‘Make in India’: ಚಿಪ್ಸ್‌ನಿಂದ ಹಡಗುಗಳವರೆಗೆ ಎಲ್ಲವನ್ನು ತಯಾರಿಸುವ ಗುರಿ ಸರ್ಕಾರದ್ದು: ಪ್ರಧಾನಿ ಮೋದಿ

Date:

Advertisements

11 ವರ್ಷಗಳ ‘ಮೇಕ್ ಇನ್ ಇಂಡಿಯಾ’ ಅಭಿಮಾನವು ಚಿಪ್‌ಗಳಿಂದ ಹಿಡಿದು ಹಡಗುಗಳವರೆಗೆ ಎಲ್ಲವನ್ನೂ ಭಾರತದಲ್ಲಿಯೇ ತಯಾರಿಸುವ ಗುರಿಯನ್ನು ಹೊಂದಿದೆ. ‘ಆತ್ಮನಿರ್ಭರ ಭಾರತ’ ಘೋಷಣೆಗೆ ಸಹಕಾರಿಯಾಗಿದೆ. ಭಾರತದ ಆರ್ಥಿಕ ಬೆಳವಣಿಗೆಯು ದ್ವಿಗುಣಗೊಳ್ಳಲು ನೆರವು ನೀಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಉತ್ತರ ಪ್ರದೇಶದ ಗೇಟರ್ ನೋಯ್ಡಾದಲ್ಲಿ ನಡೆದ ‘ಅಂತರರಾಷ್ಟ್ರೀಯ ವ್ಯಾಪಾರ ಪ್ರದರ್ಶನ-2025’ (ಯುಪಿಐಟಿಎಸ್-2025) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಭಾರತವು ಸ್ವಾವಲಂಬಿಯಾಗಬೇಕು. ಜಾಗತಿಕ ಅಡೆತಡೆಗಳು ಮತ್ತು ವ್ಯಾಪಾರ ಸಂಬಂಧಗಳ ಅನಿಶ್ಚಿತತೆಗಳ ಹೊರತಾಗಿಯೂ, ಭಾರತದ ಬೆಳವಣಿಗೆ ಆಕರ್ಷಕವಾಗಿದೆ. ಅಡೆತಡೆಗಳು ನಮಗೆ ಅಡ್ಡಿಯಾಗುವುದಿಲ್ಲ. ಆದರೆ ಆ ಸಂದರ್ಭಗಳಲ್ಲಿಯೂ ಸಹ, ನಾವು ಹೊಸ ದಿಕ್ಕುಗಳನ್ನು ಹುಡುಕುತ್ತಿದ್ದೇವೆ. ಈ ಎಲ್ಲ ಅಡೆತಡೆಗಳ ನಡುವೆ, ಭಾರತವು ಮುಂಬರುವ ದಶಕಗಳಿಗಾಗಿ ಸದೃಢ ಅಡಿಪಾಯವನ್ನು ಬಲಪಡಿಸುತ್ತಿದೆ” ಎಂದು ಹೇಳಿದರು.

“ನಮ್ಮ ಸಂಕಲ್ಪ ಮತ್ತು ಮಂತ್ರ – ‘ಆತ್ಮನಿರ್ಭರ ಭಾರತ’. ಇತರರ ಮೇಲೆ ಅವಲಂಬಿತವಾಗಿರುವುದಕ್ಕಿಂತ ಅಸಹಾಯಕತೆ ಬೇರೆಯಿಲ್ಲ. ಒಂದು ದೇಶವು ಇತರರ ಮೇಲೆ ಹೆಚ್ಚು ಅವಲಂಬಿತವಾದಷ್ಟೂ, ಅದರ ಬೆಳವಣಿಗೆಯಲ್ಲಿ ಹೆಚ್ಚಿನ ರಾಜಿಯಾಗುತ್ತದೆ” ಎಂದು ಮೋದಿ ಹೇಳಿದರು.

“ಭಾರತ ಸರ್ಕಾರವು ದೇಶದಲ್ಲಿ ‘ಚಿಪ್ಸ್‌ನಿಂದ ಹಡಗು’ಗಳ ವರೆಗೆ ಎಲ್ಲವನ್ನೂ ತಯಾರಿಸುವ ಗುರಿಯನ್ನು ಹೊಂದಿದೆ. ಭಾರತದಲ್ಲಿ ತಯಾರಿಸಬಹುದಾದ ಪ್ರತಿಯೊಂದು ಉತ್ಪನ್ನವನ್ನು ಇಲ್ಲಿ ತಯಾರಿಸಬೇಕು” ಎಂದರು.

