ಲಡಾಖ್ ಹಿಂಸಾಚಾರಕ್ಕೆ ಸೋನಮ್ ವಾಂಗ್‌ಚುಕ್ ಪ್ರಚೋದನಾಕಾರಿ ಹೇಳಿಕೆ ಕಾರಣ: ಕೇಂದ್ರ ಸರ್ಕಾರ

Date:

ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ಸೇರಿದಂತೆ ನಾಲ್ಕು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ಬುಧವಾರ(ಸೆಪ್ಟೆಂಬರ್ 24) ಹಿಂಸಾಚಾರ ಉಂಟಾಗುತ್ತಿದ್ದಂತೆ 15ನೇ ದಿನಕ್ಕೆ ಉಪವಾಸ ನಿಲ್ಲಿಸಿದ್ದಾರೆ. ಆದರೆ ಲಡಾಖ್ ಹಿಂಸಾಚಾರಕ್ಕೆ ಅವರ ಪ್ರಚೋದನಾಕಾರಿ ಹೇಳಿಕೆಗಳೇ ಕಾರಣ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

- Advertisement -

ಲಡಾಖ್‌ನ ಭೂಮಿ, ಸಂಸ್ಕೃತಿ ಮತ್ತು ಸಂಪನ್ಮೂಲಗಳ ರಕ್ಷಣೆಗಾಗಿ ಲಡಾಖ್‌ ಅನ್ನು ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು, ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ನೀಡಬೇಕು, ಸ್ಥಳೀಯ ಉದ್ಯೋಗಕ್ಕಾಗಿ ಸಾರ್ವಜನಿಕ ಸೇವಾ ಆಯೋಗ(ಪಿಎಸ್‌ಎ) ರಚಿಸಬೇಕು, ಲೇಹ್ ಮತ್ತು ಕಾರ್ಗಿಲ್‌ಗೆ ತಲಾ ಒಂದು ಲೋಕಸಭೆ ಸ್ಥಾನ ನೀಡಬೇಕು ಎಂಬ ಒಟ್ಟು ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟುಕೊಂಡು 2019ರಿಂದ ಲಡಾಖ್‌ನಲ್ಲಿ ನಿರಂತರ ಹೋರಾಟ ನಡೆಯುತ್ತಿದೆ. 2023ರ ಜನವರಿಯಿಂದ ಸೋನಮ್ ವಾಂಗ್‌ಚುಕ್ ಕೂಡಾ ಈ ಚಳವಳಿಯಲ್ಲಿ ಜತೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಹಿಂಸೆಗೆ ತಿರುಗಿದ ಲಡಾಖ್‌ನ ರಾಜ್ಯ ಸ್ಥಾನಮಾನದ ಕೂಗು; 5 ಸಾವು, 80ಕ್ಕೂ ಹೆಚ್ಚು ಗಾಯಾಳುಗಳು

ಬುಧವಾರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ವಾಹನಗಳಿಗೆ ಬೆಂಕಿ ಹಾಕಲಾಗಿದೆ. ಬಿಜೆಪಿ ಕಚೇರಿಯನ್ನೂ ಧ್ವಂಸಗೊಳಿಸಲಾಗಿದೆ. ಇದಾದ ಬೆನ್ನಲ್ಲೇ ಲೇಹ್‌ನಲ್ಲಿ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸದ್ಯ ಕಾರ್ಗಿಲ್ ಬಂದ್‌ ನಡೆಯುತ್ತಿದೆ. ಇವೆಲ್ಲವುದರ ನಡುವೆ ಈ ಹಿಂಸಾಚಾರಕ್ಕೆ ಸೋನಮ್ ವಾಂಗ್‌ಚುಕ್ ಕಾರಣ ಎಂದು ಕೇಂದ್ರ ಆರೋಪಿಸಿದೆ, ಇನ್ನೊಂದೆಡೆ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ದೂರಿದೆ.

ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಗಿಲ್ ಡೆಮಾಕ್ರೆಟಿಕ್ ಅಲಯನ್ಸ್‌ನ ನಾಯಕ ಸಜ್ಜದ್ ಕಾರ್ಗಿಲಿ, “ಲಡಾಖ್‌ನಲ್ಲಿ ಹಿಂಸಾಚಾರಕ್ಕೆ ಅವಕಾಶವಿಲ್ಲ. ಆರು ವರ್ಷದಿಂದ ತಮ್ಮ ಉದ್ಯೋಗ ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಹೋರಾಡುತ್ತಿರುವ ಜನರಲ್ಲಿ ಅಭದ್ರತೆ ಕಾಡುತ್ತಿದೆ. ಲಡಾಖ್‌ನಲ್ಲಿ ಪ್ರಜಾಪ್ರಭುತ್ವವೇ ಇಲ್ಲದಂತಾಗಿದೆ. ಸೋನಮ್ ವಾಂಗ್‌ಚುಕ್ ಮತ್ತು ಬೆಂಬಲಿಗರು ಮೈದಾನದೊಳಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಹಿಂಸಾಚಾರ ನಡೆದಿರುವುದು ಪ್ರತಿಭಟನಾ ಸ್ಥಳದ ಹೊರಭಾಗದಲ್ಲಿ. ಸರ್ಕಾರ ಶೀಘ್ರವೇ ಮಾತುಕತೆ ನಡೆಸಬೇಕು ಎಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಇನ್ನು ಲಡಾಖ್ ಹೋರಾಟದ ನಾಯಕರುಗಳು ಹೇಳುವಂತೆಯೇ ಈಗಾಗಲೇ ಕೇಂದ್ರ ಸರ್ಕಾರ ಲಡಾಖ್‌ ಜನರ ಪರವಾಗಿ ಹೋರಾಡುತ್ತಿರುವ ಸೋನಮ್ ವಾಂಗ್‌ಚುಕ್ ಅವರನ್ನು ಗುರಿಯಾಗಿಸಿಕೊಂಡಿದೆ, ಸಾಕಷ್ಟು ಒತ್ತಡ ಹೇರುತ್ತಿದೆ. ಸಿಬಿಐ, ಇಡಿ ದಾಳಿಗಳನ್ನು ನಡೆಸಿದೆ. ಸೋನಮ್ ಅವರೇ ಹೇಳುವಂತೆ ದೇಶದ್ರೋಹದ ಪ್ರಕರಣವೂ ದಾಖಲಿಸಲಾಗುತ್ತಿದೆ, ಇದರ ಪ್ರತಿ ಇನ್ನಷ್ಟೇ ಕೈಗೆ ಸಿಗಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...