ದೇಶದ ಜನರಿಗೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

Date:

“ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ ಎಂದು ತಿಳಿಸಲು ಕಾಂಗ್ರೆಸ್ ನೀಡಿದೆ. ದೇಶದ ಜನರಿಗೆ ರೂ.15 ಲಕ್ಷ ಕೊಟ್ಟರೇ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು , ಅಚ್ಚೇ ದಿನ್ ಬಂದಿದೆಯೇ? ಅದಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಿದೆ” ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ನೀಡಿದರು.

- Advertisement -

ಕಾಂಗ್ರೆಸ್‌ನ ಚೊಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂದು ಬಿಜೆಪಿ ಮಾತನಾಡಿರುವ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮೋದಿ ಕೊಟ್ಟಿರುವ ಆಶ್ವಾಸನೆಗಳನ್ನು ಒಂದನ್ನೂ ಈಡೇರಿಸಿಲ್ಲ. ದೇಶದ ಜನರಿಗೆ ಖಾಲಿ ಚೊಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೊಕ್ಕಸ ಖಾಲಿಯಾಗಿಲ್ಲ. ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ” ಎಂದರು.

“ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ INDIA ಪರವಾದ ವಾತಾವರಣವಿದೆ” ಎಂದು ಹೇಳಿದರು.

“ಕುಮಾರಸ್ವಾಮಿ ಕೋಮುವಾದಿಯಾಗಿದ್ದು, ಜನತಾ ದಳ (ಎಸ್) ಪಕ್ಷವನ್ನು ರದ್ದು ಮಾಡಬೇಕು. ನನಗೆ ಅವರ ಬಗ್ಗೆ ಭಯವಿದ್ದರೆ ಇವರಿಬ್ಬರ ವಿರುದ್ಧ ಹೋರಾಟ ಮಾಡುತ್ತಿರಲಿಲ್ಲ. ಅವರಿಗೆ ನನ್ನ ಭಯವಿರುವುದರಿಂದ ಮೈತ್ರಿ ಮಾಡಿಕೊಂಡಿದ್ದಾರೆ” ಎಂದು ಕುಟುಕಿದರು.

ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ

“ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ. ಇದು ಕೆಟ್ಟ ಮನಸ್ಥಿತಿ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುತ್ತದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...