ಮೋದಿ ಮತ್ತೆ ಪ್ರಧಾನಿಯಾಗಬೇಕು; ಮರಳಿ ಬಿಜೆಪಿಗೆ ಬಂದಿದ್ದೇನೆ: ಜಗದೀಶ್‌ ಶೆಟ್ಟರ್

Date:

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಲಿಂಗಾಯತ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ಮರಳಿ ಮಾತೃ ಪಕ್ಷ ಬಿಜೆಪಿಗೆ ಮರಳಿದ್ದಾರೆ.

ಗುರುವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಶೆಟ್ಟರ್‌ ಅವರು ದಿಢೀರ್‌ ಮಾತುಕತೆ ನಡೆಸಿದ್ದು, ಅದು ಈಗ ಯಶಸ್ವಿಯಾಗಿದೆ.

ಜಗದೀಶ್ ಶೆಟ್ಟರ್ ಅವರು ಬಿಜೆಪಿಯ ದೆಹಲಿ ಕಚೇರಿಯಲ್ಲಿ ಅಧಿಕೃತವಾಗಿ ಮಾತೃಪಕ್ಷಕ್ಕೆ ಮರಳಿದರು. ಈ ವೇಳೆ ಮಾತನಾಡಿದ ಅವರು, “ವಿಧಾನಸಭಾ ಚುನಾವಣೆ ವೇಳೆ ಕೆಲವು ಕಾರಣಗಳಿಗಾಗಿ ಬಿಜೆಪಿ ತೊರೆದಿದ್ದೆ. ಮತ್ತೆ ನಮ್ಮ ನಾಯಕರು ಮರಳಿ ಪಕ್ಷಕ್ಕೆ ಬಾ ಎಂದು ವಿನಂತಿಸಿಕೊಂಡರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮರಳಿ ಪಕ್ಷಕ್ಕೆ ಬಂದಿರುವೆ. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಹೀಗಾಗಿ ಪಕ್ಷಕ್ಕೆ ಮತ್ತೆ ದುಡಿಯುತ್ತೇನೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್‌ ನಾಯಕಾರದ ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೆನ್ನಾಗಿ ತಮ್ಮ ಪಕ್ಷದಲ್ಲಿ ನಡೆಸಿಕೊಂಡಿದ್ದಾರೆ. ಅವರಿಗೆ ಈ ಮೂಲಕ ಧನ್ಯವಾದ ತಿಳಿಸುತ್ತೇನೆ. ಅಮಿತ್‌ ಶಾ ಅವರು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಲೋಕಸಭೆಯಲ್ಲಿ ಮತ್ತೆ ಬಿಜೆಪಿ ಗೆಲ್ಲಬೇಕು” ಎಂದು ಹೇಳಿದರು.

“ಈಗಾಗಲೇ ಇ-ಮೇಲ್‌ ಮೂಲಕ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕಳುಹಿಸಿದ್ದೇನೆ. ಕಾಂಗ್ರೆಸ್‌ನ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದೇನೆ” ಎಂದರು.

ಪಕ್ಷಕ್ಕೆ ಹೆಚ್ಚಿನ ಶಕ್ತಿ: ವಿಜಯೇಂದ್ರ

ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ತಮ್ಮ ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿ ಮತ್ತೊಮ್ಮೆ ಬಿಜೆಪಿ ಸೇರಿದ್ದಾರೆ. ಅವರ ಮನೆಗೇ ಅವರು ಮರಳಿ ಬಂದಿದ್ದಾರೆ” ಎಂದರು.

“ರಾಜ್ಯ ಬಿಜೆಪಿ ಬೆಳವಣಿಗೆ ದೃಷ್ಟಿಯಿಂದ ಇದೊಂದು ದೊಡ್ಡ ಶಕ್ತಿ ಎಂದ ಅವರು, ಪಕ್ಷದ ಹಿರಿಯರು, ಕಾರ್ಯಕರ್ತರ ಅಪೇಕ್ಷೆ ಇದಾಗಿತ್ತು. ಈ ಕುರಿತು ಹಲವಾರು ದಿನಗಳಿಂದ ಚರ್ಚೆ ಆಗಿತ್ತು. ಇವತ್ತು ಬೆಳಿಗ್ಗೆ ಬಿಜೆಪಿ ವರಿಷ್ಠರಾದ, ಮಾನ್ಯ ಗೃಹ ಸಚಿವ ಅಮಿತ್ ಶಾ ಅವರನ್ನು ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತಿತರ ಹಿರಿಯರೊಂದಿಗೆ ಭೇಟಿ ಮಾಡಿ, ಚರ್ಚಿಸಿ ಯಾವುದೇ ಅಪೇಕ್ಷೆ ಇಲ್ಲದೆ ಬಿಜೆಪಿ ಸೇರಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಅಧ್ಯಕ್ಷ ನಡ್ಡಾಜೀ, ಅಮಿತ್ ಶಾಜೀ, ರಾಜ್ಯದ ಕಾರ್ಯಕರ್ತರು ಅವರ ಮರಳುವಿಕೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...

ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

ಶುಕ್ರವಾರ ನಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ವೈಟ್...