ವರ್ಷಾಂತ್ಯಕ್ಕೆ ಮೋದಿಯಿಂದ ಪ್ರಧಾನಿ ಹುದ್ದೆ ತ್ಯಾಗ: ದೆಹಲಿಯ ಗುಸುಗುಸು ಗುಟ್ಟು ಬಿಚ್ಚಿಟ್ಟ ಸಚಿವ

Date:

ಈ ವರ್ಷದ ಸೆಪ್ಟಂಬರ್ 17ಕ್ಕೆ, ನರೇಂದ್ರ ಮೋದಿ 75ನೇ ವಸಂತಕ್ಕೆ ಕಾಲಿಡಲಿದ್ದಾರೆ. ಹಾಗಾಗಿ, ಪ್ರಧಾನಿ ಹುದ್ದೆಯಿಂದ ಮೋದಿ ಕೆಳಗೆ ಇಳಿಯಲಿದ್ದಾರಾ ಎನ್ನುವ ಪ್ರಶ್ನೆಯನ್ನು ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಎತ್ತಿದ್ದಾರೆ. ವರ್ಷಾಂತ್ಯಕ್ಕೆ ಪದತ್ಯಾಗ ಮಾಡಲಿದ್ದಾರೆ ಎನ್ನುವ ಸುದ್ದಿ ನನ್ನ ಕಿವಿಗೂ ಬಿದ್ದಿದೆ ಎಂದು ಅವರು ಹೇಳಿದ್ದಾರೆ.

- Advertisement -

ಮಾಧ್ಯಮದವರೊಂದಿಗೆ ಮಾತನಾಡಿದ ಸಂತೋಷ್ ಲಾಡ್, “ನಾನು ಪಕ್ಷದ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದೆ. ಆಗ ನನ್ನ ಕಿವಿಗೊಂದು ವಿಷಯ ಬಿತ್ತು. ಅದು, ನಮ್ಮ ನರೇಂದ್ರ ಮೋದಿಯವರು ವರ್ಷಾಂತ್ಯಕ್ಕೆ ಪ್ರಧಾನಿ ಸ್ಥಾನದಿಂದ ಇಳಿಯಲಿದ್ದಾರೆ ಎಂದು. ಅದು ಎಷ್ಟು ನಿಜವೋ ಗೊತ್ತಿಲ್ಲ ” ಎಂದು ಲಾಡ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಹಿಂದೆ ಕೂಡಾ ಮಾಧ್ಯಮದವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು 75 ವರ್ಷದ ಮೇಲ್ಪಟ್ಟವರು, ಚುನಾವಣಾ ರಾಜಕೀಯದಿಂದ ಹಿಂದಕ್ಕೆ ಸರೀಬೇಕಾ ಎನ್ನುವ ಪ್ರಶ್ನೆಯನ್ನು ಕೇಳಿದ್ದರು. ಅದಕ್ಕೆ ಸಿಂಗ್, ಖಡಾಖಂಡಿತವಾಗಿ ಇಲ್ಲ ಎಂದು ಹೇಳಿದ್ದರು. ಆ ರೀತಿಯ ಯಾವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿಲ್ಲ ಎಂದು ಹೇಳಿದ್ದರು.

“ದೆಹಲಿಗೆ ಹೋದಾಗ ಊಹಾಪೋಹಗಳಿವೆ, ಮುಂದೆ ನಿತಿನ್ ಗಡ್ಕರಿಯವರು ಪ್ರಧಾನಿಯಾಗುವ ಸಾಧ್ಯತೆಯಿದೆ. ಈ ವರ್ಷ ಮೋದಿಯವರ ಅವಧಿ ಕೊನೆ ಆಗಬಹುದು. ಯಾಕೆಂದರೆ 75 ವರ್ಷ ಮೇಲ್ಪಟ್ಟವರು ರಾಜಕೀಯದಲ್ಲಿ ಇರಬಾರದು ಎಂದು ಅವರೇ ಮಾಡಿರುವ ಕಾನೂನು. ಆರ್ ಎಸ್ ಎಸ್‌ನವರು ಗಡ್ಕರಿಯವರನ್ನು ಪ್ರಧಾನಿ ಆಗಬೇಕೆಂದು ಪಟ್ಟು ಹಿಡಿದು ಕೂತಿದ್ದಾರೆ ” ಎಂದು ಸಂತೋಷ್ ಲಾಡ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ನಾಯಕತ್ವದ ಜಟಾಪಟಿ ಬರೀ ಕಾಂಗ್ರೆಸ್ಸಿನಲ್ಲಿ ಮಾತ್ರವಲ್ಲ, ಬಿಜೆಪಿಯಲ್ಲೂ ಇದೆ. ಮೋದಿ ಕೆಳಗಿಳಿಯುವ ಊಹಾಪೋಹ ಸುದ್ದಿಗಳು ಇರುವುದರಿಂದ, ಮಾಧ್ಯಮದವರು ಅದನ್ನು ಹೆಚ್ಚುಹೆಚ್ಚು ಪ್ರಚಾರ ಮಾಡಬೇಕು. ಬಿಜೆಪಿಯವರು ಒನ್ ನೇಶನ್, ಒನ್ ಇಲೆಕ್ಷನ್ ಕಾಯಿದೆಯನ್ನು ಸದ್ಯಕ್ಕೆ ಮಂಡಣೆ ಮಾಡುವುದಿಲ್ಲ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.

ನನ್ನ ಬಿಜೆಪಿ ಗೆಳೆಯರೇ ನಿತಿನ್ ಗಡ್ಕರಿ ಮುಂದಿನ ಪ್ರಧಾನಿ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಅವರಲ್ಲೂ ಭಿನ್ನಾಭಿಪ್ರಾಯವಿದೆ, ಕುಟುಂಬ ಎಂದ ಮೇಲೆ ಸಣ್ಣಪುಟ್ಟ ಗೊಂದಲಗಳು ಇರುತ್ತದೆ. ನಮ್ಮಲ್ಲಿ ಯಾರು ಸಿಎಂ ಆಗಬೇಕು, ಕೆಪಿಸಿಸಿ ಅಧ್ಯಕ್ಷರಾಗಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.

ಪ್ರಧಾನಿ ಮೋದಿ ಮತ್ತು ಬಿಜೆಪಿಯವರಿಗೆ ಮತದಾರ ಒಂದು ಅವಕಾಶ ಕೊಟ್ಟಿದ್ದಾನೆ. ಈ ಅವಕಾಶದಲ್ಲಿ ಏನು ಮಿಂಚಬೇಕೋ ಅದಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತಿದ್ದಾರೆ. ಬಿಜೆಪಿಯವರು ಚೆನ್ನಾಗಿ ಹಣ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂತೋಷ್ ಲಾಡ್ ವ್ಯಂಗ್ಯವಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...