ಒಕ್ಕೂಟ ವ್ಯವಸ್ಥೆಗೆ ಮೋದಿ ಅವರಿಂದ ಅಪಾಯ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Date:

ಪ್ರಧಾನಿ ನರೇಂದ್ರ ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ವಿಧಾನ‌ ಪರಿಷತ್‌ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುತ್ತಿದ್ದ ವೇಳೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿ ಮಾತನಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ50 ರಷ್ಟು ವಾಪಾಸ್ ಕೊಡಿ” ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು” ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

“ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ?” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

“ಕೇಂದ್ರದಿಂದ ರಾಜ್ಯಕ್ಕೆ ಬರುತ್ತಿರುವ ಹಣದ ಪಾಲು ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ ₹24,44,213 ಕೋಟಿ ಇತ್ತು. ಅಂದು ರಾಜ್ಯಕ್ಕೆ ₹51,000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ ₹30,42,243 ಕೋಟಿ ಇದ್ದರೆ ನಮಗೆ ಬಂದಿದ್ದು ₹31734ಕೋಟಿ, 2021-22 ರಲ್ಲಿ ₹34,83,236 ಕೋಟಿ ಗಾತ್ರದ ಬಜೆಟ್ ಗೆ, ರಾಜ್ಯಕ್ಕೆ ₹48589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ ₹4181232 ಕೋಟಿ, ರಾಜ್ಯಕ್ಕೆ ₹53510 ಕೋಟಿ ಮಾತ್ರ ಬಂತು. 2023-24ರಲ್ಲಿ ₹45,03007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು ₹50257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ ₹59785 ಕೋಟಿ ಬರುತ್ತದೆ” ಎಂದು ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.

“ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ದುರ್ಬಲಗೊಳಿಸಬಾರದು. ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು” ಎಂದರು.

“ರಾಜ್ಯಕ್ಕೆ ಮತ್ತು ರಾಜ್ಯದ ಜನತೆಯ ಪಾಲಿಗೆ ಆಗುತ್ತಿರುವ ಅನ್ಯಾಯವನ್ನು ನಾವು ಪ್ರಶ್ನಿಸಿದರೆ, ಪ್ರಧಾನಿ ಮೋದಿ ಅವರು ದೇಶ ವಿಭಜನೆಯ ಮಾತಾಡುತ್ತೇವೆ ಎಂದರು. ಪ್ರಧಾನಿ ಅವರ ಮಾತನ್ನು ಪ್ರಸ್ತಾಪಿಸಿದ ಬಳಿಕ ಬಿಜೆಪಿ ಸದಸ್ಯರು ಜೋರು ಧ್ವನಿಯಲ್ಲಿ ಪ್ರಧಾನಿ ಅವರು ಹಾಗೆ ಹೇಳಿಯೇ ಇಲ್ಲ ಎಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರಾದ ಪ್ರಕಾಶ್ ರಾಥೋಡ್ ಅವರು, ಪ್ರಧಾನಿ ಮೋದಿಯವರಂತೂ ಸುಳ್ಳು ಹೇಳುವುದು ಮೂಮೂಲು. ಬಿಜೆಪಿ ಸದಸ್ಯರೂ ಸುಳ್ಳು ಹೇಳುವುದನ್ನು ಮುಂದುವರೆಸಿದ್ದಾರೆ” ಎಂದು ಕುಟುಕಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಭಾಸ್‌ ಅಭಿನಯದ ‘ಕಲ್ಕಿ 2898 ಎಡಿ’ ಏಕಕಾಲದಲ್ಲೇ ಮೂರು ‘ಒಟಿಟಿ’ಗಳಿಗೆ ಮಾರಾಟ

ತೆಲುಗು ನಟ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಭಾರತದ ಅತ್ಯಂತ...

ಮೋದಿ ಸುಳ್ಳುಗಳು | ಶೋಷಣೆಯಿಂದ ಮುಕ್ತಿ ನೀಡದ ಮೋದಿ, ಬುಡಕಟ್ಟುಗಳ ಅಭಿವೃದ್ಧಿಗೆ ನಿಲ್ಲುತ್ತಾರೆಯೇ?  

ಜಾರ್ಖಂಡ್‌ನ ದುಮ್ಕಾದಲ್ಲಿ ಇಂದು ನಡೆದ ಸಾರ್ವಜನಿಕ  ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ...

ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್‌ ಪಾರ್ಟಿ’ ಪ್ರಕರಣಕ್ಕೆ...

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...