ಸಾಮಾಜಿಕ ನ್ಯಾಯ ಶಾಶ್ವತವಾಗಿ ಅರಳಲಿ: ಪತ್ರ ಮುಖೇನ ಬಿಜೆಪಿಗೆ ಉದಯನಿಧಿ ಸ್ಟಾಲಿನ್ ತಿರುಗೇಟು

Date:

Advertisements

ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‌ ಅವರ ಸನಾತನ ಭಾಷಣ ವಿಷಯದ ಬಗ್ಗೆ ಬಿಜೆಪಿ ನಾಯಕರ ಪ್ರತಿಭಟನೆ ನಡುವೆ ಸ್ಟಾಲಿನ್‌ ಮತ್ತೊಂದು ಪತ್ರದ ಮೂಲಕ ಕಮಲ ಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಉದಯನಿಧಿ ಸ್ಟಾಲಿನ್‌, ”ಬಿಜೆಪಿಯು ನನ್ನ ಭಾಷಣವನ್ನು ‘ಹತ್ಯಾಕಾಂಡಕ್ಕೆ ಪ್ರಚೋದನೆ’ ಎಂದು ತಿರುಚಿದೆ. ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಅಸ್ತ್ರವೆಂದು ಪರಿಗಣಿಸುತ್ತಾರೆ. ನಾನು ಡಿಎಂಕೆ ಸಂಸ್ಥಾಪಕ ಪೆರಿಯಾರ್‌ ಅಣ್ಣಾ ಅವರ ರಾಜಕೀಯ ವಾರಸುದಾರರಲ್ಲಿ ಒಬ್ಬನಾಗಿದ್ದೇನೆ. ಅದು ಎಲ್ಲರಿಗೂ ತಿಳಿದಿದೆ. ನಾವು ಯಾವುದೇ ಧರ್ಮದ ಶತ್ರುಗಳಲ್ಲ. ‘ಎಲ್ಲ ಜೀವಗಳು ಸಮಾನವಾಗಿ ಹುಟ್ಟುತ್ತವೆ’ ಎಂದು ಬೋಧಿಸುವ ಎಲ್ಲ ಧರ್ಮಗಳನ್ನು ನಾವು ಗೌರವಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಕಳೆದ 9 ವರ್ಷಗಳಿಂದ ಬಿಜೆಪಿ ಭರವಸೆಗಳೆಲ್ಲವೂ ಪೊಳ್ಳು ಭರವಸೆಗಳಾಗಿವೆ. ನಮ್ಮ ಕಲ್ಯಾಣಕ್ಕಾಗಿ ನೀವು ನಿಖರವಾಗಿ ಏನು ಮಾಡಿದ್ದೀರಿ? ಎಂಬುದು ಸದ್ಯಕ್ಕೆ ಇಡೀ ದೇಶವು ಫ್ಯಾಸಿಸ್ಟ್ ಬಿಜೆಪಿ ಸರ್ಕಾರದ ವಿರುದ್ಧ ಒಗ್ಗಟ್ಟಿನಿಂದ ಎತ್ತುತ್ತಿರುವ ಪ್ರಶ್ನೆ. ಅಚ್ಚರಿಯ ವಿಷಯವೆಂದರೆ ಕೇಂದ್ರ ಸರ್ಕಾರದ ಮಂತ್ರಿಗಳಾದ ಅಮಿತ್ ಶಾ ಮತ್ತು ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸುಳ್ಳು ಸುದ್ದಿ ಆಧರಿಸಿ ನನ್ನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ನಾವು ಯಾವುದೇ ಧರ್ಮದ ಶತ್ರುಗಳಲ್ಲ ಎಂಬುದು ಎಲ್ಲರಿಗೂ ಗೊತ್ತು. ಇಂದಿಗೂ ಪ್ರಸ್ತುತವಾಗಿರುವ ಧರ್ಮಗಳ ಕುರಿತು ಅಣ್ಣಾ ಅವರ ವಿಚಾರಗಳನ್ನು ಉಲ್ಲೇಖಿಸಲು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸನಾತನ ವಿವಾದ: ಬಿಜೆಪಿ ಸಚಿವರಿಗೆ ಪ್ರಧಾನಿ ಸೂಚನೆ

