‘ಮೋದಿ-ಅದಾನಿ ಭಾಯಿ ಭಾಯಿ’; ಕಪ್ಪು ಮಾಸ್ಕ್‌ ಧರಿಸಿ ವಿಪಕ್ಷಗಳ ಸಂಸದರ ಪ್ರತಿಭಟನೆ

Date:

‘ಮೋದಿ-ಅದಾನಿ ಭಾಯಿ ಭಾಯಿ..’, ‘ಮೋದಿ ಅದಾನಿ ಏಕ್ ಹೈ’, ‘ಅದಾನಿ ಸೇಫ್ ಹೈ’ ಎಂಬ ಸ್ಟಿಕ್ಕರ್‌ಗಳು ಇರುವ ಕಪ್ಪು ಮಾಸ್ಕ್‌ ಮತ್ತು ಜಾಕೆಟ್‌ಗಳನ್ನು ಧರಿಸಿ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸಂಸದರು ಶುಕ್ರವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳ ಸಂಸದರು ಸಂವಿಧಾನದ ಪ್ರತಿ ಹಿಡಿದು ಸಂಸತ್‌ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಮೋದಿ ಅವರ ಅತ್ಯಾಪ್ತ, ಅಮೆರಿಕದಲ್ಲಿ ವಂಚನೆ ಪ್ರಕರಣದ ಆರೋಪ ಎದುರಿಸುತ್ತಿರುವ ಗೌತಮ್ ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಅದಾನಿ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಹೆದರುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

‘ಇಂಡಿಯಾ’ ಮೈತ್ರಿಕೂಟದ ಪ್ರತಿಭಟನೆಯಿಂದ ಟಿಎಂಸಿ ಮತ್ತು ಎಸ್‌ಪಿ ದೂರ ಉಳಿದಿವೆ. ಇದನ್ನೇ ಮುನ್ನೆಲೆಗೆ ತಂದಿರುವ ಆಡಳಿತಾರೂಢ ಬಿಜೆಪಿ, ವಿಪಕ್ಷಗಳ ವಿಭಜನೆ ಎಂದು ಹೇಳಲಾರಂಭಿಸಿದೆ.

ಅಮೆರಿಕದ ನ್ಯೂಯಾರ್ಕ್‌ ನ್ಯಾಯಾಲಯದಲ್ಲಿ ಅದಾನಿ ಮತ್ತು ಇತರ ಏಳು ಮಂದಿಯ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಭಾರತದಲ್ಲಿ ವಿದ್ಯುತ್‌ ಒಪ್ಪಂದಗಳನ್ನು ಪಡೆದುಕೊಳ್ಳಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅದಾನಿ 2,029 ಕೋಟಿ ರೂ. ಲಂಚ ಕೊಟ್ಟಿದ್ದಾರೆ. ಅದಕ್ಕಾಗಿ, ಹಣ ಸಂಗ್ರಹಿಸಲು ಅಮೆರಿಕ ಉದ್ಯಮಿಗಳಿಗೆ ಸುಳ್ಳು ಹೇಳಿ ಹಣ ಪಡೆದುಕೊಂಡಿದ್ದಾರೆ. ಉದ್ಯಮಿಗಳಿಗೆ ಅದಾನಿ ವಂಚಿಸಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಆರೋಪಿಸಲಾಗಿದೆ.

ಈ ವರದಿ ಓದಿದ್ದೀರಾ?: ಏನಿದು ಅದಾನಿ ಲಂಚದ ಹಗರಣ: ಇಲ್ಲಿದೆ ಸಂಪೂರ್ಣ ಮಾಹಿತಿ

ಚಾರ್ಜ್‌ಶೀಟ್‌ ಸಲ್ಲಿಕೆಯಾದ ಬಳಿಕ, ಅದಾನಿಯ ಬಂಧನಕ್ಕೆ ವಾರೆಂಟ್‌ಅನ್ನೂ ಹೊರಡಿಸಲಾಗಿದೆ. ಆದರೆ, ಅದಾನಿಯನ್ನು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ಭ್ರಷ್ಟಾಚಾರ ಮತ್ತು ಮೋದಿ-ಅದಾನಿ ನಡುವಿನ ಸ್ನೇಹ ಸಂಬಂಧದ ಬಗ್ಗೆ ಸಂಸತ್‌ನಲ್ಲಿ ಚರ್ಚೆ ಮಾಡಲು ವಿಪಕ್ಷಗಳು ಆಗ್ರಹಿಸಿವೆ. ಆದರೆ, ಸರ್ಕಾರ ಚರ್ಚೆಗೆ ಅವಕಾಶ ಕೊಡುತ್ತಿಲ್ಲ. ಹೀಗಾಗಿ, ಶುಕ್ರವಾರ ವಿಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...