ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾದ ಶಾಸಕ ಸುನಿಲ್‌ ಕುಮಾರ್‌

Date:

Advertisements

ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟದ ನಡುವೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಸಂಬಂಧ ಸ್ವತಃ ವಿ. ಸುನೀಲ್ ಕುಮಾರ್ ಅವರೇ ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್​ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

Advertisements

ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್‌ ಜಾರಕಿಹೊಳಿ​ ಬಣಗಳ ನಡುವಿನ ವಿರಸ ಹೆಚ್ಚಾಗಿದ್ದು,ನಾಯಕರುಗಳು ತಮ್ಮ ತಮ್ಮಲ್ಲೇ ವಾಗ್ದಾಳಿ ಮುಂದುವರಿಸಿದ್ದಾರೆ. ಈ ಮಧ್ಯ ಪಕ್ಷದಲ್ಲಿ ಇಂತಹದ್ದೊಂದು ಬೆಳವಣಿಗೆ ನಡೆದಿದೆ.

ಈ ಹಿಂದೆ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಹುದ್ದೆಯಿಂದ ಇಳಿದ ಬಳಿಕ ಹೈಕಮಾಂಡ್​ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿತ್ತು.ಅದರಂತೆ ಸುನಿಲ್​ ಕುಮಾರ್​ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ್ದರು. ಆದರೆ ಸುನಿಲ್ ಕುಮಾರ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯಲು ಮುಂದಾಗಿದೆ ಎನ್ನಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಪಕ್ಷದ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸಲು ಮನವಿ ಮಾಡಿಕೊಂಡಿದ್ದು, ಇದಕ್ಕೂ ಮುಂಚೆ ಮೌಖಿಕವಾಗಿ ಕೋರಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಪಕ್ಷದ ಬಣ ಬಡಿದಾಟ ಕಾರಣವಲ್ಲ, ವೈಯಕ್ತಿಕ ಕಾರಣಕ್ಕೆ ಪ್ರ‍್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಾಮಾನ್ಯವಾಗಿ ನಾಲ್ವರು ಪ್ರಮುಖರನ್ನು ಮಾತ್ರ ನಿಯೋಜನೆ ಮಾಡಲಾಗುತ್ತದೆ. ಸದ್ಯ ಸುನೀಲ್ ಕುಮಾರ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ ಹಾಗೂ ಪಿ.ರಾಜೀವ್ ಈ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

ಧರ್ಮಸ್ಥಳ ಪ್ರಕರಣ | ಬಿಜೆಪಿಯವರು ನ್ಯಾಯಕ್ಕಾಗಿ ಧ್ವನಿ ಎತ್ತಿದ್ದಕ್ಕಿಂತ ವಿತಂಡವಾದದಲ್ಲಿ ಮುಳುಗಿದ್ದೇ ಹೆಚ್ಚು!

ಧರ್ಮಸ್ಥಳದಲ್ಲಿ ಅನ್ಯಾಯವಾಗಿ ಶವವಾಗಿರುವ ಅದೆಷ್ಟೋ ಜನರು ಹಿಂದುಗಳು ಎನ್ನಲಾಗುತ್ತಿದೆ. ಹಿಂದೂ ಧರ್ಮದ...

Download Eedina App Android / iOS

X