‘ಮೋದಿ ಗ್ಯಾರಂಟಿಗೆ ಝೀರೋ ವ್ಯಾರಂಟಿ’; ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

Date:

ಬಿಜೆಪಿಯ ಮೋದಿ ಗ್ಯಾರಂಟಿಯನ್ನು ಟೀಕೆ ಮಾಡಿರುವ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, “ಮೋದಿ ಗ್ಯಾರಂಟಿಗೆ ಜಿರೋ ವ್ಯಾರಂಟಿ” ಎಂದಿದ್ದಾರೆ. ಬಿಜೆಪಿಯನ್ನು ‘ಹೊರಗಿನವರು’ ಎಂದಿರುವ ಅಭಿಷೇಕ್, “ಬಿಜೆಪಿಯವರು ಪಶ್ಚಿಮ ಬಂಗಾಳದ ವಿರೋಧಿಗಳು” ಎಂದು ಆರೋಪಿಸಿದರು.

- Advertisement -

2024ರ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷಗಳು ಬಿಡುಗಡೆ ಮಾಡುತ್ತಿದ್ದು ರಾಜಕೀಯ ಮುಖಂಡರುಗಳು ಪರಸ್ಪರ ವಾಗ್ದಾಳಿಯನ್ನು ಕೂಡಾ ನಡೆಸುತ್ತಿದ್ದಾರೆ. ಭಾನುವಾರ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಜನ ಗರ್ಜನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಭಿಷೇಕ್ ಬ್ಯಾನರ್ಜಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...


“ಬಿಜೆಪಿಯವರು ಬರೀ ಚುನಾವಣೆ ಬಂದಾಗ ಮಾತ್ರ ಪಶ್ಚಿಮ ಬಂಗಾಳಕ್ಕೆ ಬರುತ್ತಾರೆ, ಅವರು ಹೊರಗಿನವರು, ಬಂಗಾಳ ವಿರೋಧಿಗಳು” ಎಂದಿರುವ ಬ್ಯಾನರ್ಜಿ, “ರಾಜ್ಯದ ನಿಧಿಯನ್ನು ನೀಡದಿರುವ ಕೇಸರಿ ಪಕ್ಷಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಂಗಾಳದ ಜನರು ಉತ್ತರ ನೀಡುತ್ತಾರೆ” ಎಂದರು.

“ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪಕ್ಷ ಮಾತ್ರ ನೀಡಿದ ಭರವಸೆಯನ್ನು ಈಡೇರಿಸುತ್ತದೆ. ಬಿಜೆಪಿ ಮತ್ತು ಅದರ ನಾಯಕರುಗಳು ಬಂಗಾಳ ವಿರೋಧಿಗಳು. ಹಾಗಾಗಿ ರಾಜ್ಯಕ್ಕೆ ನೀಡಬೇಕಾದ ಹಣವನ್ನು ನೀಡದೆ ಬಾಕಿ ಉಳಿಸಿದ್ದಾರೆ” ಎಂದು ಆರೋಪಿಸಿದರು. “ಕೇಂದ್ರ ಸರ್ಕಾರವು ನಡೆಸುವ ಇಡಿ ಮತ್ತು ಸಿಬಿಐ ದಾಳಿಗಳು ಯಾವುದೇ ಪರಿಣಾಮ ಬೀರದು” ಎಂದು ಈ ಸಂದರ್ಭದಲ್ಲೇ ಹೇಳಿದರು.

ಟಿಎಂಸಿ ಅಭ್ಯರ್ಥಿಗಳ ಘೋಷಣೆ

ಟಿಎಂಸಿ ಭಾನುವಾರ ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು ಪಟ್ಟಿಯಲ್ಲಿ ಭಾರತ ತಂಡ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಹೆಸರು ಕೂಡಾ ಕಾಣಿಸಿಕೊಂಡಿದೆ. ಯೂಸುಫ್ ಪಠಾಣ್ ಬಹರಂಪುರದಿಂದ ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕನಾಗಿರುವ ಅಧೀರ್‌ ರಂಜನ್‌ ಚೌಧರಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ಮಾಜಿ ಸಂಸದೆ ಮಹುವಾ ಮೊಯಿತ್ರಾ ಕೃಷ್ಣನಗರದಿಂದ ಸ್ಪರ್ಧಿಸಿದರೆ, ಮಮತಾ ಬ್ಯಾನರ್ಜಿ ಸೋದರಳಿಯ ಮತ್ತು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್‌ನಿಂದ ಸ್ಪರ್ಧಿಸಲಿದ್ದಾರೆ. ನಟ ಶತ್ರುಘ್ನ ಸಿನ್ಹಾ ಅಸನ್ಸೋಲ್‌ನಿಂದ ಕಣಕ್ಕಿಳಿದರೆ, 1983ರಲ್ಲಿ ಭಾರತ ವಿಶ್ವಕಪ್‌ ಗೆದ್ದ ಕ್ರಿಕೆಟ್‌ ತಂಡದ ಸದಸ್ಯ ಕೀರ್ತಿ ಅಜಾದ್‌ ದುರ್ಗಾಪುರ ಬುರ್ದ್ವಾನ್‌ನಿಂದ ಕಣಕ್ಕಿಳಿಯುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...