ಸಂಸದರಾಗಿ ಮೋದಿ ಪ್ರಮಾಣ ವಚನ: ಸಂವಿಧಾನದ ಪ್ರತಿ ಪ್ರದರ್ಶಿಸಿ ನೆನಪಿಸಿದ ‘ಇಂಡಿಯಾ’ ಒಕ್ಕೂಟ

Date:

Advertisements

ನೂತನ ಸಂಸತ್‌ ಭವನ ಸೆಂಟ್ರಲ್ ವಿಸ್ಟಾದಲ್ಲಿ ಇಂದಿನಿಂದ(ಜೂನ್ 24) 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರದ ಸಂಪ್ರದಾಯದಂತೆ ಲೋಕಸಭೆಯ ನಾಯಕ ಹಾಗೂ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಮೊದಲಿಗೆ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಲೋಕಸಭಾ ಸ್ಪೀಕರ್ ಮುಂದಿದ್ದ ಪೀಠದ ಮುಂದೆ ಬಂದು ನಿಂತರು. ಈ ವೇಳೆ ಎದುರು ಬದಿಯಲ್ಲಿ ಕುಳಿತಿದ್ದ ರಾಹುಲ್ ಗಾಂಧಿ ನೇತೃತ್ವದ ಇಂಡಿಯಾ ಒಕ್ಕೂಟದ ಸದಸ್ಯರು ಸಂವಿಧಾನದ ಪ್ರತಿಯನ್ನು ಪ್ರದರ್ಶಿಸುವ ಮೂಲಕ ‘ಚಾರ್ ಸೌ ಪಾರ್’ ಭಾಷಣವನ್ನು ನೆನಪಿಸಿದ ಪ್ರಸಂಗ ನಡೆಯಿತು.

ಸಂಸತ್‌ನ ಒಳಗೂ ಹೊರಗೂ ಒಗ್ಗಟ್ಟು ಪ್ರದರ್ಶಿಸಿದ ವಿಪಕ್ಷದ ಸಂಸದರು

Advertisements

18ನೇ ಲೋಕಸಭೆಯ ಮೊದಲ ಅಧಿವೇಶನದ ಮೊದಲ ದಿನವೇ ಸಂಸತ್‌ನ ಒಳಗಡೆ ಮಾತ್ರವಲ್ಲದೇ, ಹೊರಗಡೆ ಕೂಡ ವಿಪಕ್ಷದ ಸಂಸದರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

 

18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಜೊತೆಯಾಗಿ ಸಂಸತ್ ಪ್ರವೇಶಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ವೇಳೆ ಎಲ್ಲ ನಾಯಕರು ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡಿದ್ದರು. “ನಾವು ಸಂವಿಧಾನ ಉಳಿಸುತ್ತೇವೆ’, ‘ಪ್ರಜಾಪ್ರಭುತ್ವ ಉಳಿಸಿ’, ‘ಲಾಂಗ್ ಲೈವ್ ಕಾನ್‌ಸ್ಟಿಟ್ಯೂಷನ್” ಎಂಬ ಘೋಷಣೆಗಳನ್ನು ಕೂಡ ಕೂಗಿದರು.

ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, “ಸಂವಿಧಾನ ಉಳಿಸಲು ನಾವು ಕಟಿಬದ್ಧರಾಗಿದ್ದೇವೆ. ಅದ್ದರಿಂದ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಸಂವಿಧಾನ ಪುಸ್ತಕ ಹಿಡಿದಿದ್ದೇವೆ. ಯಾವ ಶಕ್ತಿಯು ಭಾರತದ ಸಂವಿಧಾನವನ್ನು ಮುಟ್ಟಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ನಾವು ಸಾರುತ್ತಿದ್ದೇವೆ” ಎಂದರು.

ಜೂನ್ 26ರಂದು ಲೋಕಸಭಾ ಸ್ಪೀಕರ್ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

‘ಸಂವಿಧಾನದ ಬದಲಾವಣೆಗೆ 400 ಸೀಟುಗಳು ಬೇಕು’ ಎಂದಿದ್ದ ಬಿಜೆಪಿಯ ನಾಯಕರು

ಬಿಜೆಪಿ ಈ ದೇಶದ ಸಂವಿಧಾನ ಬದಲಿಸಬೇಕಾದರೆ 400 ಸೀಟುಗಳು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಗೆಲ್ಲಬೇಕಿದೆ ಎಂದು ಬಿಜೆಪಿಯ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಹಲವು ಮುಖಂಡರು 2024ರ ಲೋಕಸಭಾ ಚುನಾವಣೆಗೂ ಮುನ್ನ ಹೇಳಿದ್ದರು.

ಇದು ಚುನಾವಣೆಯಲ್ಲಿ ವಿಪಕ್ಷಗಳು ಅಸ್ತ್ರವಾಗಿ ಬಳಸಿಕೊಂಡಿತ್ತು. ಸಂವಿಧಾನ ಬದಲಾವಣೆ ಹೇಳಿಕೆಯು ಬಹುಮುಖ್ಯ ಪಾತ್ರ ವಹಿಸಿದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತಿರುಗು ಬಾಣವಾಗಿತ್ತು. ಅಲ್ಲದೇ, 272ರ ಸರಳ ಬಹುಮತ ಪಡೆಯಲು ಕೂಡ ವಿಫಲವಾಗಿತ್ತು. ಸದ್ಯ ಎನ್‌ಡಿಎ ಮಿತ್ರ ಪಕ್ಷಗಳ ಬೆಂಬಲದಿಂದ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ, ಅಧಿಕಾರ ಸ್ವೀಕರಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X