ಮೋದಿಯವರೇ, ಒಮ್ಮೆ ನಂದಿನಿ ಬ್ರ್ಯಾಂಡ್‌ನ ರುಚಿ ನೋಡಿ: ಗೌರವ್ ವಲ್ಲಭ್‌

Date:

  • ನಂದಿನಿ ಉತ್ಪನ್ನಗಳ ರುಚಿ ಸವಿಯುವಂತೆ ಮೋದಿಗೆ ಆಗ್ರಹ
  • ರಾಜ್ಯ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದ ಗೌರವ್ ವಲ್ಲಭ್‌

ನಂದಿನಿ ಬ್ರ್ಯಾಂಡ್‌ನಲ್ಲಿ ಯಾವ ಲೋಪದೋಷವಿದೆ ಎಂದು ಬಿಜೆಪಿ ನಾಯಕರು ಅದರ ವಿರುದ್ಧ ನಿಂತಿದ್ದಾರೆ ಎಂದು ಎಐಸಿಸಿ ವಕ್ತಾರ ಗೌರವ್ ವಲ್ಲಭ್‌ ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರ ಸರ್ಕಾರ ಪ್ರತಿ ರಾಜ್ಯಗಳಲ್ಲಿ ಅದರದೇ ಆದ ಹೆಮ್ಮೆಯ ಸಂಸ್ಥೆಗಳನ್ನು ನಾಶ ಮಾಡಲು ಮುಂದಾಗುತ್ತಿದೆ. ಇದಕ್ಕೆ ಸೂಕ್ತ ಉದಾಹರಣೆ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ವಿರುದ್ಧದ ದಾಳಿ” ಎಂದಿದ್ದಾರೆ.

“ನಂದಿನಿ ಬ್ರ್ಯಾಂಡ್‌ನಲ್ಲಿ ಯಾವ ಲೋಪದೋಷವಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ನಂದಿನಿ ವಿರುದ್ಧ ನಿಂತಿದ್ದಾರೆ? ನಂದಿನಿ ಉತ್ಪನ್ನಗಳಲ್ಲಿ ಯಾವ ದೋಷವಿದೆ? ಈ ಉತ್ಪನ್ನಗಳ ಮೇಲೆ ಕನ್ನಡ ಭಾಷೆ ಬಳಸಲಾಗಿದೆ ಎಂಬುದು ನಿಮ್ಮ ಸಮಸ್ಯೆಯೇ?” ಎಂದು ವ್ಯಂಗ್ಯವಾಡಿದ್ದಾರೆ.

“ಮೋದಿ ಹಾಗೂ ಅಮಿತ್ ಶಾ ಅವರು ನಂದಿನ ಉತ್ಪನ್ನಗಳ ರುಚಿ ನೋಡಬೇಕು. ಇದು ಕರ್ನಾಟಕದ ಹೆಮ್ಮೆ. ಆರೂವರೆ ಕೋಟಿ ಜನರ ಈ ಹೆಮ್ಮೆಯನ್ನು ಯಾಕೆ ತುಳಿಯಲು ಹೊರಟಿದ್ದೀರಿ? ಇದರಿಂದ ಏನು ಸಾಧಿಸಲು ಹೊರಟಿದ್ದೀರಿ? ಅಮಿತ್ ಶಾ ಅವರೇ ಸಹಕಾರಿ ಸಚಿವಾಲಯದ ಮೂಲ ಉದ್ದೇಶವೇನು?” ಎಂದು ಪ್ರಶ್ನಿಸಿದ್ದಾರೆ.

“ನೀವು ಸಹಕಾರ ಕ್ಷೇತ್ರದಲ್ಲೂ ಸ್ಪರ್ಧೆ ತರಲು ಹೊರಟಿದ್ದೀರಿ. ಉದ್ದೇಶಪೂರ್ವಕವಾಗಿ ಇದನ್ನು ಯಾಕೆ ಮಾಡುತ್ತಿದ್ದೀರಿ. ನಂದಿನಿ ಆಶ್ರಯದಲ್ಲಿ ಸುಮಾರು ₹2 ಕೋಟಿ ಜನರು ಆಶ್ರಯ ಪಡೆದಿದ್ದಾರೆ” ಎಂದು ಹೇಳಿದ್ದಾರೆ.

