ಹಳೇ ಡಬ್ಬಿಗೆ ಹೊಸ ಬಣ್ಣ ಬಳಿದಿದ್ದೇ ಮೋದಿ ಸಾಧನೆ: ಮಲ್ಲಿಕಾರ್ಜುನ ಖರ್ಗೆ

Date:

Advertisements
  • ಜೈ ಭಾರತ್‌ ಸತ್ಯಾಗ್ರಹ ಯಾತ್ರೆಯಲ್ಲಿ ಕೈ ನಾಯಕರ ಭಾಷಣ
  • ಬಿಜೆಪಿ ಸ್ಥಿತಿ ಕಾದು ನೋಡಿ ಎಂದ ಡಿಕೆ ಶಿವಕುಮಾರ್

ಪ್ರಧಾನಿ ಮೋದಿ ಅವರು ಹಳೆಯ ಡಬ್ಬಿಗೆ ಹೊಸ ಬಣ್ಣ ಬಳಿದು ತಮ್ಮ ಸಾಧನೆ ಎನ್ನುತ್ತಿದ್ದಾರೆ ಎಂದು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದರು.

ರಾಜ್ಯ ಕಾಂಗ್ರೆಸ್‌ ಕೋಲಾರದಲ್ಲಿ ಹಮ್ಮಿಕೊಂಡಿರುವ ಜೈ ಭಾರತ್‌ ಸತ್ಯಾಗ್ರಹ ಯಾತ್ರೆಯಲ್ಲಿ ಮಾತನಾಡಿ ಪ್ರಧಾನಿ ಮೋದಿ ಅವರ ರೈಲು ಉದ್ಘಾಟನೆಗಳನ್ನು ಪರೋಕ್ಷವಾಗಿ ಉಲ್ಲೇಖಿಸಿದ ಮಲ್ಲಿಕಾರ್ಜುನ ಖರ್ಗೆ, “ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಎನ್ನುತ್ತಾರೆ. ಒಂದು ಯೋಜನೆ ನೀಡುತ್ತಿಲ್ಲ. ನಮ್ಮ ಕಾರ್ಯಕ್ರಮದ ಯೋಜನೆ, ರೈಲು ಮಾರ್ಗಕ್ಕೆ ಇವರು ಹಸಿರು ಬಾವುಟ ತೋರಿಸಿ ತಮ್ಮ ಯೋಜನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಹಳೇ ಡಬ್ಬಿಗೆ ಹೊಸ ಬಣ್ಣ ಬಳಿದು ತಮ್ಮ ಸಾಧನೆ ಎನ್ನುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

“ಹಾಲು, ರೇಷ್ಮೆ, ನೀರು, ಬಂಗಾರಕ್ಕೆ ಕೋಲಾರ ಜಿಲ್ಲೆ ಪ್ರಸಿದ್ಧವಾಗಿದೆ. ಈ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭ ಮಾಡಿದ್ದು, ಪಕ್ಷಕ್ಕೆ ಗೆಲುವು ಖಚಿತ” ಎಂದು ತಿಳಿಸಿದರು.

Advertisements

“ಜನ ಮೋದಿ ಸರ್ಕಾರಕ್ಕೆ ಬೇಸತ್ತಿದ್ದಾರೆ. 40% ಕಮಿಷನ್ ಬಿಜೆಪಿ ಸರ್ಕಾರದ ವಿರುದ್ಧ ಜನ ಕಾಂಗ್ರೆಸ್ ಗೆಲ್ಲಿಸಲು ಮುಂದಾಗುತ್ತಿದ್ದಾರೆ. ರಾಜ್ಯದಲ್ಲಿ ಭ್ರಷ್ಟ ಸರ್ಕಾರವಿದೆ” ಎಂದು ಕಿಡಿಕಾರಿದರು.

“ಈ ಕಮಿಷನ್ ಭ್ರಷ್ಟಾಚಾರವನ್ನು ಮೋದಿ-ಅಮಿತ್ ಶಾ ಮೌನವಾಗಿ ಸಮರ್ಥಿಸಿಕೊಳ್ಳುತ್ತಾ, ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಾರೆ. ಇಲ್ಲಿ ಬಿಇಎಲ್, ಬಿಹೆಚ್‌ಇಎಲ್‌ಗಳನ್ನು ಮೋದಿ ಆರಂಭಿಸಿದರಾ? ಕೋಲಾರದಲ್ಲಿ ವಿದ್ಯುತ್, ರಸ್ತೆ ಮಾಡಿದ್ದು ಮೋದಿಯೇ?” ಎಂದು ಪ್ರಶ್ನಿಸಿದರು.

“ದೇಶದಲ್ಲಿ ವಿದ್ಯುತ್ ಮೊದಲು ಬಂದಿದ್ದು, ಕೋಲಾರದ ಕೆಜಿಎಫ್‌ಗೆ. ಆದರೂ ನಮ್ಮನ್ನು ಪದೇ ಪದೆ ಕೇಳುತ್ತಾರೆ. ಈ ಡಬಲ್ ಇಂಜಿನ್ ಸರ್ಕಾರ ರಾಜ್ಯಕ್ಕೆ ಏನು ಮಾಡಿದೆ? ನೆಹರೂ, ಕೆ ಸಿ ರೆಡ್ಡಿ ಕಾಲದಲ್ಲಿ ಸಾರ್ವಜನಿಕ ವಲಯ ಉದ್ದಿಮೆ ಆರಂಭ ಮಾಡಲಾಯಿತು. ಇವರ ಕಾಲದಲ್ಲಿ ಏನು ಬಂದಿದೆ?” ಎಂದು ಕೇಳಿದರು.

