ಶಾಸಕ ಮುನಿರತ್ನ ಎಸ್‌ಐಟಿ ಕಸ್ಟಡಿ ಇಂದು ಅಂತ್ಯ, ಮತ್ತೊಮ್ಮೆ ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆ

Date:

Advertisements

ಅತ್ಯಾಚಾರ ಪ್ರಕರಣದಲ್ಲಿ ಸಿಐಡಿ ಎಸ್‌ಐಟಿ ಕಸ್ಟಡಿಯಲ್ಲಿರುವ ಆರ್ ಆರ್ ನಗರ ಶಾಸಕ ಮುನಿರತ್ನ
ಎಸ್‌ಐಟಿ ಕಸ್ಟಡಿ ಶನಿವಾರ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಮತ್ತೂಮ್ಮೆ ಆರೋಪಿಯನ್ನು ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಶಾಸಕ ಮುನಿರತ್ನ ಡಿಎನ್‌ಎ ಪರೀಕ್ಷೆ ಕುರಿತ ಅರ್ಜಿ ಹಾಗೂ ಜಾಮೀನು ಅರ್ಜಿ ವಿಚಾರಣೆಗಳನ್ನು ಶುಕ್ರವಾರ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿ, ಅ. 8ಕ್ಕೆ ಮುಂದೂಡಿದೆ.

42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮುನಿರತ್ನ ಡಿಎನ್‌ಎ ಪರೀಕ್ಷೆ ಕುರಿತು ಶುಕ್ರವಾರ ವಿಚಾರಣೆ ನಡೆಯಿತು. ಈ ವೇಳೆ ಆರೋಪಿ ಪರ ವಕೀಲ ಬಸವರಾಜು, ಡಿಎನ್‌ಎ ಟೆಸ್ಟ್‌ ಗೆ ಮುನಿರತ್ನ ರಕ್ತ ಮಾದರಿ ತೆಗೆದುಕೊಳ್ಳಲು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ನ್ಯಾಯಾಧೀಶರು, ಎಸ್‌ಐಟಿಗೆ ಸ್ಟೇಷನ್ ಪವ‌ರ್ ಇಲ್ಲವೇ, ಈ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಎಸ್‌ಪಿಪಿಗೆ ಪ್ರಶ್ನಿಸಿದರು. ಆಗ ಎಸ್‌ಪಿಪಿ ಪ್ರದೀಪ್, ಮಂಗಳವಾರ ಸ್ಪಷ್ಟಿಕರಣ ನೀಡುವುದಾಗಿ ಕಾಲಾವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಕೋರ್ಟ್ ಮಂಗಳವಾರಕ್ಕೆ ವಿಚಾರಣೆ ಮುಂದೂಡಿತು.

Advertisements

ಇನ್ನು 823 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದ ಮುನಿರತ್ನ ಜಾಮೀನು ಅರ್ಜಿ ವಿಚಾರಣೆಯನ್ನೂ ಮುಂದೂಡಲಾಗಿದೆ. ಮಂಗಳವಾರಕ್ಕೆ ಎಚ್‌ಐವಿ ಸೋಂಕಿತೆ ಬಗ್ಗೆ ಕೋರ್ಟ್‌ಗೆ ಮಾಹಿತಿ ಮತ್ತೂಂದೆಡೆ ಅತ್ಯಾಚಾರ ಸಂತ್ರಸ್ತೆ ದೂರಿನಲ್ಲಿ ಮುನಿರತ್ನ ಎಚ್‌ಐವಿ ಟ್ರ್ಯಾಪ್ ಬಗ್ಗೆ ಪ್ರಸ್ತಾವಿಸಿದ್ದಾರೆ. ಈ ಸಂಬಂಧ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದ ಎಚ್‌ಐವಿ ಸೋಂಕಿತೆಯನ್ನು ಪತ್ತೆ ಹಚ್ಚಿದ್ದಾರೆ.

ಈಕೆಯನ್ನು ಶೀಘ್ರದಲ್ಲೇ ವೈದ್ಯಕೀಯ ಪರೀಕ್ಷೆ ಒಳಡಿಸಿ, ಬಳಿಕ ಹೇಳಿಕೆ ದಾಖಲಿಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಆರೋಪಿ ಮುನಿರತ್ನನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯದ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಿ, ಆರೋಪಿಯನ್ನು ಮತ್ತೆ ಕಸ್ಟಡಿಗೆ ಕೇಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X