ಮೋದಾನಿ | ಮಹಾರಾಷ್ಟ್ರ ಸಿಎಂ ಫಡ್ನವೀಸ್ ಭೇಟಿಯಾದ ಅದಾನಿ

Date:

ಪ್ರಧಾನಿ ಮೋದಿ ಅವರ ಅತ್ಯಾಪ್ತ ಎಂದೇ ಗುರುತಿಸಿಕೊಂಡಿರುವ, ಅಮೆರಿಕದಲ್ಲಿ ದಾಖಲಾಗಿರುವ ಲಂಚ ಪ್ರಕರಣದ ಆರೋಪಿಯೂ ಆಗಿರುವ ಉದ್ಯಮಿ ಗೌತಮ್ ಅದಾನಿ ಅವರು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ್ದಾರೆ. ಇದು ಸೌಜನ್ಯದ ಭೇಟಿಯೆಂದು ಹೇಳಿಕೊಂಡಿದ್ದಾರೆ.

- Advertisement -

ದಕ್ಷಿಣ ಮುಂಬೈನಲ್ಲಿರುವ ಫಡ್ನವೀಸ್ ಅವರ ಅಧಿಕೃತ ನಿವಾಸ ‘ಸಾಗರ್’ ಬಂಗಲೆಯಲ್ಲಿ ಫಡ್ನವೀಸ್ ಅವರನ್ನು ಅದಾನಿ ಭೇಟಿ ಮಾಡಿದ್ದಾರೆ. ಫಡ್ನವೀಸ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಅದಾನಿ ಭಾಗಿಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಈಗ ಭೇಟಿ ಮಾಡಿದ್ದಾರೆ ಎಂದು ಅವರ ಆಪ್ತರು ಹೇಳಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಅಂದಹಾಗೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅದಾನಿ ಹೆಸರು ಭಾರೀ ಚರ್ಚೆಯಲ್ಲಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಲು ಅದಾನಿ ಶ್ರಮಿಸಿದ್ದಾರೆ. ಶ್ರಮಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. 2019ರ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ ಮತ್ತು ಎನ್‌ಸಿಪಿ ನಡುವಿನ ಮೈತ್ರಿಗಾಗಿ ಅದಾನಿ ಮಧ್ಯಸ್ಥಿಕೆ ವಹಿಸಿದ್ದರು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರೇ ಇತ್ತೀಚೆಗೆ ಹೇಳಿದ್ದರು.

ಗಮನಾರ್ಹವಾಗಿ, ಮಹಾರಾಷ್ಟ್ರದಲ್ಲಿ ತನ್ನ ಉದ್ಯಮವನ್ನು ಉಳಿಸಿಕೊಳ್ಳಲು ಮತ್ತು ವಿಸ್ತರಿಸಲು ಅಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಬೇಕೆಂದು ಅದಾನಿ ಬಯಸಿದ್ದರು. ಅದಕ್ಕಾಗಿಯೇ, 2019ರಲ್ಲಿಯೂ ಅವರು ಬಿಜೆಪಿ-ಎನ್‌ಸಿಪಿ ಒಳಗೊಂಡ ಸಭೆ ನಡೆಸಿದ್ದರು. ಆದರೆ, ಅದು ವಿಫಲವಾಗಿತ್ತು. 2022ರಲ್ಲಿ ಹಿಂಬಾಗಿಲಿನಿಂದ ಬಿಜೆಪಿ ಅಧಿಕಾರಕ್ಕೇರಿದ ಬಳಿಕ, ಮಹಾಯುತಿ ಸರ್ಕಾರದಿಂದ ಭಾರೀ ಪ್ರಯೋಜನಗಳನ್ನು ಅದಾನಿ ಪಡೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ, ಮಹಾರಾಷ್ಟ್ರಕ್ಕೆ 6,600 ಮೆಗಾವ್ಯಾಟ್ ಸೌರವಿದ್ಯುತ್ ಮತ್ತು ಥರ್ಮಲ್ ವಿದ್ಯುತ್ ಪೂರೈಸುವ ಗುತ್ತಿಗೆಯನ್ನು ಅದಾನಿ ಗ್ರೂಪ್ ಪಡೆದುಕೊಂಡಿದೆ. ಮಹಾಯುತಿ ಸರ್ಕಾರವು ಮೋದಿ ಸೂಚನೆಯ ಮೇರೆಗೆ ಆ ಗುತ್ತಿಗೆಯನ್ನು ಅದಾನಿಗೆ ನೀಡಿದೆ ಎಂಬ ಆರೋಪಗಳಿವೆ.

ಈ ವರದಿ ಓದಿದ್ದೀರಾ?: ಮೋದಾನಿ ಫೈಲ್ಸ್ | ಜಾರ್ಖಂಡ್‌ನ ಅದಾನಿ ವಿದ್ಯುತ್ ಸ್ಥಾವರದ ವಿಚಿತ್ರ ಕಥೆ ಇದು!

ಅಲ್ಲದೆ, ಮುಂಬೈನಲ್ಲಿರುವ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನೂ ಅದಾನಿ ಗ್ರೂಪ್ ಪಡೆದುಕೊಂಡಿದೆ. ಮಹಾರಾಷ್ಟ್ರದಲ್ಲಿ ಪವರ್ ಪ್ಲಾಂಟ್, ಸಿಮೆಂಟ್ ಪ್ಲಾಂಟ್, ಸಿಎನ್‌ಜಿ-ಪೆಟ್ರೋಲಿಯಂ ಪ್ಲಾಂಟ್‌ಗಳು ಸೇರಿದಂತೆ ಹಲವಾರು ಉದ್ದಿಮೆಗಳನ್ನು ಅದಾನಿ ಹೊಂದಿದ್ದಾರೆ. ಇತರ ಉದ್ದಿಮೆಗಳನ್ನೂ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಅದರ ಭಾಗವಾಗಿಯೇ ಇತ್ತೀಚೆಗೆ ಅಂಬುಜಾ ಸಿಮೆಂಟ್‌ ಉದ್ದಿಮೆಯನ್ನು ತಮ್ಮ ಸಮೂಹಕ್ಕೆ ವಿಲೀನ ಮಾಡಿಕೊಂಡಿದ್ದಾರೆ.

ಕಳೆದ ತಿಂಗಳ ನಡೆದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರಲು ಅದಾನಿ ನೇರವಾಗಿ ಕಣಕ್ಕಿಳಿದಿದ್ದಾರೆ, ಹಣವನ್ನು ನೀರಿನಂತೆ ಹರಿಸಿದ್ದಾರೆ ಎಂದೂ ಹೇಳಲಾಗುತ್ತಿದೆ. ಸದ್ಯ, ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ಮತ್ತೆ ರಚನೆಯಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಫಡ್ನವೀಸ್ ಅವರನ್ನು ಅದಾನಿ ಭೇಟಿಯಾಗಿದ್ದಾರೆ. ಅದಾನಿಗಾಗಿ ಮಹಾರಾಷ್ಟ್ರ ಸರ್ಕಾರ ಏನೆಲ್ಲಾ ನೀತಿಗಳನ್ನು ತರಬಹುದು. ಯಾವೆಲ್ಲ ಗುತ್ತಿಗೆಗಳನ್ನು ಅದಾನಿಗೆ ನೀಡಬಹುದು. ಕಾದುನೋಡಬೇಕಷ್ಟೇ…!

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...