೇರ್ಪಡೆ, ಕ್ರೆಡಿಟ್ ಕಾರ್ಡ್‌ಗೆ ನಿಷೇಧವೇರಿದ ಆರ್‌ಬಿಐ

ಕೋಟಕ್‌ ಮಹೀಂದ್ರ ಬ್ಯಾಂಕ್‌ ನ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ಗಳ ಮೂಲಕ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...