ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ಬಿಜೆಪಿಯಿಂದ ವೆಚ್ಚ ವಸೂಲಿಗೆ ಹೈಕೋರ್ಟ್‌ ಮಧ್ಯಸ್ಥಿಕೆ ಕೋರಿದ ಕಾಂಗ್ರೆಸ್‌

Date:

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಪ್ರಧಾನಿ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಎರಡು ದಿನಗಳ ಧ್ಯಾನಕ್ಕೆ ತೆರಳಿದ್ದಾರೆ. ಅವರ ಧ್ಯಾನಕ್ಕಾಗಿ ಮಾಡಲಾದ ಎಲ್ಲ ಏರ್ಪಾಡುಗಳಿಗೆ ತಗುಲುವ ವೆಚ್ಚವನ್ನು ಬಿಜೆಪಿಯಿಂದ ವಸೂಲಿ ಮಾಡಲು ಮದ್ರಾಸ್ ಹೈಕೋರ್ಟ್‌ ಮಧ್ಯಸ್ಥಿಕೆ ಕೋರಿ ಕಾಂಗ್ರೆಸ್‌ ಅರ್ಜಿ ಸಲ್ಲಿಸಿದೆ.

- Advertisement -

ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಸದಸ್ಯ ಎ.ಪಿ ಸೂರ್ಯಪ್ರಕಾಶ್ ನೇತೃತ್ವದ ವಕೀಲರ ತಂಡವು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. “ಪ್ರಧಾನಿ ಮೋದಿ ಅವರು ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕಕ್ಕೆ ವೈಯಕ್ತಿಕ ಭೇಟಿಗಾಗಿ ಬಂದಿದ್ದಾರೆ. ಭದ್ರತಾ ಅಂಶಗಳನ್ನು ಮರೆತು, ಮೋದಿಯವರ ಕನ್ನಿಕುಮಾರಿ ಭೇಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಭಾರಿ ಮೊತ್ತವನ್ನು ಖರ್ಚು ಮಾಡಿದೆ. ಆ ವೆಚ್ಚವನ್ನು ಬಿಜೆಪಿಯ ನಿಧಿಯಿಂದ ವಸೂಲಿ ಮಾಡಬೇಕಾಗಿದೆ” ಎಂದು ಸೂರ್ಯಪ್ರಕಾಶ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

“ಮೋದಿ ಅವರ ಧ್ಯಾನವು ಚುನಾವಣಾ ಪ್ರಚಾರದ ಭಾಗವಾಗಿದೆ. ಅವರು ಬಿಜೆಪಿಗೆ ಮತ ಸೆಳೆಯಲು ವಿವೇಕಾನಂದ ರಾಕ್‌ನಲ್ಲಿ ಮಾರುವೇಷ ಧರಿಸಿದ್ದಾರೆ. ಮೇ 30ರಂದು ಪ್ರಾರಂಭವಾದ ಮೋದಿಯವರ ಧ್ಯಾನವನ್ನು ದೂರದರ್ಶನ ಸೇರಿದಂತೆ ಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗಿದೆ. ಇದು, ವಿಪಕ್ಷಗಳಿಗೆ ಅನನುಕೂಲಕರವಾಗಿದೆ” ಎಂದು ಅವರು ಹೇಳಿದ್ದಾರೆ.

“ಅವರ ಕನ್ಯಾಕುಮಾರಿ ಭೇಟಿಗಾಗಿ ತಮಿಳುನಾಡು ರಾಜ್ಯ ಸರ್ಕಾರ ಖರ್ಚು ಮಾಡಿರುವ ಎಲ್ಲ ಹಣವನ್ನು ರಾಜ್ಯ ಸರ್ಕಾರವು ಬಿಜೆಪಿ ನಿಧಿಯಿಂದ ವಸೂಲಿ ಮಾಡುವಂತೆ ಹೈಕೋರ್ಟ್‌ ನಿರ್ದೇಶನ ನೀಡಬೇಕು. ಅದಕ್ಕಾಗಿ, ಮಧ್ಯಸ್ಥಿಕೆ ವಹಿಸಬೇಕು” ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಲಡ್ಡು ಕಲಬೆರಕೆ ಹಗರಣ: ಪಾಮ್ ಆಯಿಲ್ ಪೂರೈಸುತ್ತಿದ್ದ ಉದ್ಯಮಿ ಇ.ಡಿ ವಶಕ್ಕೆ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಭಾರಿ ಪ್ರಮಾಣದ ಕಲಬೆರಕೆ...

ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವಾಗ 'ಚಾಟ್ ಜಿಪಿಟಿ' (ChatGPT) ಬಳಸುತ್ತಿರುವುದು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ, ಐಐಟಿ...

12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, 'ಕಾಕ್ರೋಚ್ ಜನತಾ...

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...