ಎಂ.ಎಂ.ಕಲಬುರ್ಗಿ- ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಚಾರಣೆಗೆ ವಿಶೇಷ ನ್ಯಾಯಾಲಯ ರಚನೆಗೆ ಸಿಎಂ ಆದೇಶ

Date:

Advertisements

ಬಲಪಂಥೀಯ ಕೋಮುವಾದಿಗಳ ಗುಂಡೇಟಿಗೆ ಬಲಿಯಾಗಿದ್ದ ಖ್ಯಾತ ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಮತ್ತು ಸಾಹಿತಿ, ಚಿಂತಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ಸಂಬಂಧ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಗೌರಿ ಲಂಕೇಶ್ ಅವರು ಸೆಪ್ಟೆಂಬರ್ 05, 2017ರಂದು ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500 ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್‌ ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

gauri 1

 

ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಜುಲೈ, 2022 ರಿಂದ ಪ್ರಾರಂಭಗೊಂಡಿದ್ದು, ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಮೃತರ ಸಹೋದರಿ ಕವಿತಾ ಲಂಕೇಶ್ ರವರು ಕೋರಿದ್ದು, ಈ ಬಗ್ಗೆ ಜರೂರು ಅಗತ್ಯ ಕ್ರಮವಹಿಸಲು ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisements

ವಿಶೇಷ ನ್ಯಾಯಾಲಯ ರಚಿಸುವಂತೆ ಕೋರಿದ್ದ ಎಂ.ಎಂ.ಕಲಬುರ್ಗಿ ಪತ್ನಿ ಉಮಾದೇವಿ

ಕನ್ನಡದ ಹಿರಿಯ ಸಾಹಿತಿ ಹಾಗೂ ಕನ್ನಡ ಸಂಶೋಧನಾ ಕ್ಷೇತ್ರದ ದಿಗ್ಗಜ ಡಾ. ಎಂ.ಎಂ. ಕಲಬುರ್ಗಿ ಅವರನ್ನು 2015ರ ಆಗಸ್ಟ್ 31ರಂದು ಧಾರವಾಡದ ಅವರ ಸ್ವಗೃಹದಲ್ಲಿ ಗುಂಡಿಟ್ಟು ಹತ್ಯೆಗೈಯಲಾಗಿತ್ತು. ಈ ಘಟನೆ ನಡೆದು ಏಳು ವರ್ಷಗಳು ಪೂರ್ಣಗೊಂಡಿವೆ.

kalaburagi

ಪ್ರಕರಣದ ಸಂಬಂಧ 2018-19ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಮೃತರ ಪತ್ನಿ ಶ್ರೀಮತಿ ಉಮಾದೇವಿ ಎಂ. ಎಂ. ಕಲಬುರ್ಗಿ ರವರು ಸಿಎಂ ಸಿದ್ದರಾಮಯ್ಯ ಅವರನ್ನು ಕೋರಿದ್ದರು. ಈ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಈ ಬಗ್ಗೆ ತುರ್ತಾಗಿ ಅಗತ್ಯ ಕ್ರಮ ವಹಿಸಲು ಸೂಚಿಸಿದ್ದಾರೆ.

ಆ ಮೂಲಕ ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಸೇರಿ ಎರಡೂ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚನೆಗೆ ಆದೇಶ ನೀಡಿದ್ದಾರೆ. ಆದೇಶದ ಪ್ರತಿ ಈ ದಿನ.ಕಾಮ್‌ಗೆ ಲಭ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X