“ಮೋದಿ ಅವರೇ ಇನ್ನು ಒಂದು ತಿಂಗಳು ಮೂರು ದಿನಗಳು ಮಾತ್ರ ಬಾಕಿ ಇವೆ. ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನಂತರ ಕರ್ನಾಟಕದ ಹೆಮ್ಮೆಯ ಸಂಸ್ಥೆಗಳನ್ನು ಯಾರೂ ಕೂಡ ಮುಟ್ಟಲು ಸಾಧ್ಯವಿಲ್ಲ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? 40% ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ: ಶಶಿ ತರೂರ್

“ದೆಹಲಿಯಲ್ಲಿ ಕೂತು ಕರ್ನಾಟಕದ ಹೆಮ್ಮೆಯ ಸಂಸ್ಥೆಗಳ ಭವಿಷ್ಯ ನಿರ್ಧರಿಸಲು ಬಿಡುವುದಿಲ್ಲ. ನಂದಿನಿ ಬ್ರ್ಯಾಂಡ್ ರೈತರು, ಕಾರ್ಮಿಕರ ಪರಿಶ್ರಮದ ಫಲ. ಮೋದಿ ಅವರು ಒಮ್ಮೆ ಇದರ ರುಚಿ ನೋಡಲಿ, ಅವರು ತಮ್ಮ ನಿಲುವು ಬದಲಿಸಬಹುದು” ಎಂದು ಹೇಳಿದ್ದಾರೆ.

ನಂದಿನಿ ವಿನಾಶಕ್ಕೆ ಬಿಜೆಪಿ ಯಾಕೆ ಮುಂದಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಗೌರವ್ ವಲ್ಲಭ್‌, “ಈ ನಂದಿನಿ ಉತ್ಪನ್ನಗಳಲ್ಲಿ ಯಾವ ದೋಷವಿದೆ? ಎಂಬುದು ನನ್ನ ಮೂಲಭೂತ ಪ್ರಶ್ನೆ. ಇದು ರುಚಿ ಇಲ್ಲವೇ? ತಾಜವಾಗಿಲ್ಲವೇ? ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿಲ್ಲವೇ? ಇದನ್ನು ಸೇವಿಸುತ್ತಿರುವ ಜನರು ಇದನ್ನು ಆಸ್ವಾದಿಸುತ್ತಿಲ್ಲವೇ? ಯಾವ ಕಾರಣಕ್ಕೆ ನಂದಿನಿಗೆ ಜತೆ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದಾರೆ” ಎಂದು ಕೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಗಮ ಮಂಡಳಿ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನೂ ಪಡೆದಿಲ್ಲ: ಸಿದ್ದರಾಮಯ್ಯ

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಕಾನೂನುಬಾಹಿರ ನ್ಯಾಯಾಲಯದ ಮೊರೆ...

‘ಮಹಾಧರಣಿ’ಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಡಿ.19ರಂದು ಮಹತ್ವದ ಸಭೆ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕಳೆದ ಮೂರು ದಿನಗಳಿಂದ ಸಂಯುಕ್ತ ಹೋರಾಟ ಸಮಿತಿಯ...

ದೇಶದಲ್ಲಿ ‘ಬ್ರ್ಯಾಂಡ್‌ ಬೆಂಗಳೂರು’ ನಂಬರ್ ಒನ್ ಆಗಿಸಬೇಕಿದೆ: ಸಿದ್ದರಾಮಯ್ಯ

'ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಸುಸ್ಥಿರ ಬೆಳವಣಿಗೆ ಕಾಣಬೇಕು' 'ರಾಜ್ಯದ...

‘ಫ್ರೀಡಂ ಪಾರ್ಕ್’ನಿಂದ ನಮಗೆ ‘ಫ್ರೀಡಂ’ ಕೊಡಿ: ಸಿಎಂ ಸಿದ್ದರಾಮಯ್ಯಗೆ ‘ಮಹಾಧರಣಿ’ ಆಗ್ರಹ

ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಪ್ರತಿಯೊಂದು ಪ್ರತಿಭಟನೆಗಳು ಕೇವಲ 'ಫ್ರೀಡಂ ಪಾರ್ಕ್‌'ಗೆ ಸೀಮಿತವಾಗಿದ್ದು,...