ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್ ಆಂಜನೇಯನಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಆಂಜನೇಯಪ್ಪನವರಿಗೆ ಸಿದ್ದರಾಮಯ್ಯ ಪೂಜ್ಯ ದೇವರು. ಹೀಗಾಗಿ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂ-ಕರ್ಯಗಳು ನಡೆಯಲಿ” ಎಂದು ಲೇವಡಿ ಮಾಡಿದ್ದಾರೆ.
“ಹಿಂದೂಗಳ ಆರಾಧ್ಯ ದೈವ ಶ್ರೀರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ” ಎಂದು ಯತ್ನಾಳ್ ಎಚ್ಚರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು
ಏನಿದು ವಿವಾದ
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತಾದ ಚರ್ಚೆಗೆ ಚಿತ್ರದುರ್ಗದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, “ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು” ಎಂದು ಪ್ರಶ್ನಿಸಿದ್ದರು.