ಮೋದಿ ರಾಜ್ಯಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ; ಸಿದ್ದರಾಮಯ್ಯ ಪ್ರಶ್ನೆ

Date:

  • ಆರ್‌ಎಸ್‌ಎಸ್‌ನಿಂದ ಸರ್ಕಾರಿ ಜಮೀನು ಉಳಿಸಬೇಕು
  • ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ ಅಥವಾ ಕಿತ್ತುಕೊಳ್ಳುವುದಕ್ಕೋ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೋದಿಯವರು ರಾಜ್ಯಕ್ಕೆ ಬಂದ ಪ್ರತಿ ಭಾರಿಯೂ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿ ಪ್ರಶ್ನೆಗಳ ಸುರಿಮಳೆಗೈಯುತ್ತಾರೆ. ಅಂತೆಯೇ ಈ ಬಾರಿ ಅಮುಲ್ ವಿವಾದದ ಕುರಿತು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಪ್ರಧಾನಿ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ?” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

“ನಮ್ಮ ವಿಜಯಾ ಬ್ಯಾಂಕನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್‌ನದ್ದು, ಬಂದರು, ಏರ್ ಪೋರ್ಟ್ ನುಂಗಿದ ಅದಾನಿ ಗುಜರಾತ್‌ನವರು, ಈಗ ಕೆಎಂಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್‌ನದ್ದು. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ” ಎಂದು ಪ್ರಶ್ನಿಸಿದ್ದಾರೆ.

“ಈ ಗುಜರಾತಿ ಆಕ್ರಮಣ ಇನ್ನು ಸಹಿಸಲು ಸಾಧ್ಯ ಇಲ್ಲ. ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟವನ್ನು ಗೌರವಪೂರ್ವಕವಾಗಿ ನಿಲ್ಲಿಸಿ. ಕನ್ನಡಿಗರ ನಾಡಪ್ರೇಮ, ಸ್ವಾಭಿಮಾನವನ್ನು ಕೆಣಕಿದರೆ ಮೋದಿಯವರೇ, ಪರಿಣಾಮ ನೆಟ್ಟಗಾಗದು” ಎಂದು ಎಚ್ಚರಿಕೆ ನೀಡಿದ್ದಾರೆ.

“ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಅಮುಲ್ ಜೊತೆ ಕೆಎಂಎಫ್ ವಿಲೀನದ ಪ್ರಸ್ತಾವ ಮಾಡಿದ ದಿನದಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರಹಾರ ಶುರುವಾಗಿದೆ, ಏನಿದು ನಿಮ್ಮ ಕರಾಮತ್ತು” ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧ: ಡಿ ಕೆ ಶಿವಕುಮಾರ್

“ಭರವಸೆ ನೀಡಿದಂತೆ ಯುವಜನರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ, ಬದಲಿಗೆ ನಮ್ಮ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳಲ್ಲಿನ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಂಡಾಯಿತು. ಈಗ ರೈತರ ಹೊಟ್ಟೆ ಮೇಲೆ ಹೊಡೆಯುವ ಹುನ್ನಾರವೇ” ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

“ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕ್ಷೀರಧಾರೆ ಮತ್ತು ಕ್ಷೀರಭಾಗ್ಯ ಯೋಜನೆಗಳು ಅನ್ನಭಾಗ್ಯ ಯೋಜನೆಯ ರೀತಿಯಲ್ಲಿಯೇ ನನಗೆ ಸಂತೃಪ್ತಿ ತಂದ ಯೋಜನೆಗಳು. ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸೆನ್ಸ್ ಕೊಡುವುದೇ ಮೋದಿಯವರೇ” ಎಂದು ಕುಟುಕಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. 99 ಲಕ್ಷ ಲೀಟರ್ ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಇದು ನೀವು ಮತ್ತು ಅಮಿತ್ ಶಾ ಕೂಡಿ ಕೆಎಂಎಫ್ ವಿರುದ್ಧ ಮಾಡಿರುವ ಷಡ್ಯಂತ್ರವೇ” ಎಂದು ಹರಿಹಾಯ್ದಿದ್ದಾರೆ.

