ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

Date:

ಮಹಿಳೆಯರ ರಕ್ಷಣೆಗಾಗಿ ‘ಬೇಟಿ ಬಚೋವೋ – ಬೇಟಿ ಪಡಾವೋ’ ಎಂಬ ಘೋಷಣೆಯನ್ನು ಮೊಳಗಿಸಿದ್ದ ಪ್ರಧಾನಿ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಬರಲಿದ್ದಾರೆ. ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಬೃಹತ್‌ ಚುನಾವಣಾ ರ್‍ಯಾಲಿ ನಡೆಸಲಿದ್ದಾರೆ. ಇದೇ ಸಮಯದಲ್ಲಿ ಅವರು ಹಾಸನದ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತನಾಡುತ್ತಾರೆಯೇ ಎಂಬ ಪ್ರಶ್ನೆ ದೇಶಾದ್ಯಂತ ವ್ಯಕ್ತವಾಗಿದೆ.

- Advertisement -

ಹಾಸನದಲ್ಲಿ ಸುಮಾರು 2,900 ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ಗಳನ್ನು ಎಸೆಯಾಗಿದ್ದರು. ಆ ವಿಡಿಯೋಗಳಲ್ಲಿರುವುದು ಸಂಸದ ಪ್ರಜ್ವಲ್ ರೇವಣ್ಣ ಎಂದು ಹೇಳಲಾಗುತ್ತಿದೆ. ವಿಡಿಯೋದಲ್ಲಿ ಕಾಮುಕ ಯುವ ನಾಯಕ ನೂರಾರು ಹೆಣ್ಣು ಮಕ್ಕಳನ್ನು ಪುಸಲಾಯಿಸಿ, ಆಮಿಷವೊಡ್ಡಿ, ಬೆದರಿಸಿ ತನ್ನ ಕಾಮವಾಂಚೆ ತೀರಿಸಿಕೊಂಡಿದ್ದಾರೆ. ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕೃತ್ಯ ಎಸಗಿರುವ ಕಾಮುಕ ಸಂಸದ ಪ್ರಜ್ವಲ್ ರೇವಣ್ಣ ಎನ್ನಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಆತ ದೇಶಬಿಟ್ಟು ಪರಾರಿಯಾಗಿದ್ದಾನೆ. ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ಬಿಜೆಪಿ-ಜೆಡಿಎಸ್‌ನ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಲ್ಲದೆ, ಮೈಸೂರಿನಲ್ಲಿ ನಡೆದ ರ್‍ಯಾಲಿಯಲ್ಲಿ ಮೋದಿ ಅವರು ಪ್ರಜ್ವಲ್‌ಗೆ ಮತ ಹಾಕುವಂತೆ ಜನರಲ್ಲಿ ಮನವಿ ಮಾಡಿದ್ದರು.

ಮೋದಿ ಮತ ಯಾಚನೆ ಮಾಡಿದ್ದ ಪ್ರಜ್ವಲ್‌, ಈಗ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ತನ್ನ ಕೃತ್ಯವನ್ನು ತಾನೇ ವಿಡಿಯೋ ಮಾಡಿಟ್ಟುಕೊಂಡಿದ್ದಾನೆ. ಈಗ ಆತನ ವಿಕೃತ ಕಾಮವಾಂಚೆ ಬಯಲಾಗಿದೆ. ಆದರೂ, ಬಿಜೆಪಿ ಈವರೆಗೆ ಕೃತ್ಯವನ್ನು ಖಂಡಿಸಿಲ್ಲ. ಬಿಜೆಪಿಯ ಯಾವುದೇ ನಾಯಕ ಕೃತ್ಯದ ಬಗ್ಗೆ ಒಂದೇ ಒಂದು ಹೇಳಿಕೆಯನ್ನೂ ನೀಡಿಲ್ಲ.

ಈಗ ಸ್ವತಃ ಪ್ರಧಾನಿ ಮೋದಿ ಅವರೇ ಕರ್ನಾಟಕಕ್ಕೆ ಬರುತ್ತಿದ್ದಾರೆ. ಸ್ತ್ರೀ ಶಕ್ತಿ ಬಗ್ಗೆ ಮಾತನಾಡುವ, ಬೇಟಿ ಬಚಾವೋ – ಬೇಟಿ ಪಡಾವೋ ಎನ್ನುವ ಮೋದಿ ಅವರು ಇಂತಹದೊಂದು ಮಹಾ ಕೃತ್ಯದ ಬಗ್ಗೆ ಮಾತನಾಡದಿದ್ದರೆ, ಪ್ರಧಾನಿಯಾಗಿ ಅವರಿಗೆ ಶ್ರೇಯಸ್ಸಲ್ಲ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇಶದ ಜವಬ್ದಾರಿ ಹೊತ್ತಿರುವ ಮೋದಿ ಅವರು ಕೃತ್ಯದ ಬಗ್ಗೆ ಮಾತನಾಡಬೇಕು. ವಿಕೃತ ಕಾಮುಕನಿಗೆ ಶಿಕ್ಷೆ ವಿಧಿಸುವ ಹಾಗೂ ಸಂತ್ರಸ್ತ ಹೆಣ್ಣು ಮಕ್ಕಳಿಗೆ ನ್ಯಾಯ ಒದಗಿಸುವ ಭರವಸೆ ನೀಡಬೇಕೆಂದು ಹಲವರು ಆಗ್ರಹಿಸಿದ್ದಾರೆ.

ಆದರೆ, ತಮ್ಮದೇ ಎನ್‌ಡಿಎ ಅಭ್ಯರ್ಥಿಯೇ ಇಂತಹ ವಿಕೃತ ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿರುವ ಸಮಯದಲ್ಲಿ, ಮೋದಿ ಅವರು ಕೃತ್ಯದ ಬಗ್ಗೆ ಮಾತನಾಡುವರೇ ಎಂಬುದು ಅನುಮಾನ ಹುಟ್ಟಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...