ಆರ್‌ಟಿಐ ಕಾಯ್ದೆ ಕೊಲ್ಲುತ್ತಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

Date:

ಪ್ರಜಾಪ್ರಭುತ್ವವನ್ನು ಕೊನೆಗೊಳಿಸುವ ಪಿತೂರಿಯ ಭಾಗವಾಗಿ ನರೇಂದ್ರ ಮೋದಿ ಸರ್ಕಾರ ಮಾಹಿತಿ ಹಕ್ಕು ಕಾಯ್ದೆಯನ್ನು(ಆರ್‌ಟಿಐ) ಹಂತಹಂತವಾಗಿ ಕೊಲ್ಲುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಆರ್‌ಟಿಐ ವೆಬ್‌ಸೈಟ್‌ನಿಂದ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಕಣ್ಮರೆಯಾದ ಬಗ್ಗೆ ಮಾಧ್ಯಮವೊಂದರ ವರದಿಯ ತುಣುಕನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಖರ್ಗೆಯವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೋದಿ ಸರ್ಕಾರವು ಆರ್‌ಟಿಐ ಕಾಯ್ದೆಯನ್ನು ಹಂತಹಂತವಾಗಿ ಕೊಲ್ಲುತ್ತಿದೆ. ಇದು ಕೇವಲ ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿಯಲ್ಲ, ಆದರೆ ಪ್ರಜಾಪ್ರಭುತ್ವವನ್ನು ಕೊನೆಗೊಳಿಸುವ ಪಿತೂರಿಯ ಮತ್ತೊಂದು ಹೆಜ್ಜೆ” ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಅಣಕ | ಹನಿ ಟ್ರ್ಯಾಪ್ ಎಲ್ಲ ಹಳೇದು, ಈಗ ಏನಿದ್ರು ಗುರು ಟ್ರ್ಯಾಪ್!

ದತ್ತಾಂಶ ಸಂರಕ್ಷಣಾ ಕಾನೂನಿನ ನೆಪದಲ್ಲಿ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿರುವುದು ನಿರಂಕುಶ ಸರ್ಕಾರದಿಂದ ಮಾಹಿತಿ ಹಕ್ಕಿನ ಮೇಲೆ ಹೇಡಿತನದ ದಾಳಿಯಾಗಿದೆ ಎಂದು ಆರೋಪಿಸಿದರು.

ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಅಧಿವೇಶನದಲ್ಲಿ ಅಂಗೀಕರಿಸಲಾದ ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯು ಆರ್‌ಟಿಐ ಕಾಯ್ದೆಯ ನಿಬಂಧನೆಗಳನ್ನು ದುರ್ಬಲಗೊಳಿಸುತ್ತದೆ ಎಂದು ಹಲವಾರು ವಿರೋಧ ಪಕ್ಷಗಳು ಮತ್ತು ನಾಗರಿಕ ಸಮಾಜ ಗುಂಪುಗಳು ಟೀಕೆ ವ್ಯಕ್ತಪಡಿಸಿವೆ.

“ಮೋದಿ ಸರ್ಕಾರದ ಆಡಳಿತದ ಬಗ್ಗೆ ಹಲವರು ಟೀಕೆ ವ್ಯಕ್ತಪಡಿಸಿದ್ದಾರೆ. ಆದರೂ ನಾಚಿಕೆಯಿಲ್ಲದೆ ಪಾರದರ್ಶಕ ಆಡಳಿತದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುತ್ತಿಲ್ಲ” ಎಂದು ಖರ್ಗೆ ಆರೋಪಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ವಿರುದ್ಧ ದ್ವೇಷಕಾರಿದ ಮೋದಿ; ’ಹತಾಶೆಯ ಪರಮಾವಧಿ’ ಎಂದ ಜನತೆ

"ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೆರುತ್ತಾರೆ ಎಂದಿದ್ದಾರೆ ಮೋದಿ. ಆದರೆ ತಮ್ಮ ಪಕ್ಕದಲ್ಲೇ...

ಓಡೋ.. ಓಡೋ.. ಓಡೋಲೇ – ಬೆಂಗಳೂರು ದಕ್ಷಿಣದಿಂದಲೂ ಓಡುವರೇ ತೇಜಸ್ವಿ ಸೂರ್ಯ

ಬಿಜೆಪಿಯ ಅಗ್ರಹಾರದಲ್ಲಿ ಪ್ರಬಲ ವಾಗ್ಮಿ ಎಂದೇ ಕರೆಸಿಕೊಂಡಿರುವ ತೇಜಸ್ವಿ ಸೂರ್ಯ ಅಷ್ಟೇ...

ಕರ್ನಾಟಕಕ್ಕೆ ಬರ ಪರಿಹಾರ ನೀಡಲು ಚುನಾವಣಾ ಆಯೋಗ ಸಮ್ಮತಿ, ಶೀಘ್ರವೇ ಹಣ ಬಿಡುಗಡೆ; ಸುಪ್ರೀಂಗೆ ಕೇಂದ್ರ ಮಾಹಿತಿ

ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ನೀಡಲಾಗಿದೆ. ಕರ್ನಾಟಕಕ್ಕೆ ಮೋಸವಾಗಿಲ್ಲವೆಂದು ಬೊಬ್ಬೆ...

ಡೇಂಜರ್ ಜಾಹೀರಾತು | ಅಕ್ಷರಶಃ ಇದು ಬಿಜೆಪಿಯ ಅಪಾಯಕಾರಿತನವನ್ನು ಪ್ರತಿನಿಧಿಸುತ್ತಿದೆ, ಎಚ್ಚರಿಕೆ!

ಕಾಂಗ್ರೆಸ್‌ಗೆ ವಿರುದ್ದವಾಗಿ ಇಂದು ಬಿಜೆಪಿ ಪ್ರಾಯೋಜಿಸಿರುವ ಜಾಹೀರಾತಿನಲ್ಲಿ ಯಾವುದೇ ಅಭಿವೃದ್ಧಿ ಮತ್ತು...