ಜ.19ರಂದು ಕರ್ನಾಟಕಕ್ಕೆ ಮೋದಿ ಭೇಟಿ; ‘ನಿದ್ದೆಯಿಂದ ಎದ್ದೇಳಿ ಮೋದಿ’ ಪೋಸ್ಟರ್‌ಗಳು ವೈರಲ್

Date:

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 19 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಕಲಬುರಗಿ ಮತ್ತು ಬೆಂಗಳೂರಿಗೆ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬೆನ್ನಲ್ಲೇ, ‘ನಿದ್ದೆಯಿಂದ ಎದ್ದೇಳಿ ಮೋದಿ’ ಎಂಬ ಟ್ಯಾಗ್‌ಲೈನ್ ಜೊತೆಗೆ ಹಲವಾರು ಪೋಸ್ಟರ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ.

- Advertisement -

ಕರ್ನಾಟಕಕ್ಕೆ ಬರಲಿರುವ ಮೋದಿ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಯಲ್ಲಿ ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ರೋಡ್‌ಶೋ ನಡೆಸುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಬರದ ಸಮಯದಲ್ಲಿಯೂ ರಾಜ್ಯಕ್ಕೆ ಬಾರದ ಮೋದಿ ಅವರು ಇದೀಗ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಅವರು ವಿರುದ್ಧ ಪೋಸ್ಟರ್‌ಗಳು ವೈರಲ್ ಅಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮೋದಿ ಅವರು ನಿದ್ರಿಸುತ್ತಿರುವಂತೆ ವ್ಯಂಗ್ಯವಾಗಿ ಚಿತ್ರಿಸಲಾಗಿರುವ ಪೋಸ್ಟರ್‌ಗಳಲ್ಲಿ, “ಬಿಜೆಪಿ ಸಚಿವರ ಕಮಿಷನ್ ಕಿರುಕುಳದಿಂದ ಗುತ್ತಿಗೆದಾರ ಆತ್ಮಹತ್ಯೆ. ಬೇಸತ್ತ ಜೀವವೊಂದು ಕೊನೆಯಾಯ್ತು. ಪ್ರಧಾನಿ ಪ್ರತಿಕ್ರಿಯೆ ಎಂಬುದು ಹಾರಿಹೋಯ್ತು” ಎಂದು ಬರೆಯಲಾಗಿದೆ.

ಮತ್ತೊಂದರಲ್ಲಿ, “ಕೋವಿಡ್-19 ನಿರ್ವಹಣೆ ವೇಳೆ 40,000 ಕೋಟಿ ರೂ. ಅವ್ಯವಹಾರ ನಡೆದಿದೆ. 45 ರೂ. ಮಾಸ್ಕ್‌ಅನ್ನು 485 ರೂ.ಗೆ ಮಾರಾಟ ಮಾಡಿದ್ದಾರೆ. ಪ್ರಧಾನಿಗಳು ಪ್ರತಿಕ್ರಿಯಿಸದೆ ಗೊರಕೆ ಹೊಡೆಯುತ್ತಿದ್ದಾರೆ” ಎಂದು ವ್ಯಂಗ್ಯ ಮಾಡಲಾಗಿದೆ.

 

ಇನ್ನೊಂದರಲ್ಲಿ, “ಕರ್ನಾಟಕವು ಬಾಯಾರಿಕೆಯಿಂದ ಮನವಿ ಮಾಡಿದರೂ ಪ್ರಮುಖ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಬರಿದಾಗಿಯೇ ಉಳಿದವು. ಪ್ರಧಾನಿ ಪರಿಹಾರಗಳನ್ನು ತಲೆಯಡಿಗಿಟ್ಟುಕೊಂಡು ಮಲಗಿದರು” ಎಂದು ಕಿಡಿಕಾರಲಾಗಿದೆ.

ಈ ಸುದ್ದಿ ಓದಿದ್ದೀರಾ?: ಮೋದಿ ಪದವಿ ಪ್ರಕರಣ: ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ

ಮತ್ತೊಂದೆಡೆ, “47 ವರ್ಷಗಳ ಇತಿಹಾಸದಲ್ಲೇ ಕರ್ನಾಟಕವು ಅತ್ಯಂತ ಕೆಟ್ಟ ಬರ ಪರಿಸ್ಥಿತಿ ಎದುರಿಸುತ್ತಿದೆ. 30,000 ಕೋಟಿ ರೂ. ನಷ್ಟವಾಗಿದೆ. ಕರ್ನಾಟಕದ ಬರ ಪರಿಸ್ಥಿತಿಗೆ ಸ್ಪಂದಿಸುವ ಬದಲು ಪ್ರಧಾನಿ ಗಾಢ ನಿದ್ರೆಗೆ ಜಾರಿದ್ದಾರೆ” ಎಂದು ಟೀಕಿಸಲಾಗಿದೆ.

ಸದ್ಯ ಈ ಪೋಸ್ಟರ್‌ಗಳನ್ನು ಹಲವಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಪೋಸ್ಟರ್‌ಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಈ ಸುದ್ದಿ ಓದಿದ್ದೀರಾ?: ‘ಹಸಿದ ಹೊಟ್ಟೆಯಲ್ಲಿ ಭಜನೆ ಮಾಡಲಾರೆವು’: ಅಯೋಧ್ಯೆಯ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡವರ ಅಳಲು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ಧನ್ವೀರ್ ಗೌಡ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ ದೂರು ದಾಖಲು!

ಕನ್ನಡ ಚಿತ್ರರಂಗದ ನಟ ಧನ್ವೀರ್ ಗೌಡ ಮತ್ತು ನಟ ದರ್ಶನ್ ಅವರ...

ಸಿದ್ಧರಾಮಯ್ಯ ‘ಸ್ಟಿಂಗ್’ ಪ್ರಕರಣ: ಎಚ್‌ಡಿಕೆ‌ ದೆಹಲಿ ಕಚೇರಿಯ ಸಿಬ್ಬಂದಿ ರಿತೇಶ್ ಬಂಧನ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಬಂಧಿಸಿದ 'ಸ್ಟಿಂಗ್ ಆಪರೇಷನ್' ಪ್ರಕರಣದಲ್ಲಿ ದೆಹಲಿ...

ಬೀದರ್‌ | ಸಮತೆಯ ಪಾಲನೆಗಾಗಿ ವಚನ ಕ್ರಾಂತಿ ನಡೆಸಿದ ಶರಣರು: ಹಂಸಲೇಖ

ಕಾರ್ಮಿಕರು, ಕೃಷಿಕರು ಮತ್ತು ಶ್ರಮಿಕರು ಸಮಾಜದ ಜೀವಾಳ. ಇವರ ಶ್ರಮದಿಂದಲೇ ಬದುಕು...