ಕರ್ನಾಟಕಕ್ಕೆ ನೀಡಲು ‘ಇಲ್ಲ’ ಎಂದಿದ್ದ ‘ಅಕ್ಕಿ’ ಸಿಂಗಾಪುರಕ್ಕೆ ರಫ್ತು ಮಾಡಲು ಹೊರಟ ಕೇಂದ್ರ ಸರ್ಕಾರ!

Date:

Advertisements

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದಾಗ ‘ನಿಮಗೆ ಬೇಕಾದಷ್ಟು ದಾಸ್ತಾನು ಅಕ್ಕಿ ನಮ್ಮಲ್ಲಿ ಇಲ್ಲ’ ಎಂದಿದ್ದ ಕೇಂದ್ರ ಸರ್ಕಾರವು, ಸಿಂಗಾಪುರಕ್ಕೆ ಅಕ್ಕಿಯನ್ನು ರಫ್ತು ಮಾಡಲು ಹೊರಟಿದೆ.

ಮಾನವೀಯ ಕಾರ್ಯಾಚರಣೆಗಳ ಅಡಿಯಲ್ಲಿ ಭಾರತವು ಸಿಂಗಾಪುರಕ್ಕೆ ಇನ್ನೊಮ್ಮೆ 50 ಸಾವಿರ ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡುತ್ತಿದೆ ಎಂದು ಇಬ್ಬರು ಸರ್ಕಾರಿ ಅಧಿಕಾರಿಗಳು ತಿಳಿಸಿರುವುದಾಗಿ ‘ಮಿಂಟ್’ ವರದಿ ಮಾಡಿದೆ.

ಜುಲೈ 20ರಿಂದ ಅನ್ವಯವಾಗುವಂತೆ ಬಾಸ್ಮತಿಯೇತರ ಅಕ್ಕಿ ಮತ್ತು ಇತರ ಕೆಲವು ಧಾನ್ಯಗಳ ರಫ್ತು ಮಾಡುವುದಕ್ಕೆ ಕೇಂದ್ರ ಸರ್ಕಾರವು ನಿಷೇಧ ಹೇರಿತ್ತು. ಕೆಲ ದಿನಗಳ ಹಿಂದೆ ಮತ್ತೆ ಕುಚ್ಚಲಕ್ಕಿ ಮತ್ತು ಬಾಸ್ಮತಿ ಅಕ್ಕಿಯ ಮೇಲೆ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಿದ್ದ ಪರಿಣಾಮ ಏಷ್ಯಾದಲ್ಲಿ ಅಕ್ಕಿ ಬೆಲೆಗಳು 15 ವರ್ಷಗಳ ನಂತರ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದ್ದವು. ಭಾರತದ ಈ ನಿರ್ಧಾರವು ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿತ್ತು.

ಹಿಂಸಾಚಾರ

ಈ ನಡುವೆ ಭಾರತವು ಇತ್ತೀಚೆಗೆ ಯುಎಇ, ಭೂತಾನ್, ಮಾರಿಷಸ್ ಮತ್ತು ಸಿಂಗಾಪುರಕ್ಕೆ ನಿಷೇಧಿತ ವರ್ಗದಲ್ಲಿರುವ ಅಕ್ಕಿ ವಿಧದ ಸೀಮಿತ ರಫ್ತಿಗೆ ಅನುಮತಿ ನೀಡಿದೆ. ಜುಲೈ 20ರ ಭಾರತದ ನಿರ್ಧಾರದ ನಂತರ ಅಕ್ಕಿ ರಫ್ತು ಪುನರಾರಂಭಿಸಲು ಈ ದೇಶಗಳು ಮೋದಿ ಸರ್ಕಾರಕ್ಕೆ ಮನವಿ ಮಾಡಿದ್ದವು.

ಕಳೆದ ಆಗಸ್ಟ್‌ನಲ್ಲಿ ಸಿಂಗಾಪುರವು ಸುಮಾರು 110,000 ಟನ್‌ಗಳಷ್ಟು ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ಕಳುಹಿಸಿಕೊಡುವಂತೆ ವಿನಂತಿಸಿತ್ತು. ಆ ಮನವಿಗೆ 50 ಸಾವಿರ ಟನ್‌ಗಳ ರಫ್ತಿಗೆ ಅನುಮತಿ ನೀಡಿದೆ.

