ವಿಜಯೇಂದ್ರ ಬಗ್ಗೆ ಶಾಸಕರ ಅಸಮಾಧಾನ, ಪಕ್ಷದೊಳಗೆ ಚರ್ಚೆ ಆಗಿದೆ: ಆರ್‌ ಅಶೋಕ್‌

Date:

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜೀನಾಮೆಗೆ ಬಿಜೆಪಿ ಶಾಸಕರಿಂದಲೇ ಒತ್ತಾಯ ವ್ಯಕ್ತವಾಗಿರುವ ವಿಚಾರ ಈಗಾಗಲೇ ಪಕ್ಷದೊಳಗೆ ಬಹಳ ಚರ್ಚೆ ಆಗಿದೆ. ಶಾಸಕರ ಹೇಳಿಕೆಯನ್ನು ಕೇಂದ್ರದ ನಾಯಕರು ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಅವರು ನಿಲುವು ಪ್ರಕಟಿಸುತ್ತಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ತಿಳಿಸಿದರು

ಬಿಜೆಪಿಯ ಭಿನ್ನಮತಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಪ್ರತಿಕ್ರಿಯಿಸಿ, “ನಾನೂ ಸಹ ಸಮಯ ನೋಡಿ ದೆಹಲಿ ನಾಯಕರ ಭೇಟಿಯಾಗುತ್ತೇನೆ. ಈ ಎಲ್ಲ ಬೆಳವಣಿಗೆಯನ್ನು ಕೇಂದ್ರದ ನಾಯಕರ ಗಮನಕ್ಕೆ ತರುತ್ತೇನೆ” ಎಂದರು.

“ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಜಕೀಯ ಪಕ್ಷವಲ್ಲ. ಆದ್ದರಿಂದ ರಾಜಕೀಯದ ಸಭೆ ಮಾಡುವ ಪದ್ಧತಿ ಸಂಘದಲ್ಲಿಲ್ಲ. 40 ವರ್ಷದ ಹಿಂದೆಯೇ ನಾನು ಆರ್​​ಎಸ್​​ಎಸ್ ಚಡ್ಡಿ ಹಾಕಿದವನು. ಆರ್​ಎಸ್​​ಎಸ್​​ನ ನೀತಿ, ನಿಯಮ ಎಲ್ಲವೂ ನನಗೂ ಗೊತ್ತಿದೆ. ಆರ್​ಎಸ್​​ಎಸ್​ ರಾಜಕಾರಣದಲ್ಲಿ ಭಾಗವಹಿಸುವುದು ಗೊತ್ತಿಲ್ಲ” ಎಂದು ಹೇಳಿದರು.

ಬಳ್ಳಾರಿ ಪಾದಯಾತ್ರೆ

“ಬಳ್ಳಾರಿ ಪಾದಯಾತ್ರೆಗೆ ಕೇಂದ್ರದ ನಾಯಕರು ಒಪ್ಪಿಗೆ ನೀಡಿದರೆ ನಾವು ಕೂಡ ಅದರಲ್ಲಿ ಭಾಗವಹಿಸುತ್ತೇವೆ. ಸಣ್ಣ ಪುಟ್ಟ ವ್ಯತ್ಯಾಸ ಇರುವುದು ನನ್ನ ಗಮನಕ್ಕೂ ಬಂದಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಮೊದಲಾದವರನ್ನು ಕೇಂದ್ರದ ನಾಯಕರು ಕರೆಸಿ ಈ ಹಿಂದೆಯೂ ಚರ್ಚೆ ಮಾಡಿದ್ದಾರೆ. ಈ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯ ಮಾಡುತ್ತೇವೆ. ಜನರು ಕೂಡ ನಮ್ಮಿಂದ ಅದನ್ನೇ ನಿರೀಕ್ಷೆ ಮಾಡುತ್ತಾರೆ” ಎಂದು ತಿಳಿಸಿದರು.

“ಸಿ ಪಿ ಯೋಗೇಶ್ವರ್‌ ಅವರ ಮನೆಗೆ ಹೋಗಿ ಚರ್ಚೆ ಮಾಡಲಾಗಿದೆ. ಅವರಿಗೆ ಟಿಕೆಟ್‌ ನೀಡುವ ಬಗ್ಗೆ ಎನ್‌ಡಿಎ ನಿರ್ಧಾರ ಮಾಡಬೇಕಿದ್ದು, ಆ ಬಗ್ಗೆಯೂ ಮನವರಿಕೆ ಮಾಡಿಕೊಡುತ್ತೇವೆ. ಬಂಡಾಯ ಸ್ಪರ್ಧೆ ಮಾಡುವುದು ಸರಿಯಲ್ಲ. ಏಕ ಅಭ್ಯರ್ಥಿ ಸ್ಪರ್ಧಿಸುವಂತೆ ಮಾಡಲು ಎಲ್ಲ ಪ್ರಯತ್ನ ಮಾಡುತ್ತೇವೆ” ಎಂದರು.

“ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ. ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್‌ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವಿರೋಧ ಮಾಡುವ ನಾಯಕರು ನಿಮ್ಮ ಪಕ್ಷದಲ್ಲೇ ಕೊತಕೊತ ಕುದಿತಿದೆ,,ಏನನ್ನು ತೋರಿಸಲು ಪಾದಯಾತ್ರೆ ಮಾಡುವಿರಿ,, ಕೊಲೆಸ್ಟ್ರಾಲ್ ಕಮ್ಮಿ ಮಾಡಿಕೊಳ್ಳಲಾ ಅಥವಾ ಆಂತರಿಕ ರಾಡಿ ಮುಚ್ಚಿಕೊಳ್ಳಲಾ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ'...

ತೋತಾಪುರಿ ಮಾವು ಖರೀದಿ ಮೇಲೆ ನಿರ್ಬಂಧ, ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ್ದು, ಚಿತ್ತೂರು...

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ ಅಲರ್ಟ್‌

ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ರಾಜ್ಯದ ನಾನಾ...

Download Eedina App Android / iOS

X