“ಎಲ್ಲ ಧರ್ಮದ ಸಾರ ಸಮಾನತೆ ಮತ್ತು ಭ್ರಾತೃತ್ವ. ಧರ್ಮವು ಜನರನ್ನು ಜಾತಿಗಳ ಹೆಸರಿನಲ್ಲಿ ವಿಭಜಿಸಿದರೆ, ಅದು ಅವರಿಗೆ ಅಸ್ಪೃಶ್ಯತೆ ಮತ್ತು ಗುಲಾಮಗಿರಿಯನ್ನು ಕಲಿಸಿದರೆ ನಾನು ಸಹ ಆ ಧರ್ಮವನ್ನು ವಿರೋಧಿಸುವ ಮೊದಲ ವ್ಯಕ್ತಿಯಾಗುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಂಗಡಿಗರು ಮುಂದಿನ ಸಂಸತ್ತಿನ ಚುನಾವಣೆಗಳನ್ನು ನಡೆಸಲು ಇಂತಹ ಅಪಪ್ರಚಾರಗಳ ಮೇಲೆ ಮಾತ್ರ ಹೆಚ್ಚು ಅವಲಂಬಿತರಾಗಿದ್ದಾರೆ. ಮೋದಿ ಸರ್ಕಾರ ಕಳೆದ 9 ವರ್ಷಗಳಿಂದ ಯಾವುದೇ ಪ್ರಗತಿಪರ ಯೋಜನೆಗಳನ್ನು ಕೈಗೊಂಡಿಲ್ಲ. ಹಲವು ಹಗರಣಗಳಲ್ಲಿ ಭಾಗಿಯಾಗಿರುವ ಅದಾನಿಯಂತವರಿಗೆ ಸಹಾಯ ಮಾಡಿದ್ದಾರೆ. ಆದರೆ ನಮ್ಮ ಸರ್ಕಾರ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಧಿಕಾರ ನಡೆಸುತ್ತಿದೆ” ಎಂದು ಟ್ವಿಟರ್‌ನಲ್ಲಿ ಹೇಳಿದ್ದಾರೆ.

“ನಮ್ಮ ವಿರುದ್ಧ ಅಪಪ್ರಚಾರ, ಬೆದರಿಕೆ ಒಡ್ಡಿರುವವವರ ವಿರುದ್ಧ ಡಿಎಂಕೆ ಪಕ್ಷದ ಸದಸ್ಯರು ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳನ್ನು ದಾಖಲಿಸಿದ್ದಾರೆ. ನಾನು ನಮ್ಮ ಕಾರ್ಯಕರ್ತರಿಗೆ ಮನವಿ ಮಾಡುವುದೇನೆಂದರೆ ದರ್ಶಕರ ವಿರುದ್ಧ ಪ್ರಕರಣ ದಾಖಲಿಸುವುದು, ಅವರ ಪ್ರತಿಕೃತಿ ಸುಡುವುದು ಮುಂತಾದ ಸಮಯ ವ್ಯರ್ಥ ಮಾಡುವ ಕೆಲಸಗಳಲ್ಲಿ ಭಾಗಿಯಾಗದೆ ಜನರು ಹಾಗೂ ಪಕ್ಷಕ್ಕಾಗಿ ಕೆಲಸ ಮಾಡಿ ಎಂದು ಮನವಿ ಮಾಡುತ್ತೇನೆ”

“ನಮ್ಮ ಪಕ್ಷದ ಅಧ್ಯಕ್ಷರ ಮಾರ್ಗದರ್ಶನ ಮತ್ತು ನಮ್ಮ ಪಕ್ಷದ ಹೈಕಮಾಂಡ್‌ನ ಸಲಹೆ ಮೇರೆಗೆ ನನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ ಎಂದು ತಿಳಿಸಲು ಇಚ್ಛಿಸುತ್ತೇನೆ. ಅಂತಿಮವಾಗಿ ಸಾಮಾಜಿಕ ನ್ಯಾಯ ಶಾಶ್ವತವಾಗಿ ಅರಳಲಿ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ” ಎಂದು ಉದಯನಿಧಿ ಸ್ಟಾಲಿನ್‌ ತಿಳಿಸಿದ್ದಾರೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಕೂಡ ಸನಾತನ ವಿಷಯದ ಬಗ್ಗೆ ತಕ್ಕ ಉತ್ತರ ನೀಡಿ ಎಂದು ಸಚಿವರಿಗೆ ಕರೆ ನೀಡಿದ್ದಾರೆ.  

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X