ಕೆಎಂಎಫ್ ಹಾಲು ಖರೀದಿಸುತ್ತಿಲ್ಲ ಎಂದು ಹಳ್ಳಿಗಳಲ್ಲಿ ಪಶುಪಾಲಕರು ಗೋಳಾಡುತ್ತಿದ್ದಾರೆ. ಹಾಲು ಸಂಗ್ರಹದ ಪ್ರಮಾಣ ಕಡಿಮೆಯಾಗಿರುವ ಕಾರಣದಿಂದಾಗಿ ಪ್ರತಿದಿನ ಸುಮಾರು 11 ಕೋಟಿ ರೂಪಾಯಿ ಹಣ ರೈತರ ಕೈತಪ್ಪಿ ಹೋಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

“ಗುಜರಾತ್ ರಾಜ್ಯದ ಅಮುಲ್ ಪ್ರವೇಶದಿಂದ ನಂದಿನಿಯ ಬೇಡಿಕೆ ಇನ್ನಷ್ಟು ಕುಸಿದು ಕೆಎಂಎಫ್ ಹಾಲಿನ ಸಂಗ್ರಹ ಕಡಿಮೆಯಾಗಲಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರ ಪ್ರಮುಖ ಆದಾಯದ ಮೂಲವಾದ ಹೈನುಗಾರಿಕೆಗೆ ಯಾಕೆ ಕಲ್ಲು ಹಾಕುತ್ತಿದ್ದೀರಾ?” ಎಂದಿದ್ದಾರೆ.

“ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಬರ್ವಾಲ್ ಗಳು, ಬಿಂದ್ರಾಗಳು, ಜೈನ್ ಗಳು, ಶರ್ಮಾಗಳ ಬೀಫ್ ರಫ್ತು ಪ್ರಮಾಣ ಸಾವಿರಾರು ಕೋಟಿಗಳಿಗೆ ಏರಿಕೆಯಾಗಿರುವುದಾಗಿ ವರದಿಗಳಿವೆ. ಇವರ ಮೇಲಿರುವ ಕೃಪಕಟಾಕ್ಷ ಯಾರದ್ದು” ಎಂದು ಪ್ರಶ್ನಿಸಿದ್ದಾರೆ.

ಆರ್‌ಎಸ್‌ಎಸ್ ಗೆ ಸರ್ಕಾರಿ ಜಮೀನು

“ರಾಜ್ಯ ಸರ್ಕಾರ, ಸರ್ಕಾರಿ ಕಾವಲು ಜಮೀನುಗಳನ್ನು, ಡಿನೋಟಿಫೈ ಮಾಡಿ ಉಳ್ಳವರಿಗೆ, ಆರ್‌ಎಸ್‌ಎಸ್ ನವರಿಗೆ, ಬಂಡವಾಳಿಗರಿಗೆ ಹಂಚಲು ಪ್ರಾರಂಭಿಸಿದೆ. ಟಿಪ್ಪುಸುಲ್ತಾನನ ದೂರದೃಷ್ಟಿಯ ಫಲವಾದ ಲಕ್ಷಾಂತರ ಎಕರೆ ವಿಸ್ತೀರ್ಣದ ಅಮೃತ್ ಮಹಲ್ ಕಾವಲು ಪ್ರದೇಶ ಮಾಯವಾಗುತ್ತಿರುವುದು ಯಾರಿಂದ?” ಎಂದು ಕೇಳಿದ್ದಾರೆ.

“ಆರ್‌ಎಸ್‌ಎಸ್ ಗೆ ಸರ್ಕಾರಿ ಜಮೀನುಗಳನ್ನು ಮನಸೋ ಇಚ್ಛೆ ನೀಡಲಾಗುತ್ತಿದೆ. ನಮ್ಮ ರೈತರ ಜಾನುವಾರುಗಳಿಗೆ ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಕೆಶಿ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಸರ್ಕಾರ; ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ಯತ್ನಾಳ್

ಉಪಮುಖ್ಯಮಂತ್ರಿ‌ ಡಿಕೆ ಶಿವಕುಮಾರ್‌ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ‌...

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು,...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್...

ಪ್ರಜಾಪ್ರಭುತ್ವ, ಜಾತ್ಯತೀತತೆ ಹಾಗೂ ಮಾನವ ಹಕ್ಕುಗಳ ಉಳಿವಿಗಾಗಿ ಆಂದೋಲನಕ್ಕೆ ಕರೆ

ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ ಕರೆ ...