ಶಾಸಕ ಜಮೀರ್‌ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ : ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Date:

  • ಎಫ್‌ಐಆರ್‌ ರದ್ದು ಮಾಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಜಮೀರ್
  • ನ್ಯಾ. ಕೆ ನಟರಾಜನ್ ನೇತೃತ್ವದ ಏಕಸದಸ್ಯ ಪೀಠದಿಂದ ಅರ್ಜಿ ವಿಚಾರಣೆ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಶಾಸಕ ಜಮೀರ್‌ ಅಹಮದ್‌ ಅವರು ತಮ್ಮ ಮೇಲೆ ‘ಎಸಿಬಿ’ಯಲ್ಲಿ ದಾಖಲಿಸಿರುವ ಎಫ್‌ಐಆರ್ ಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.

- Advertisement -

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪದ ಬಂದ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರ ಮನೆ ಮೇಲೆ ಎಸಿಬಿಯು 2022ರ ಮೇನಲ್ಲಿ ದಾಳಿ ಮಾಡಿ, ಆದಾಯ ಮೀರಿ 87 ಕೋಟಿ ರೂಪಾಯಿ ಹೆಚ್ಚುವರಿ ಆಸ್ತಿ ಮಾಡಿದ್ದಾರೆ ಎಂಬ ಆರೋಪದ ಹೊರಿಸಿ, ಎಫ್‌ಐಆರ್ ದಾಖಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಮೀರ್ ಅಹಮದ್‌ ಖಾನ್ ಅವರು ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಹಾಗೂ ಅರ್ಜಿ ಇತ್ಯರ್ಥ ಆಗುವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣ ನಡೆಯುವ ವೇಳೆ ಕರ್ನಾಟಕ ಹೈಕೋರ್ಟ್ ಎಸಿಬಿ ರಚನೆಯನ್ನೇ ರದ್ದುಪಡಿಸಿದ್ದರಿಂದ ಎಸಿಬಿಯು ದಾಖಲಿಸಿದ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆ ಮುಂದುವರಿಸುತ್ತಿತ್ತು.

ಜಮೀರ್ ಪರ ವಾದ ಮಂಡಿಸಿದ ವಕೀಲ ಇಸ್ಮಾಯಿಲ್ ಜಬೀವುಲ್ಲಾ, “ಯಾವುದೇ ಒಬ್ಬ ವ್ಯಕ್ತಿಯ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಬಂದಾಗ ತನಿಖಾ ಸಂಸ್ಥೆಯು ಪ್ರಾಥಮಿಕ ವಿಚಾರಣೆ ನಡೆಸಿ, ಆನಂತರ ಎಫ್‌ಐಆರ್ ದಾಖಲಿಸುವುದು ಕಡ್ಡಾಯವೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ಈ ಪ್ರಕರಣದಲ್ಲಿ ನಮ್ಮ ಕಕ್ಷಿದಾರ ಜಮೀರ್‌ ಅವರ ಮೇಲೆ ಎಸಿಬಿಯು ನೇರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ” ಎಂದು ವಾದ ಮಂಡಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಡಿ ಕೆ ಶಿವಕುಮಾರ್ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ : ರಾಜ್ಯ ಪ್ರಾಸಿಕ್ಯೂಷನ್‌ ವಿರುದ್ಧ ಹೈಕೋರ್ಟ್‌ ಅಸಮಾಧಾನ

ಮುಂದುವರೆದು, “ಅರ್ಜಿದಾರರಾದ ಜಮೀರ್ ಅವರು ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಆರೋಪಿಸಿ ಜಾರಿ ನಿರ್ದೇಶನಾಲಯವು (ಇಡಿ) ಎಸಿಬಿಗೆ ವರದಿ ನೀಡಿತ್ತು. ಇದರ ಆಧಾರದ ಮೇಲೆ ಎಸಿಬಿ ಎಫ್‌ಐಆರ್ ದಾಖಲಿಸಿರುವುದರಿಂದ ಇದು ಕಾನೂನು ಬಾಹಿರ ಕ್ರಮವಾಗಿದ್ದು, ಕೂಡಲೇ ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು” ಎಂದು ಮನವಿ ಮಾಡಿಕೊಂಡಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಲೋಕಾಯುಕ್ತ ಪರ ವಕೀಲರು, “ಅಕ್ರಮವಾಗಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸುವುದು ಅಗತ್ಯವೇನಲ್ಲ, ಆದ್ದರಿಂದ ಈ ಪ್ರಕರಣದಲ್ಲಿ ಎಸಿಬಿಯು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮ ಕಾನೂನುಬದ್ಧವಾಗಿಯೇ ಇದ್ದು, ಇದಕ್ಕೆ ಯಾವುದೇ ಕಾರಣಕ್ಕೂ ತಡೆ ನೀಡಬಾರದು” ಎಂದು ತಿಳಿಸಿದ್ದರು.

ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಕೆ ನಟರಾಜನ್ ನೇತೃತ್ವದ ಏಕಸದಸ್ಯ ಪೀಠವು ಎರಡೂ ಕಡೆಯವರ ವಾದ-ಪ್ರತಿವಾದವನ್ನು ಆಲಿಸಿ, ಆದೇಶವನ್ನು ಕಾಯ್ದಿರಿಸಿದೆ.

a1b8f011336c8b30aec8eb65b1fdef709a9ae9be2d3f6e92a0d93ac3d2ff3a42?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....