ಮೋದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತ ಮಾಜಿ ಪ್ರಧಾನಿ ಕುಟುಂಬದ ಮೇಲೆ ಹೆಚ್ಚು ಒಲವು: ಸಿದ್ದರಾಮಯ್ಯ

Date:

Advertisements

ಜಾತ್ಯತೀತ ಜನತಾದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ತಿಳಿಸಿದ್ದಾರೆ.

Advertisements

“ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್ ಡಿ ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ: ನ.10ರವರೆಗೆ ಪ್ರಾಥಮಿಕ ಶಾಲೆ ಮುಚ್ಚಲು ಸರ್ಕಾರ ಆದೇಶ

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ.

“ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ. ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದು ಸಿದ್ದರಾಮಯ್ಯ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X