ರೈತರಿಗೆ ಸಾಲು ಸಾಲು ಅನ್ಯಾಯ ಮಾಡಿ, ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತಾ ಮೋದಿ: ಸಿದ್ದರಾಮಯ್ಯ ಪ್ರಶ್ನೆ

Date:

Advertisements

ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡಗಡೆ ಮಾಡಿರುವ ಅವರು, “ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?” ಎಂದು ಕೇಳಿದ್ದಾರೆ.

“ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ .ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್‌ ಪ್ರಿಂಟ್‌ ಮಾಡುವ ಮೆಷಿನ್‌ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?” ಎಂದು ಹರಿಹಾಯ್ದಿದ್ದಾರೆ.

Advertisements

“2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು?” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

“ರಾಜ್ಯದಲ್ಲಿ ಬರ ಘೋಷಣೆ ಮಾಡಿ 6 ತಿಂಗಳುಗಳ ಕಳೆದಿದೆ. ರೂ.18,177 ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ?” ಎಂದು ವಾಗ್ದಾಳಿ ನಡೆಸಿದ್ದಾರೆ.

“ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಳ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದರೂ ಈ ವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ” ಎಂದು ಹೇಳಿದ್ದಾರೆ.

“ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ ನಲ್ಲಿ ರೂ.5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ ಈ ವರೆಗೆ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ. ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿವೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ನಾಡಿನ‌ ರೈತರನ್ನು ಕೈಬಿಟ್ಟಿತ್ತು.
ರಾಜ್ಯದ ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ದೇಶದ ಕೃಷಿ ಕ್ಷೇತ್ರವನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳ ಕೈಗಿಡುವ ದುಷ್ಟ ಆಲೋಚನೆಯೊಂದಿಗೆನ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ 3 ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿತು. ಈ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಹೋರಾಟ ಮಾಡುತ್ತಿದ್ದ 750ಕ್ಕೂ ಹೆಚ್ಚು ರೈತರು ಅನಾರೋಗ್ಯ, ಹವಾಮಾನ ವೈಪರಿತ್ಯ, ಪೊಲೀಸ್‌ ದೌರ್ಜನ್ಯಗಳಿಗೆ ಬಲಿಯಾದರು.
ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ ನರೇಂದ್ರ ಮೋದಿ ಅವರೇ?” ಎಂದು ಕೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X