ಸಫಾರಿ ವೇಳೆ ಮೋದಿಗೆ ಕಾಣದ ಹುಲಿ; ಮಾರುತ್ತಾರೆ ಎನ್ನುವ ಭಯಕ್ಕೆ ಅವಿತಿವೆ ಎಂದ ಸಿದ್ದರಾಮಯ್ಯ

Date:

ಪ್ರಧಾನಿ ನರೇಂದ್ರ ಮೋದಿ ಅವರು ಬಂಡಿಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದ್ದಾರೆ. ಆದರೆ, ಅವರಿಗೆ ಯಾವ ಹುಲಿಯೂ ಕಾಣಿಸಿಲ್ಲ ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಟುಕಿದ್ದಾರೆ.

ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಪ್ರಧಾನಿ ಮೋದಿ ಸಫಾರಿ ನಡೆಸಿದ್ದಾರೆ. ಎರಡು ಗಂಟೆಗಳ ಕಾಲ ಸುಮಾರು 22 ಕಿ.ಮೀ ಸಫಾರಿ ನಡೆಸಿರುವ ಮೋದಿ ಅವರಿಗೆ ಆನೆಗಳು, ಜಿಂಕೆಗಳು, ಕಾಟಿಗಳು ಸೇರಿದಂತೆ ಹಲವು ಪ್ರಾಣಿ, ಪಕ್ಷಿಗಳು ಎದುರಾಗಿವೆ. ಆದರೆ, ಒಂದೇ ಒಂದು ಹುಲಿ ಸಹ ಅವರ ಕಣ್ಣಿಗೆ ಬಿದ್ದಿಲ್ಲ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಹಿಡಿದು ಮಾರಿಬಿಡುತ್ತಾರೆ ಎನ್ನುವ ಭಯಕ್ಕೆ ಹುಲಿಗಳು ಯಾವ ಗುಹೆಯೊಳಗೆ ಕೂತಿವೆಯೋ. ಅಯ್ಯೋ ಪಾಪ” ಎಂದು ವ್ಯಂಗ್ಯವಾಡಿದ್ದಾರೆ.

“ಇನ್ನು ಕೆಲವೇ ದಿನಗಳಲ್ಲಿ ಬಂಡಿಪುರ ಉಳಿಸಿ ಎಂಬ ಅಭಿಯಾನವನ್ನು ಕನ್ನಡಿಗರು ಶುರು ಮಾಡುವಂತೆ ಆಗದಿರಲಿ. ಅದೇ ನೀವು ಕರುನಾಡಿಗೆ ಮಾಡುವ ದೊಡ್ಡ ಉಪಕಾರ ಮೋದಿಯವರೇ” ಎಂದು ಕುಟುಕಿದ್ದಾರೆ.

ಸಫಾರಿಯನ್ನು ಓಪನ್ ಜೀಪ್​​ನಲ್ಲಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ದುರ್ಬಿನ್ ಹಿಡಿದು ಪ್ರಾಣಿಗಳನ್ನು ವೀಕ್ಷಿಸಿದ್ದಾರೆ. ದುರ್ಬಿನ್ ಹಿಡಿದು ಕಾಡು ವೀಕ್ಷಿಸಿದ ಮೋದಿ, ಕ್ಯಾಮೆರಾ ಹಿಡಿದು ಕೆಲ ಪ್ರಾಣಿಗಳ ಫೋಟೋ ಕ್ಲಿಕ್ಕಿಸಿದ್ದಾರೆ. ಆದರೆ, ಒಂದೇ ಒಂದು ಹುಲಿ ಕಂಡಿಲ್ಲ.

ಆಸ್ಕರ್ ಪ್ರಶಸ್ತಿ ವಿಜೇತ ‘ದಿ ಎಲೆಫೆಂಟ್ ವಿಸ್ಪರರ್ಸ್‌’ ಸಾಕ್ಷ್ಯಚಿತ್ರದಲ್ಲಿ ನಟಿಸಿದ್ದ ಬೊಮ್ಮಾ, ಬೆಳ್ಳಿ ಮತ್ತು ರಘು ಆನೆಯನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್...

ಮಾಜಿ ಪ್ರಧಾನಿ ದೇವೇಗೌಡಗೆ ಕಸಾಪ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼ

2022ನೇ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ʼ ದತ್ತಿ ಪ್ರಶಸ್ತಿ ಪ್ರದಾನ ನಾಡಿನ...

ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ: ಸಿಎಂ 'ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ...

ನಮ್ಮ ಸಚಿವರು | ಮೌಢ್ಯವನ್ನು ಮೆಟ್ಟಿ ಗೆಲ್ಲುತ್ತಿರುವ ಸತೀಶ್ ಜಾರಕಿಹೊಳಿ

32 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಹಾಗೂ ನಾಲ್ಕು ಬಾರಿ ಸಚಿವರಾಗಿರುವ...