ಮೋದಿ ಉಪನಾಮ ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್‌ ನ್ಯಾಯಮೂರ್ತಿ

Date:

  • ರಾಹುಲ್ ಗಾಂಧಿ ಅರ್ಜಿ ವಿಚಾರಣೆ ಪಟ್ಟಿ ಮಾಡಲಿರುವ ಎಸಿಜೆ ದೇಸಾಯಿ
  • ಏಪ್ರಿಲ್ 29ರಂದು ವಿಚಾರಣೆ ಕೈಗೆತ್ತಿಕೊಳ್ಳುವಂತೆ ವಕೀಲರ ಮನವಿ

ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜನಪ್ರತಿನಿಧಿಗಳ ಮತ್ತು ಸೂರತ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಗುಜರಾತ್‌ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆದರೆ, ಯಾವುದೇ ಕಾರಣ ನೀಡದೆ ನ್ಯಾಯಮೂರ್ತಿ ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

- Advertisement -

ಮೋದಿ ಉಪನಾಮ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷಯ ತೀರ್ಪನ್ನು ಪ್ರಶ್ನಿಸಿ ರಾಹುಲ್ ಸೂರತ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಮನವಿ ತಿರಸ್ಕರಿಸಿತ್ತು. ಬಳಿಕ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಹುಲ್ ಪರ ವಕೀಲ ಪಂಕಜ್ ಚಂಪನೇರಿ ಅವರು ಏಪ್ರಿಲ್ 29ರಂದು ಅರ್ಜಿ ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಯಾವುದೇ ಕಾರಣ ನೀಡದ ನ್ಯಾಯಾಮೂರ್ತಿ ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದ ಬಳಿಕ, ಏಪ್ರಿಲ್ 29ರಂದು ವಿಚಾರಣೆ ಕೈಗೆತ್ತಿಕೊಳ್ಳುವಂತೆ ಹಂಗಾಮಿ ನ್ಯಾಯಾಮೂರ್ತಿ ಎ.ಜೆ ದೇಸಾಯಿ ಅವರ ಮುಂದೆ ರಾಹುಲ್ ಅವರ ವಕೀಲ ಪಂಕಜ್ ಚಂಪನೇರಿ ಪ್ರಸ್ತಾಪಿಸಿದ್ದಾರೆ. ಎಸಿಜೆ ದೇಸಾಯಿ ಅವರು ವಿಚಾರಣಾ ದಿನಾಂಕವನ್ನು ಪಟ್ಟಿ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿರುವ ಗೀತಾ ಗೋಪಿ ಅವರು ಪ್ರಕರಣವನ್ನು ಬೇರೆ ಪೀಠಕ್ಕೆ ನಿಯೋಜಿಸಲು ಮುಖ್ಯ ನ್ಯಾಯಮೂರ್ತಿಗೆ ಹಸ್ತಾಂತರಿಸುವಂತೆ ಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಸತ್ಯ ಹೇಳಿದ್ದಕ್ಕೆ ಸಿಕ್ಕ ಬೆಲೆ; ತುಘಲಕ್ ಲೇನ್ ನಿವಾಸ ತೊರೆದ ರಾಹುಲ್ ಗಾಂಧಿ

ಏನಿದು ಪ್ರಕರಣ?

2019ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ “ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ” ಎಂದು ರಾಹುಲ್‌ ಲೇವಡಿ ಮಾಡಿದ್ದರು.

ಈ ಹೇಳಿಕೆಯನ್ನು ಖಂಡಿಸಿ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಅಪರಾಧ ಮಾನಹಾನಿ ಮೊಕದ್ದಮೆ ದಾಖಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...