ಸನಾತನ ಧರ್ಮ ಡೆಂಗ್ಯೂ, ಮಲೇರಿಯಾದಂತೆ; ನಿರ್ಮೂಲನೆ ಮಾಡಬೇಕು: ವಿವಾದದ ಕಿಡಿ ಹೊತ್ತಿಸಿದ ಉದಯನಿಧಿ ಸ್ಟಾಲಿನ್

Date:

  • ‘ಸನಾತನ ಧರ್ಮ ಪಾಲಿಸುವ 80 ಶೇ.ಜನರ ನರಮೇಧಕ್ಕೆ ಕರೆ’ ಎಂದು ಆರೋಪಿಸಿದ ಬಿಜೆಪಿ
  • ಡಿಎಂಕೆ ಸಚಿವ ಹಾಗೂ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌

“ಸನಾತನ ಧರ್ಮ ಎಂಬುದು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂದು ತಮಿಳುನಾಡಿನ ಸಚಿವ, ಸಿಎಂ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಹೇಳಿಕೆ ನೀಡಿದ್ದು, ವಿವಾದದ ಕಿಡಿ ಹೊತ್ತಿಸಿದೆ.

- Advertisement -

ಚೆನ್ನೈನಲ್ಲಿ ನಡೆದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ ತಮಿಳುನಾಡಿನ ಯುವಜನ ಮತ್ತು ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್, “ಸನಾತನ ಧರ್ಮವನ್ನು ವಿರೋಧಿಸುವುದು ಮಾತ್ರವಲ್ಲ, ಅದನ್ನು ನಿರ್ಮೂಲನೆ ಮಾಡಬೇಕು. ಸನಾತನ ಕಲ್ಪನೆಯು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಸ್ಟಾಲಿನ್‌ ಅವರ ಈ ಹೇಳಿಕೆಗೆ, ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಟೀಕಿಸಿರುವ ಬಲಪಂಥೀಯ ಸಂಘಟನೆಯ ಹಲವರು, ತಮಿಳುನಾಡು ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕರೆ ನೀಡಿದ್ದಾರೆ.

“ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್’ ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಪಕ್ಷವಾದ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನ ಮೌನವು ಈ ನರಮೇಧದ ಕರೆಗೆ ಬೆಂಬಲವಾಗಿದೆ. ಭಾರತ ಒಕ್ಕೂಟವು ಅದರ ಹೆಸರಿಗೆ ನಿಜವಾದ ಅವಕಾಶವನ್ನು ನೀಡಿದರೆ, ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ. ಅದು I.N.D.I.A” ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟ್ವಿಟರ್‌ನಲ್ಲಿ ಉದಯನಿಧಿ ಸ್ಟಾಲಿನ್ ವಿಡಿಯೋ ಹಂಚಿಕೊಂಡಿರುವ ಅಮಿತ್ ಮಾಳವೀಯ, ಸನಾತನ ಧರ್ಮ ಪಾಲಿಸುವ 80 ಶೇ.ಜನರ ನರಮೇಧಕ್ಕೆ ಕರೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್, “ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ. ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ” ಎಂದು ತಮ್ಮ ಹೇಳಿಕೆಯ ಪ್ರತಿಯೊಂದು ಪದವನ್ನು ಸಮರ್ಥಿಸುತ್ತೇನೆ ಎಂದು ಹೇಳಿದ್ದಾರೆ.

“ಸನಾತನ ಧರ್ಮ ಮತ್ತು ಸಮಾಜದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ವ್ಯಾಪಕ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧನಿದ್ದೇನೆ. ನಾನು ಭಾಷಣದಲ್ಲಿ ಹೇಳಿದ ಅಂಶಗಳನ್ನು ಪುನರುಚ್ಚರಿಸುತ್ತೇನೆ. ಕೋವಿಡ್-19, ಸೊಳ್ಳೆಗಳಿಂದ ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳು ಹರಡುವಂತೆ, ಸನಾತನ ಧರ್ಮವು ಅನೇಕ ಸಾಮಾಜಿಕ ಅನಿಷ್ಟಗಳಿಗೆ ಕಾರಣವಾಗಿದೆ ಎಂದು ನಾನು ನಂಬುತ್ತೇನೆ” ಎಂದು ಉದಯ ನಿಧಿ ಸ್ಟ್ಯಾಲಿನ್ ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಲಂಡನ್ ವಿಮಾನ ಏರದಂತೆ ಸಿಜೆಪಿ ನಾಯಕ ಸೌರವ್ ದಾಸ್ ತಡೆದ ವಲಸೆ ಅಧಿಕಾರಿಗಳು!

ಬ್ರಿಟನ್‌ನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸ ನೀಡಲು ತೆರಳುತ್ತಿದ್ದ 'ಕಾಕ್ರೋಚ್ ಜನತಾ ಪಾರ್ಟಿ'...

ತಂದೆ ಹತ್ಯೆಯಾಗಲೆಂದೇ ಭದ್ರತೆ ಹಿಂಪಡೆಯಲಾಗಿತ್ತು: ರಾಹುಲ್ ಗಾಂಧಿ ಗಂಭೀರ ಆರೋಪ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭದ್ರತೆಯನ್ನು ಹಿಂಪಡೆದಿದ್ದು ಆಕಸ್ಮಿಕವಲ್ಲ, ಬದಲಾಗಿ ಅವರ...