ಯಡಿಯೂರಪ್ಪ, ವಿಜಯೇಂದ್ರಗೆ ನೇರ ಎಚ್ಚರಿಕೆ ನೀಡಿದ ಶಾಸಕ ಯತ್ನಾಳ್

Date:

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -

ವಿಜಯಪುರ ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, “ನನ್ನನ್ನು ಮುಗಿಸಲು ಏನೇನು ಕುತಂತ್ರ ಮಾಡಿದ್ದಾರೆ ಎನ್ನುವುದು ನನಗೆ ಚೆನ್ನಾಗಿ ಗೊತ್ತಿದೆ. ಸುಮ್ಮನೆ ಇದ್ದರೆ ಲೇಸು, ಇಲ್ಲವಾದರೆ ನಮಗೂ ಆಟ ಆಡಲು ಬರುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

“ಯಡಿಯರಪ್ಪ, ವಿಜಯೇಂದ್ರ ವಿರುದ್ಧ ಬಹಳ ದೊಡ್ಡ ಮಟ್ಟದಲ್ಲಿ ಅಸಮಾಧಾನದ ಅಲೆ ಸದ್ಯದಲ್ಲೇ ಏಳಲಿದೆ. ಸೋತ ಎಂಪಿಗಳು ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ. ಅಲ್ಲಲ್ಲಿ ಆಟಂಬಾಂಬ್ ಗಳು ಬೀಳುತ್ತಿವೆ. ದಾವಣಗೆರೆಯಲ್ಲಿ ನಿನ್ನೆ ಬಿದ್ದಿದೆ” ಎಂದರು.

“ಮುಂದೆ ಕೊಪ್ಪಳದಲ್ಲಿ ಬೀಳುತ್ತದೆ. ನಂತರ ಬಳ್ಳಾರಿ, ಆಮೇಲೆ ರಾಯಚೂರು. ಎಲ್ಲೆಲ್ಲಿ ಸೋತಿದ್ದಾರಲ್ಲ, ಅದಕ್ಕೆ ಕಾರಣ ಯಾರು ಎನ್ನುವುದನ್ನು ವಿಜಯೇಂದ್ರ ಹೇಳಬೇಕು. ಯತ್ನಾಳ್ ಹಿರಿಯರು ಎನ್ನುವ ಡೈಲಾಗ್ ಎಲ್ಲ ಬಿಟ್ಟುಹಾಕಿ. ನನ್ನ ಜೊತೆ ಆಟವಾಡಲು ಬಂದರೆ ನಾನೂ ಆಟವಾಡುವೆ” ಎಂದು ಎಚ್ಚರಿಸಿದ್ದಾರೆ.

“ಬಿಜೆಪಿಯ ಶುದ್ಧೀಕರಣ ಆಗಬೇಕಿದೆ. ಈಶ್ವರಪ್ಪನವರಿಗೆ ಅನ್ಯಾಯ ಮಾಡಿದರು. ಅವರು ಏನು ತಪ್ಪು ಮಾಡಿದ್ದರು. ಆರೋಪ ಬಂದಾಗ ರಾಜೀನಾಮೆ ಕೊಟ್ಟಿದ್ದರು. ಪ್ರಧಾನ ಮಂತ್ರಿಯವರ ಒಂದೇ ಮಾತಿಗೆ ಬೆಲೆ ಕೊಟ್ಟು ವಿಧಾನಸಭಾ ಚುನಾವಣೆಗೆ ಅವರು ನಿಂತಿರಲಿಲ್ಲ. ಪಕ್ಷಕ್ಕಾಗಿ ಕೆಲಸ ಮಾಡಿದರು. ಆದರೆ ಈಶ್ವರಪ್ಪ ಹಾಗೂ ಒಳ್ಳೆಯವರನ್ನೆಲ್ಲಾ ಹೊರಗೆ ಹಾಕಿದ್ದಾರೆ. ಒಂದು ಕುಟುಂಬದ ಪಕ್ಷವಾಗಲು ನಾನಂತೂ ಬಿಡುವುದಿಲ್ಲ” ಎಂದು ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿ ವಿಜಯೇಂದ್ರ ಅವರ ವರ್ತನೆಯ ವಿರುದ್ಧವೂ ಅವರು ಹರಿಹಾಯ್ದರು. ಸಿದ್ದರಾಮಯ್ಯ ಒಬ್ಬರನ್ನೇ ಟಾರ್ಗೆಟ್ ಮಾಡಬೇಡಿ. ಸಿದ್ದರಾಮಯ್ಯ ವಿರುದ್ಧ ಹೋರಾಟವಲ್ಲ. ಕಾಂಗ್ರೆಸ್ ವಿರುದ್ಧ ಹೋರಾಟ ಎಂದು ವಿಜಯೇಂದ್ರ ಅವರು ಹೇಳುತ್ತಾರೆ. ಹಾಗಿದ್ದರೆ ಸಿದ್ದರಾಮಯ್ಯನವರು ಬಿಜೆಪಿನಾ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...