ಮಾಡಾಳ್‌ ಲಂಚ ಪ್ರಕರಣ: ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ಗೆ ಜಾಮೀನು

Date:

  • ಹಲವು ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಲಾಗಿದೆ
  • ಕೆಎಸ್‌ಡಿಎಲ್‌ನಲ್ಲಿ ಟೆಂಡರ್ ನೀಡಲು ಲಂಚ ಪಡೆಯುತ್ತಿದ್ದಾಗ ಸೆರೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಟೆಂಡರ್ ನೀಡಲು ಲಂಚ ಪಡೆಯುತ್ತಿದ್ದಾಗ ಬಂಧಿನವಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ.

- Advertisement -

ಕೆಎಸ್‌ಡಿಎಲ್‌ನಿಂದ ಟೆಂಡರ್ ನೀಡಲು ಶ್ರೇಯಸ್ ಕಶ್ಯಪ್ ಕಂಪೆನಿಯಿಂದ ಮಾ.2 ರಂದು 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಮಾಡಾಳ್ ಪ್ರಶಾಂತ್ ಅವರನ್ನು ಬಂಧಿಸಿದ್ದರು. ಬಳಿಕ, ಪ್ರಶಾಂತ್‌ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲಿ 2 ಕೋಟಿ ರೂ. ಹಣ ಪತ್ತೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದೇ ಆರೋಪದ ಮೇಲೆ ಪ್ರಶಾಂತ್ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ‘ಭ್ರಷ್ಟಚಾರ ನಿಯಂತ್ರಣ ಕಾಯ್ದೆ’ ಅಡಿ ಸ್ವಯಂ ಪ್ರೇರಿತವಾಗಿ ಎರಡು ಎಫ್ಐಆರ್ ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? : ವಿನಯ್‌ ಕುಲಕರ್ಣಿಗಿಲ್ಲ ಧಾರವಾಡಕ್ಕೆ ಪ್ರವೇಶ; ಅರ್ಜಿ ವಜಾ ಮಾಡಿದ ಹೈಕೋರ್ಟ್

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ 5 ಲಕ್ಷ ರೂ. ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ಪಡೆದು, 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು, ಪಾಸ್ ಪೋರ್ಟ್ನ್ನು ತನಿಖಾಧಿಕಾರಿಗೆ ನೀಡಬೇಕು ಎಂಬ ಷರತ್ತನ್ನು ನೀಡಿ ಜಾಮೀನು ಮಂಜೂರು ಮಾಡಿದೆ.

ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಗಾಗಲೇ ಜಾಮೀನು ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...