ಮೋದಿ ಆತ್ಮಸ್ಥೈರ್ಯ ಕಳೆದುಕೊಂಡು ಭಾಷಣ ಮಾಡುವಾಗ ತೊದಲುತ್ತಿದ್ದಾರೆ: ಅಖಿಲೇಶ್ ಯಾದವ್

Date:

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ಅರಿತ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮಸ್ಥೈರ್ಯ ಕಳೆದುಕೊಂಡಿದ್ದಾರೆ, ಭಾಷಣದ ವೇಳೆ ತೊದಲುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ.

ಸೇಲಂಪುರದ ಪಕ್ಷದ ಅಭ್ಯರ್ಥಿ ರಾಮ್ ಶಂಕರ್ ವಿದ್ಯಾರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅಖಿಲೇಶ್ ಯಾದವ್, “ಇಂಡಿಯಾ ಒಕ್ಕೂಟದ ಸರ್ಕಾರ ರಚನೆ ಮಾಡಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಜೂನ್ 4ರ ನಂತರ ಮತಗಳ ಎಣಿಕೆ ದಿನ, ಕೇಂದ್ರ ಸಚಿವ ಸಂಪುಟ ಮತ್ತು ಮಾಧ್ಯಮಗಳು ಕೂಡಾ ಬದಲಾಗುತ್ತದೆ” ಎಂದರು.

ಇದನ್ನು ಓದಿದ್ದೀರಾ?  ದೇಶದಲ್ಲಿ ಹಲವು ಸಮಸ್ಯೆಗಳಿವೆ: ಸಂಸದೆ ಮೇಲಿನ ಹಲ್ಲೆ ವಿಷಯಕ್ಕೆ ಅಖಿಲೇಶ್ ಉತ್ತರ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂಡಿಯಾ ಒಕ್ಕೂಟ ಸರ್ಕಾರ ರಚಿಸಿದರೆ ಅಗ್ನಿವೀರ್ ಯೋಜನೆಯನ್ನು ತೆಗೆದುಹಾಕುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲೇ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

“ಆತ್ಮಸ್ಥೈರ್ಯ ಕಳೆದುಕೊಂಡಾಗ ಮಾತು ತಡವರಿಸುತ್ತದೆ. ತಮ್ಮ ಸರ್ಕಾರ ಇನ್ನು ಮುಂದೆ ಇರಲ್ಲ ಎಂದು ಮೋದಿ ಅರಿವಿಗೆ ಬಂದಿದೆ. ‘400-ಪಾರ್’ ಘೋಷಣೆ ನೀಡಿದವರು ಈಗ ಸೋತು ಹೋಗಲಿದ್ದಾರೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ದೇಶದಲ್ಲಿ ಹಲವು ಸಮಸ್ಯೆಗಳಿವೆ: ಸಂಸದೆ ಮೇಲಿನ ಹಲ್ಲೆ ವಿಷಯಕ್ಕೆ ಅಖಿಲೇಶ್ ಉತ್ತರ

ಬಿಜೆಪಿ ವಿರುದ್ಧ ಜನರ ಆಕ್ರೋಶ ತೀವ್ರಗೊಂಡಿದೆ ಎಂದು ಪ್ರತಿಪಾದಿಸಿದ ಯಾದವ್, “ದೇಶದ 140 ಕೋಟಿ ಜನರು ಬಿಜೆಪಿಯನ್ನು 140 ಸ್ಥಾನಗಳಿಗೂ ಹಾತೊರೆಯುವಂತೆ ಮಾಡುತ್ತಾರೆ” ಎಂದು ಭರವಸೆ ವ್ಯಕ್ಷಪಡಿಸಿದರು.

“ಮೋದಿ ಸರ್ಕಾರವು ಕೈಗಾರಿಕೋದ್ಯಮಿಗಳ 25 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ಸಾಲವನ್ನು ಮನ್ನಾ ಮಾಡಿದೆ. ಇಂಡಿಯಾ ಕೂಟದ ಸರ್ಕಾರವು ರೈತರ ಸಾಲವನ್ನು ಮನ್ನಾ ಮಾಡುತ್ತದೆ ಮತ್ತು ಅವರಿಗೆ ಎಂಎಸ್‌ಪಿ ಅನ್ನು ಜಾರಿಗೊಳಿಸುತ್ತದೆ” ಎಂದು ಅವರು ಹೇಳಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್ ಕಚೇರಿಯಲ್ಲಿ ಅಕಾಡೆಮಿ ಅಧ್ಯಕ್ಷರು ವರದಿ ಒಪ್ಪಿಸುವುದು – ಅರ್ವೆಲ್ ಮಾತನ್ನು ನೆನಪಿಸುತ್ತದೆ

'ದ್ವಂದಾಲೋಚನೆ ಎಂದರೆ ಏಕಕಾಲದಲ್ಲಿ ಮನಸ್ಸಿನಲ್ಲಿ ಎರಡು ತದ್ವಿರುದ್ಧ ನಂಬಿಕೆಗಳನ್ನು ಇಟ್ಟುಕೊಳ್ಳುವುದು ಮತ್ತು...

ಬಹುತ್ವದ ಪರವಾಗಿ ಇರುವವರನ್ನು ನಾವು ಸದಾ ಸ್ಮರಿಸುತ್ತಿರಬೇಕು: ಸಿಎಂ ಸಿದ್ದರಾಮಯ್ಯ

"ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ ವ್ಯವಸ್ಥೆ ಅಳಿಸಲು ಸಾಧ್ಯ" ಎಂದು...

ಅಡುಗೆಮನೆಯಲ್ಲಿ ಪುರುಷ, ಫುಟ್‌ಬಾಲ್ ಮೈದಾನದಲ್ಲಿ ಬಾಲಕಿ; ಪಿತೃಪ್ರಭುತ್ವವನ್ನು ಛಿದ್ರಗೊಳಿಸುವ ಕೇರಳದ ಶಾಲಾ ಪಠ್ಯಗಳು

ಒಬ್ಬ ಪುರುಷ ಅಡುಗೆಮನೆಯಲ್ಲಿ ತೆಂಗಿನಕಾಯಿ ತುರಿಯುತ್ತಾನೆ. ಆತನ ಪತ್ನಿ ಅಡುಗೆ ಮಾಡುತ್ತಾರೆ....

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...