ಮುಂದಿನ ವರ್ಷ ಮೋದಿ ನಿವೃತ್ತಿ, ಅಮಿತ್ ಶಾ ಪ್ರಧಾನಿ ಎಂದ ಕೇಜ್ರಿವಾಲ್!

Date:

ಮುಂದಿನ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ನಿವೃತ್ತಿ ಹೊಂದಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿ ಸ್ಥಾನ ಪಡೆಯಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಪುನರುಚ್ಚರಿಸಿದ್ದಾರೆ.

- Advertisement -

ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, “ಇಂದು, ಲಕ್ನೋದಲ್ಲಿ ನಾನು ಇಂಡಿಯಾ ಮೈತ್ರಿಕೂಟಕ್ಕೆ ಮತ ನೀಡುವಂತೆ ಯುಪಿ ಮತದಾರರಲ್ಲಿ ವಿನಂತಿಸಲು ಬಂದಿದ್ದೇನೆ. ನಾನು ನಾಲ್ಕು ವಿಷಯಗಳ ಬಗ್ಗೆ ಮಾತನಾಡಲು ಬಯಸುತ್ತೇನೆ. ಮೊದಲನೆಯದಾಗಿ, ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಅಮಿತ್ ಶಾ ಅವರನ್ನು ಪ್ರಧಾನಿ ಮಾಡಲು ಮತ ಕೇಳುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ?  75ನೇ ವಯಸ್ಸಿನಲ್ಲಿ ನಿವೃತ್ತಿ ಪಡೆಯಲು ಸಿದ್ಧವೇ: ಮೋದಿಗೆ ರೇವಂತ್ ರೆಡ್ಡಿ ಪ್ರಶ್ನೆ

“ಎರಡನೆಯದಾಗಿ, ಬಿಜೆಪಿ ಅಧಿಕಾರಕ್ಕೆ ಬಂದರೆ 2-3 ತಿಂಗಳೊಳಗೆ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಸ್ಥಾನದಿಂದ ಕೆಳಗಿಳಿಸಲಾಗುವುದು. ಮೂರನೆಯದಾಗಿ ಅವರು (ಬಿಜೆಪಿ) ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದು ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ತೆಗೆದುಹಾಕುತ್ತಾರೆ. ನಾಲ್ಕನೇ ವಿಚಾರ ಜೂನ್ 4ರಂದು ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ” ಎಂದು ಹೇಳಿದರು.

“ಬಿಜೆಪಿ 220 ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯುತ್ತಿದೆ ಮತ್ತು ಪ್ರತಿಪಕ್ಷಗಳ ಇಂಡಿಯಾ ಬ್ಲಾಕ್ ತನ್ನ ಸರ್ಕಾರವನ್ನು ರಚಿಸಲಿದೆ” ಎಂದು ಕೂಡಾ ಕೇಜ್ರಿವಾಲ್ ಈ ಸಂದರ್ಭದಲ್ಲೇ ಪ್ರತಿಪಾದಿಸಿದರು.

ಇದನ್ನು ಓದಿದ್ದೀರಾ?  75ಕ್ಕೆ ನಿವೃತ್ತಿ: ಅಮಿತ್ ಶಾ ಹಳೆಯ ಹೇಳಿಕೆ ಕೆದಕಿದ ಆಮ್ ಆದ್ಮಿ ಪಾರ್ಟಿ

“2025ರ ಸೆಪ್ಟೆಂಬರ್ 17ಕ್ಕೆ ಪ್ರಧಾನಿ ಮೋದಿಗೆ 75 ವರ್ಷ ತುಂಬಲಿದೆ. ಅಮಿತ್ ಶಾ ಅವರನ್ನು ಉತ್ತರಾಧಿಕಾರಿಯನ್ನಾಗಿ ಮಾಡಲು ಮತ್ತು ಸೆಪ್ಟೆಂಬರ್ 17, 2025ಕ್ಕೆ ಅಮಿತ್ ಶಾ ಅವರನ್ನು ಪ್ರಧಾನಿ ಮಾಡಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ” ಎಂದು ಕೇಜ್ರಿವಾಲ್ ಹೇಳಿದರು.

“75 ವರ್ಷಗಳ ನಂತರ ನಿವೃತ್ತಿಯಾಗುವುದಿಲ್ಲ ಎಂದು ಪ್ರಧಾನಿ ಮೋದಿ ಇನ್ನೂ ಹೇಳಿಲ್ಲ. ಪ್ರಧಾನಿ ಮೋದಿ ಅವರು ಈ ನಿಯಮವನ್ನು ಮಾಡಿದ್ದಾರೆ ಮತ್ತು ಅವರು ಈ ನಿಯಮವನ್ನು ಅನುಸರಿಸುತ್ತಾರೆ ಎಂದು ನನಗೆ ಸಂಪೂರ್ಣ ಭರವಸೆ ಇದೆ” ಎಂದು ಕೇಜ್ರಿವಾಲ್ ಟಾಂಗ್ ನೀಡಿದರು.

ಈ ಹಿಂದೆ ಮೇ 11ರಂದು ಕೂಡಾ ಅರವಿಂದ್ ಕೇಜ್ರಿವಾಲ್ ಅವರು, ಮೋದಿ ನಿವೃತ್ತಿ ಬಳಿಕ ಅಮಿತ್ ಶಾ ಅವರು ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದ್ದರು.

ಇನ್ನು “ಬಿಜೆಪಿಗೆ 220 ಕ್ಕಿಂತ ಕಡಿಮೆ ಸ್ಥಾನಗಳು ಬರುತ್ತಿವೆ ಎಂದು ಪ್ರಸ್ತುತ ವಿದ್ಯಾಮಾನ ಹೇಳುತ್ತದೆ. ಹರಿಯಾಣ, ದೆಹಲಿ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಯುಪಿ, ಬಿಹಾರ, ಜಾರ್ಖಂಡ್ ಮತ್ತು ರಾಜಸ್ಥಾನದಲ್ಲಿ ಅವರ ಸ್ಥಾನಗಳು ಕಡಿಮೆಯಾಗಲಿವೆ. ಬಿಜೆಪಿ ತನ್ನ ಸರ್ಕಾರವನ್ನು ರಚಿಸಲಾಗದು, ಇಂಡಿಯಾ ಮೈತ್ರಿಕೂಟವು ತನ್ನ ಸರ್ಕಾರವನ್ನು ರಚಿಸಲಿದೆ” ಎಂದು ಇದೇ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ಭರವಸೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...