ಕಲಬುರಗಿ | ಮೋದಿ-ಅಮಿತ್ ಶಾ ಬಳಿ ಮನುಷ್ಯರನ್ನು ಶುದ್ಧಗೊಳಿಸಬಲ್ಲ ವಾಷಿಂಗ್ ಮಷೀನ್ ಇದೆ : ಮಲ್ಲಿಕಾರ್ಜುನ ಖರ್ಗೆ

Date:

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಬಳಿ ವಾಷಿಂಗ್ ಮಷೀನ್ ಎಂಬ ದೊಡ್ಡ ಯಂತ್ರವಿದೆ. ಇದು ಎಷ್ಟು ದೊಡ್ಡ ಯಂತ್ರವೆಂದರೆ ಅದು ಬಟ್ಟೆಗಳನ್ನು ಮಾತ್ರವಲ್ಲ; ಮನುಷ್ಯರನ್ನು ಕೂಡ ಶುದ್ಧಗೊಳಿಸಬಲ್ಲದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

- Advertisement -

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ನಾಮಪತ್ರ ಸಲ್ಲಿಸಿದ ಬಳಿಕ ನಗರದ ಎನ್.‌ ವಿ.ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಒಮ್ಮೆ ಬಿಜೆಪಿ ಸೇರಿದರೆ ಸಾಕು ವಾಷಿಂಗ್‌ ಮಷೀನ್ ಯಂತ್ರದ ಮೂಲಕ ಹಾದು ಎಲ್ಲರೂ ಪರಿಶುದ್ಧರಾಗುತ್ತಾರೆ. ಭ್ರಷ್ಟತೆಯ ಆರೋಪದ ಮೇಲೆ ಜೈಲಿಗೆ ಕಳುಹಿಸಲ್ಪಟ್ಟವರು, ಭ್ರಷ್ಟಾಚಾರ ಆರೋಪ ಪ್ರಕರಣ ದಾಖಲಾದವರು, ನೀವೇ ಜೈಲಿಗೆ ಕಳಿಸದವರೆಲ್ಲಾ ನಿಮ್ಮ ಪಕ್ಷಕ್ಕೆ ಸೇರಿದ ಮೇಲೆ ಅದು ಹೇಗೆ ಪರಿಶುದ್ಧರಾಗುತ್ತಾರೆ?‌” ಎಂದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಪ್ರಶ್ನಿಸಿದರು.

“ಮೋದಿ ಭ್ರಷ್ಟರನ್ನು ಎಂದಿಗೂ ಬಿಡುವುದಿಲ್ಲ ಎನ್ನುತ್ತಾರೆ. ಆದರೆ ಭ್ರಷ್ಟರು ಅವರ ಹೆಗಲ ಮೇಲೆಯೇ ಕುಳಿತಿದ್ದಾರೆ. ಅಂಥವರನ್ನು ನೀವು ಸಿಎಂ ಮಾಡುತ್ತೀರಿ. ಕರ್ನಾಟಕ, ಗೋವಾ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ನೀವು ಇದನ್ನೇ ಮಾಡಿದ್ದೀರಿ. ಇದೇ ಮೋದಿ ಮತ್ತು ಶಾ ರ ಪ್ರಜಾಸತ್ತಾತ್ಮಕ ತತ್ವಗಳು” ಎಂದು ಕುಟುಕಿದರು.

ನಮ್ಮ ಭಾಗಕ್ಕೆ ಪ್ರಧಾನಿ ಮಂತ್ರಿಗಳು ಬರುವುದೇ ತುಂಬಾ ಕಡಿಮೆ, ಆದರೆ ಪ್ರಧಾನಿ ಮೋದಿ ಪದೇ ಪದೇ ಇಲ್ಲಿ ಬಂದು ಹೋಗಿದ್ದಾರೆ. ಹೊರತು ಹತ್ತು ವರ್ಷದ ಕೇಂದ್ರ ಬಿಜೆಪಿ ಆಡಳಿತ ಅವಧಿಯಲ್ಲಿ ಈ ಭಾಗಕ್ಕೆ ಏನು ಕೊಟ್ಟಿದ್ದಾರೆ ಎಂಬುದು ಮುಖ್ಯವಾಗಿದೆ. ನಾವು 371(J) ವಿಧಿಯನ್ನು ಜಾರಿಯಾದ ಬಳಿಕ ಈ ಭಾಗದ ಕೇಂದ್ರ ಸರ್ಕಾರ ಯಾವ ಅಭಿವೃದ್ಧಿ ಕಾರ್ಯಗಳನ್ನು ಕೈಗೆೊಂಡಿದೆ, ಯಾವ ಕಾರ್ಖಾನೆಗಳನ್ನು ತಂದಿದೆ ಹಾಗೂ ಯಾವ ಹೊಸ ಮೂಲಸೌಕರ್ಯ ಯೋಜನೆಗಳನ್ನು ಮಂಜೂರು ಮಾಡಿದೆ ಎಂಬುದನ್ನು ತಿಳಿಸಬೇಕು” ಎಂದರು.

“ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಇಲ್ಲಿ ನಡೆಯುತ್ತಿದ್ದ ಸಾಮಾನ್ಯ ಅಭಿವೃದ್ಧಿ ಕಾಮಗಾರಿಗಳನ್ನೂ ನಿಲ್ಲಿಸಿದ್ದಾರೆ. ಯಾದಗಿರಿಯಲ್ಲಿ ನಮ್ಮ ರೈಲ್ವೇ ಕೋಚ್ ಫ್ಯಾಕ್ಟರಿ ನಿಂತಿತು. ಅಲ್ಲಿ ಈಗ ಕೇವಲ 200-300 ಜನರು ಕೆಲಸ ಮಾಡುತ್ತಿದ್ದಾರೆ. ಕನಿಷ್ಠ 2,000 ಜನರಿಗೆ ಉದ್ಯೋಗ ಕಲ್ಪಿಸಲು ನಾನು ಆ ಕಾರ್ಖಾನೆಯನ್ನು ಆರಂಭಿಸಿದ್ದೆ. ಆದರೆ ಅವರು ಈ ಕಾರ್ಖಾನೆಯನ್ನು ಮುಂದುವರಿಸಲಿಲ್ಲ ಬದಲಿಗೆ ನಿಲ್ಲಿಸಿದರು. ನಾನು ಪ್ರಧಾನಿಯವರನ್ನು ಭೇಟಿಯಾದಾಗ ಈ ಭಾಗದಲ್ಲಿ ಅಭಿವೃದ್ಧಿ ಮೂಲಕ ಬದಲಾವಣೆ ತರಲು ಅವರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಲಿಲ್ಲ” ಎಂದರು.

ಕಲಬುರಗಿಯಲ್ಲಿ ಇಎಸ್‌ಐ ಆಸ್ಪತ್ರೆ ಇದೆ. ಇದು ಕಾರ್ಮಿಕರು, ಬಡವರು, ದಿನಗೂಲಿ ಕಾರ್ಮಿಕರು ಮುಂತಾದ ಇಎಸ್‌ಐ ಕೊಡುಗೆದಾರರಿಗೆ ದೊಡ್ಡ ಮಟ್ಟದಲ್ಲಿ ಉಪಯೋಗಕಾರಿಯಾಗಿದೆ. ಇದನ್ನು ದೆಹಲಿಯ ಏಮ್ಸ್ ನಂತೆ ಮೇಲ್ದರ್ಜೆಗೆ ಏರಿಸಬೇಕು ಎಂದರೂ ಸ್ಪಂದಿಸಲಿಲ್ಲ. ಕೇಂದ್ರ ಸರ್ಕಾರ, ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕಾಗಿ ಯಾವುದೇ ಕೆಲಸ ಮಾಡಿಲ್ಲ. ಕಳೆದ ಐದು ವರ್ಷದಲ್ಲಿ ಕರ್ನಾಟಕಕ್ಕೆ ನನ್ನ ಕೊಡುಗೆಯ 10 ಪೈಸೆಯಷ್ಟಾದರೂ ಅವರು ಕೊಡುಗೆ ನೀಡಿದ್ದಾರಾ” ಎಂದು ಸವಾಲು ಹಾಕಿದರು.

“ಎಲ್ಲ ಕಡೆಗಳಲ್ಲಿ ಮೋದಿಯವರು ನಮ್ಮ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿನೇ ನಕಲು ಮಾಡಿ ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಮೋದಿಯವರೇ ನಿಮ್ಮ ಗ್ಯಾರಂಟಿ ಎಲ್ಲಿದೆ?. ವರ್ಷಕ್ಕೆ ಎರಡು ಕೋಟಿ ಉದ್ಯೋಗ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಣ, ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದು ಹೇಳಿದ್ದರು, ಮಾಡಿದ್ದಾರಾ? ಎಂದು ಪ್ರಶ್ನಿಸಿದರು.

“ಈ ಚುನಾವಣೆಯು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ನಡೆಯುತ್ತಿದ್ದು ಬಿಜೆಪಿಗೆ ಮತ ನೀಡಿದರೆ ಮೋದಿ ಅವರು ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಪ್ರಜಾಪ್ರಭುತ್ವ ನಾಶಪಡಿಸುತ್ತಾರೆ. ಈಗಾಗಲೇ ಮೋದಿ ಅವರು ಎಲ್ಲಾ ಸಂಘಟನೆಗಳನ್ನು ನಾಶ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

“ಎಲ್ಲ ಸರ್ಕಾರಿ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ನೇಮಿಸಿಕೊಂಡು ಇತರರನ್ನು ನಿರುದ್ಯೋಗಿಗಳು ಮತ್ತು ಶಕ್ತಿ ಹೀನರನ್ನಾಗಿ ಮಾಡಿದ್ದಾರೆ. ಪ್ರಜಾಪ್ರಭುತ್ವವನ್ನು ಉಳಿಸಬೇಕು, ಡಾ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ರಕ್ಷಿಸಲು ಮತ್ತು ಸ್ಥಳೀಯ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿ” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...