ಈ ನಡುವೆ ವಿಶ್ವಸಂಸ್ಥೆಯು ವಿಶ್ವ ಆಹಾರ ವಿತರಣಾ ಯೋಜನೆಯ ಮಾನವೀಯ ಕಾರ್ಯಕ್ರಮಗಳಿಗಾಗಿ 200,000 ಟನ್‌ಗಳಷ್ಟು ಅಕ್ಕಿಯನ್ನು ನೀಡುವಂತೆ ವಿನಂತಿಸಿದೆ. ಅಲ್ಲದೇ, ಅಕ್ಕಿ ಸೇರಿದಂತೆ ಕೆಲವು ಕೃಷಿ ಉತ್ಪನ್ನಗಳನ್ನು ಪೂರೈಕೆ ಮಾಡುವಂತೆ ಬಾಂಗ್ಲಾದೇಶ ಕೂಡ ಭಾರತದೊಂದಿಗೆ ಮಾತುಕತೆ ನಡೆಸುತ್ತಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭಾರತವು ಆಗಸ್ಟ್ 17 ರವರೆಗೆ 1.97 ಮಿಲಿಯನ್ ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡಿದೆ. ಭಾರತವು ವಿಶ್ವದ ಅತಿದೊಡ್ಡ ಅಕ್ಕಿ ರಫ್ತುದಾರ ದೇಶವಾಗಿದ್ದು, ನಂತರದ ಸ್ಥಾನದಲ್ಲಿ ಥಾಯ್ಲೆಂಡ್‌ ಹಾಗೂ ವಿಯೆಟ್ನಾಂನಂತಹ ದೇಶಗಳಿವೆ.

ಸಿಂಗಾಪುರಕ್ಕೆ ಅಕ್ಕಿ ಕಳುಹಿಸುವ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ “ಕೇಂದ್ರ ಸರ್ಕಾರದವರಿಗೆ ಸಿಂಗಾಪುರಕ್ಕೆ ನೀಡಲು ಅಕ್ಕಿ ಇದೆ. ನಮ್ಮ ರಾಜ್ಯಕ್ಕೆ ಕೇಳಿದಾಗ ಮಾತ್ರ ಅಕ್ಕಿ ಇಲ್ಲ. ಇದೆಲ್ಲ ರಾಜಕೀಯ ಅಂತ ಇದರಲ್ಲಿ ಸ್ಪಷ್ಟವಾಗಿ ಜನರಿಗೆ ಗೊತ್ತಾಗುತ್ತದೆ. ಕರ್ನಾಟಕದ ಬಡವರಿಗೆ ಅಕ್ಕಿ ನೀಡುವುದು ಕೇಂದ್ರ ಸರ್ಕಾರಕ್ಕೆ ಇಷ್ಟವಿಲ್ಲ. ಅನ್ನಭಾಗ್ಯದಡಿಯಲ್ಲಿ ಬಡವರಿಗೆ ಅಕ್ಕಿ ನೀಡಬೇಕಾಗಿತ್ತು. ಆದರೆ ನೀಡಲಿಲ್ಲ. ಬಿಜೆಪಿ ಮತ್ತು ಕೇಂದ್ರ ಸರ್ಕಾರವು ಬಡವರ ವಿರುದ್ದವೇ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

ಕರ್ನಾಟಕಕ್ಕೆ ನೀಡಲು ಇಲ್ಲ ಎಂದಿದ್ದ ಮೋದಿ ಸರ್ಕಾರ!
ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಮೊದಲು ಕಾಂಗ್ರೆಸ್ ಪಕ್ಷವು, ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆ ಜೆ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕಾಂಗ್ರೆಸ್ ಈ ಗ್ಯಾರಂಟಿಯನ್ನು ಜಾರಿಗೆ ತರಲು ಅಕ್ಕಿಯ ಕೊರತೆ ಎದುರಾಗಿತ್ತು. ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಕ್ಕಿ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯಕ್ಕೆ ಬೇಕಿದ್ದ ಅಕ್ಕಿಯನ್ನು ಕೇಂದ್ರ ಆಹಾರ ನಿಗಮದಿಂದ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಕೇಂದ್ರ ಆಹಾರ ನಿಗಮ ರಾಜ್ಯಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿತ್ತು. ಹೀಗಾಗಿ, ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಕೊಡಲಾಗದೇ ತಲಾ 5 ಕೆ ಜಿ ಅಕ್ಕಿ ಹಾಗೂ ಉಳಿದ 5 ಕೆ ಜಿ ಬದಲಾಗಿ ಹಣವನ್ನು ನೀಡುತ್ತಿತ್ತು.

ಅಕ್ಕಿ ಕೊರತೆ ಎದುರಾದ ಹಿನ್ನೆಲೆಯಲ್ಲಿ ಐದು ಕೆ ಜಿ ಅಕ್ಕಿಯ ಬದಲಾಗಿ ಪ್ರತಿಯೊಬ್ಬರಿಗೆ ಪ್ರತಿ ತಿಂಗಳು 170 ರೂ ಹಣವನ್ನು ಹಾಕಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿತ್ತು. ಅದರಂತೆ ಅಕೌಂಟಿಗೆ 170 ರೂ. ಹಣವನ್ನು ಹಾಕಲಾಗಿತ್ತು. ಇದೀಗ ಮುಂಬರುವ ತಿಂಗಳಿಂದ ಹಣಕ್ಕೆ ಬದಲಾಗಿ ಹತ್ತು ಕೆಜಿ ಅಕ್ಕಿಯನ್ನು ಬರ ಪೀಡಿತ ತಾಲೂಕುಗಳಿಗೆ ಪೂರೈಕೆ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ನಿನ್ನೆ ಬೆಂಗಳೂರಿನಲ್ಲಿ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

Download Eedina App Android / iOS

X