ಬಿಜೆಪಿಯಿಂದ ರಾಜಭವನ ದುರ್ಬಳಕೆ, ನಮ್ಮ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಪ್ರಯತ್ನ: ಸಿದ್ದರಾಮಯ್ಯ

Date:

ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಆರೋಪಿಸಿದರು.

- Advertisement -

ಅವರು ಇಂದು (ಆ.2) ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಶೋಕಾಸ್ ನೋಟಿಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ. ಸಂವಿಧಾನಕ್ಕೆ ವಿರುದ್ಧವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕೇಂದ್ರ ಸರ್ಕಾರವು ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ನೋಟಿಸನ್ನು ಹಿಂಪಡೆಯಬೇಕೆಂದು ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರ ಮಾಡಲಾಗಿದೆ” ಎಂದು ಹೇಳಿದರು.

ಯಾವುದೇ ಅಪರಾಧ ಮಾಡಿಲ್ಲ

“ಕೆ ಜೆ ಅಬ್ರಹಾಂ ಒಬ್ಬ ಬ್ಲಾಕ್ ಮೇಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ. 26-7.2024 ರಂದು 11.30ಕ್ಕೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟಿಸ್‌ ಕೊಡುವಾಗ ಎಲ್ಲ ಕಾನೂನನ್ನು ಕೂಲಂಕುಷವಾಗಿ ಪರಿಶೀಲಿಸಬೇಕು” ಎಂದರು.

ಕಳೆದ ಸರ್ಕಾರದ ಸಚಿವರ ಮೇಲಿನ ದೂರಿನ ಬಗ್ಗೆ ಕ್ರಮ ಏಕಿಲ್ಲ?

“ಶಶಿಕಲಾ ಜೊಲ್ಲೆ , ಮುರುಗೇಶ್ ನಿರಾಣಿ , ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ಏನೂ ಇಲ್ಲದೆ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ ಅನ್ನಿಸುತ್ತೆ” ಎಂದು ಹೇಳಿದರು.

ಆರ್.ಅಶೋಕ್ ಹೆದರಿರಬೇಕು

ರಾಜ್ಯಪಾಲರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹೆದರಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು. ಕಾನೂನಿನ ರೀತಿ ಅವರು ನೋಟಿಸ್‌ ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪೇ ಮಾಡಿಲ್ಲ” ಎಂದರು.

ಕುಮಾರಸ್ವಾಮಿ ಸ್ವ-ಇಚ್ಛೆ ಯಿಂದ ಪಾದಯಾತ್ರೆ ಮಾಡುತ್ತಿಲ್ಲ

“ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ಅಭ್ಯಂತರವಿಲ್ಲ. ಹೆಚ್ ಡಿ ಕುಮಾರಸ್ವಾಮಿ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದಿದ್ದಾರೆ. ಕುಮಾರಸ್ವಾಮಿ ಸ್ವ ಇಚ್ಛೆಯಿಂದ ಪಾದಯಾತ್ರೆ ಮಾಡುತ್ತಿಲ್ಲ ಎಂದಾಯಿತು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...