ಕರ್ನಾಟಕಕ್ಕಾಗಿರುವ ಅನ್ಯಾಯಕ್ಕೆ ಉತ್ತರಿಸಬೇಕಾದದ್ದು ಮೋದಿ ಹೊರತು ಬಿಜೆಪಿ ಐಟಿ ಸೆಲ್ ಅಲ್ಲ: ಸಿದ್ದರಾಮಯ್ಯ

Date:

Advertisements

ಕರ್ನಾಟಕ ಹಾಗೂ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ‘ನಿದ್ದೆಯಿಂದ ಎದ್ದೇಳಿ ಮೋದಿ’ ಎಂಬ ಟ್ಯಾಗ್‌ಲೈನ್ ಜೊತೆಗೆ ಹಲವಾರು ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದು, ಬಿಜೆಪಿ ಪಾಳಯವನ್ನು ಕಂಗೆಡಿಸಿತ್ತು. ಈ ಪೋಸ್ಟರ್‍‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಕೂಡ ಆಗಿತ್ತು. ಇದಕ್ಕೆ ಕಿಡಿಕಾರಿದ್ದ ಬಿಜೆಪಿ, ಸಿಎಂ ಸಿದ್ದರಾಮಯ್ಯನವರ ವಿರುದ್ಧ ಮುಗಿಬಿದ್ದಿತ್ತು.

ಈ ಹಿನ್ನೆಲೆಯಲ್ಲಿ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ” ಎಂದು ಟಾಂಗ್ ಕೊಟ್ಟಿದ್ದಾರೆ.

ಅದೂ ಅಲ್ಲದೇ, “ಸನ್ಮಾನ್ಯ ಪ್ರಧಾನಿಯವರು ಒಪ್ಪಿ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ದನಿದ್ದೇನೆ” ಎಂದು ಬಹಿರಂಗ ಸವಾಲು ಕೂಡ ಹಾಕಿದ್ದಲ್ಲದೇ, ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯಗಳನ್ನು ಬೊಟ್ಟು ಮಾಡಿದ್ದಾರೆ.

Advertisements

“ನಾಡಿಗೆ ಬರಗಾಲ ಬಿದ್ದು ಆರು ತಿಂಗಳುಗಳಾಗಿವೆ. ಬರ ಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನ ಮಂತ್ರಿಯವರನ್ನು ಭೇಟಿಯಾಗಿ ನಮ್ಮ ರೈತರ ಕಷ್ಟಗಳನ್ನು ವಿವರಿಸಿದ್ದೇನೆ. ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

“ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64ಕ್ಕೆ ಇಳಿಕೆ ಮಾಡಿ ವಂಚಿಸಲಾಗಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರೂಪಾಯಿಯಷ್ಟು ಬೆವರಗಳಿಕೆಯಿಂದ ಕಟ್ಟಿದ ತೆರಿಗೆ ಹಣವನ್ನು ಕಳೆದುಕೊಂಡಿದ್ದಾರೆ” ಎಂದು ಸಿಎಂ ಬಹಿರಂಗಪಡಿಸಿದ್ದಾರೆ.

“ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ. ಕರ್ನಾಟಕಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್‌ ಅವರು ಈ ಶಿಫಾರಸ್ಸನ್ನು ತಿರಸ್ಕರಿಸಿದ್ದಾರೆ” ಎಂದು ಸಿದ್ದರಾಮಯ್ಯ ದೂರಿದ್ದಾರೆ.

“ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ. ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಬೇರೆ ರಾಜ್ಯಗಳ ನಷ್ಟದಲ್ಲಿರುವ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಬಗೆಯಲಾಯಿತು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಸೀಟುಗಳು ಮೀಸಲು: ಮುಖ್ಯಮಂತ್ರಿ ಸಿದ್ದರಾಮಯ್ಯ

“ನಮ್ಮ ಹಿರಿಯರು ಕಷ್ಟಪಟ್ಟು ನಿರ್ಮಾಣ ಮಾಡಿದ್ದ ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಮಾರಲಾಯಿತು. ಹದಿನೆಂಟು ಸಾವಿರ ಕೋಟಿ ರೂಪಾಯಿ ಬೆಂಗಳೂರು ಸಬ್‌ ಅರ್ಬನ್‌ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೇ ಯೋಜನೆಗಳನ್ನು ಮೂಲೆಗೆ ತಳ‍್ಳಲಾಗಿದೆ. ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ?” ಎಂದು ಬಿಜೆಪಿಯವರಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

Download Eedina App Android / iOS

X