“ರಷ್ಯಾದ ಸಹಯೋಗದೊಂದಿಗೆ ಉತ್ತರ ಪ್ರದೇಶದ ಕಾರ್ಖಾನೆಯಲ್ಲಿ ‘AK-203’ ರೈಫಲ್‌ಗಳ ಉತ್ಪಾದನೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ನಾವು ರಕ್ಷಣಾ ವಲಯವನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಪ್ರತಿಯೊಂದು ಘಟಕವು ‘ಮೇಡ್ ಇನ್ ಇಂಡಿಯಾ’ ಗುರುತು ಹೊಂದಿರುವ ವ್ಯವಸ್ಥೆಯನ್ನು ಸೃಷ್ಟಿಸುತ್ತಿದ್ದೇವೆ” ಎಂದು ಪ್ರತಿಪಾದಿಸಿದರು.

ಈ ಲೇಖನ ಓದಿದ್ದೀರಾ?: ಜಿಎಸ್‌ಟಿ 2.0 | ವಸ್ತುಗಳ ಬೆಲೆಯೇ 50% ಕಡಿತ; ತಪ್ಪು ಲೆಕ್ಕ ಹೇಳಿ ಪೇಚಿಗೆ ಸಿಲುಕಿದ ಬಿಜೆಪಿ ಸಂಸದ

“ನಮ್ಮ ಫಿನ್‌ಟೆಕ್ ವಲಯವು ಅಂತರ್ಗತ ಅಭಿವೃದ್ಧಿಯನ್ನು ಬಲಪಡಿಸಿದೆ. UPI, ಆಧಾರ್ ಸೇರಿದಂತೆ ನಾವು ಮಾಡಿದ ಮುಕ್ತ ವೇದಿಕೆಗಳು ಎಲ್ಲರಿಗೂ ಅಂತರ್ಗತವಾಗಿವೆ. ಇದರ ಪ್ರಭಾವ ಎಲ್ಲೆಡೆ ಕಂಡುಬರುತ್ತದೆ. ಮಾಲ್‌ನಲ್ಲಿ ಶಾಪಿಂಗ್ ಆಗಿರಲಿ ಅಥವಾ ಚಹಾ ಮಾರಾಟಗಾರರಾಗಿರಲಿ, ಎಲ್ಲರೂ ಯುಪಿಐ ಬಳಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಭಾರತದಲ್ಲಿ ತಯಾರಾಗುವ ಎಲ್ಲ ಮೊಬೈಲ್ ಫೋನ್‌ಗಳಲ್ಲಿ, 55% ಫೋನ್‌ಗಳು ಉತ್ತರ ಪ್ರದೇಶದಲ್ಲಿ ತಯಾರಾಗುತ್ತಿವೆ. ಉತ್ತರ ಪ್ರದೇಶದ ಸೆಮಿಕಂಡಕ್ಟರ್ ವಲಯವು ಭಾರತದ ಸ್ವಾವಲಂಬನೆಯನ್ನು ಬಲಪಡಿಸುತ್ತದೆ. ನಮ್ಮ ಪಡೆಗಳು ಇತರ ರಾಷ್ಟ್ರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಬಯಸುತ್ತವೆ” ಎಂದರು.

“ಇಂದು, ಸರ್ಕಾರಿ ಇ-ಮಾರ್ಕೆಟ್‌ಪ್ಲೇಸ್ (GeM) ಪೋರ್ಟಲ್ ಮೂಲಕ, ಸುಮಾರು 25 ಲಕ್ಷ ಮಾರಾಟಗಾರರು ಮತ್ತು ಸೇವಾ ಪೂರೈಕೆದಾರರು ತಮ್ಮ ಉತ್ಪನ್ನಗಳನ್ನು ಸರ್ಕಾರಕ್ಕೆ ಸರಬರಾಜು ಮಾಡುತ್ತಿದ್ದಾರೆ. ಹಿಂದಿನ ಸರ್ಕಾರಗಳಲ್ಲಿ, ಇದನ್ನು ನಿರೀಕ್ಷಿಸುವುದು ಅಸಾಧ್ಯವಾಗಿತ್ತು. ಆದರೆ, ಇಂದು, ಸಣ್ಣ ಅಂಗಡಿಯವರು ಸಹ ಈ ಪೋರ್ಟಲ್ ಮೂಲಕ ತಮ್ಮ ಸರಕುಗಳನ್ನು ಮಾರಾಟ ಮಾಡುತ್ತಿದ್ದಾರೆ. ಭಾರತವು 2047ರ ವೇಳೆಗೆ ‘ವಿಕ್ಷಿತ್ ಭಾರತ’ ಗುರಿಯನ್ನು ಸಾಧಿಸುವ ಗುರಿಯೊಂದಿಗೆ ಮುನ್ನಡೆಯುತ್ತಿದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X