“ಮೋದಿ ಹಾಗೂ ಅದಾನಿ ಅವರ ನಡುವೆ ಇರುವ ಸಂಬಂಧವೇನು? 2014ರಲ್ಲಿ 50 ಸಾವಿರ ಕೋಟಿ ಇದ್ದ ಆಸ್ತಿ, 2020ರಲ್ಲಿ ಅದು 2 ಲಕ್ಷ ಕೋಟಿಗೆ ಏರುತ್ತದೆ, 2023ರಲ್ಲಿ ಅದು 12 ಲಕ್ಷ ಕೋಟಿ ಆಗಿದ್ದು ಹೇಗೆ?” ಎಂದು ಪ್ರಶ್ನಿಸಿದರು.

“ಪ್ರಧಾನಿಗಳು ವಿದೇಶಕ್ಕೆ ಹೋದಾಗ ಅದಾನಿ ಎಷ್ಟು ಬಾರಿ ಅವರ ಜೊತೆಗೆ ಹೋಗಿದ್ದರು ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು. ಆದರೆ ಅವರ ವಿರುದ್ಧ ಇದೇ ಕೋಲಾರದಲ್ಲಿ ಮಾತನಾಡಿದ್ದ ಭಾಷಣದ ವಿಚಾರವಾಗಿ ಗುಜರಾತಿನಲ್ಲಿ ಎಫ್ಐಆರ್ ದಾಖಲಿಸಿ ಕೇವಲ 22 ದಿನಗಳಲ್ಲಿ ತೀರ್ಪು ಮಾಡಿ, 24 ತಾಸಿನಲ್ಲಿ ಅನರ್ಹತೆ ಮಾಡಿದರು” ಎಂದು ಹೇಳಿದರು.

“ಮನೆ ಖಾಲಿ ಮಾಡಲು ನೊಟೀಸ್ ನೀಡಿದ್ದಾರೆ. ಇದು ಬಿಜೆಪಿಯ ಸರ್ವಾಧಿಕಾರಿ ಧೋರಣೆ. ಹೀಗಾಗಿ ನಾವು ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಬೇಕಿದೆ. ಇದಕ್ಕಾಗಿ ನಾವೆಲ್ಲರೂ ಒಟ್ಟಾಗಿ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮುಂದೆ ಸಾಗಬೇಕು” ಎಂದರು.

“ಧೈರ್ಯವಾಗಿ ಮಾತನಾಡುವ ವ್ಯಕ್ತಿ ಎಂದರೆ ಅದು ರಾಹುಲ್ ಗಾಂಧಿ. ಅನ್ಯಾಯವಾಗಿರುವುದರ ವಿರುದ್ಧ ಹೋರಾಟ ಮಾಡುವ ಶಕ್ತಿ ಇಲ್ಲದಿದ್ದರೆ, ಬದುಕಲು, ಸಂವಿಧಾನ ಪ್ರಜಾಪ್ರಭುತ್ವ ಉಳಿಯುವುದಿಲ್ಲ. ಇವು ಉಳಿಯಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು” ಎಂದು ಕರೆ ನೀಡಿದರು.ಖರ್ಗೆ

ಕಾಂಗ್ರೆಸ್ ನಾಯಕರ ಕುರಿತು ಮಾತನಾಡಿದ ಅವರು, “ನಿಮ್ಮಲ್ಲಿ ಯಾರೇ ಮುಖ್ಯಮಂತ್ರಿ ಆದರೂ ನನಗೆ ಲೆಕ್ಕವಿಲ್ಲ. ಇಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು” ಎಂದು ಹೇಳಿದರು.

“ಶಾಸಕರು ಹಾಗೂ ಹೈಕಮಾಂಡ್ ತೀರ್ಮಾನದಂತೆ ಮುಖ್ಯಮಂತ್ರಿ ಆಯ್ಕೆಯಾಗುತ್ತಾರೆ. ನೀವು ಜನರ ಬಗ್ಗೆ ಯೋಚಿಸಿ, ಮಿಕ್ಕ ವಿಚಾರ ಹೈಕಮಾಂಡ್‌ಗೆ ಬಿಟ್ಟುಬಿಡಿ. ನೀವೆಲ್ಲ ಒಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ 150-160 ಸೀಟು ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮೋದಿಯವರೇ, ನಿಮ್ಮ ಯಾವುದೇ ಕುತಂತ್ರಕ್ಕೂ ನಾನು ಅಂಜಲಾರೆ: ರಾಹುಲ್ ಗಾಂಧಿ

ಸಮಾವೇಶದಲ್ಲಿ ಮಾತನಾಡಿರುವ ಡಿ ಕೆ ಶಿವಕುಮಾರ್, “ರಾಹುಲ್ ಗಾಂಧಿ ಅವರು ಸತ್ಯ ನುಡಿದ ಜಾಗದಲ್ಲಿ ಈ ಸಮಾವೇಶ ಮಾಡಲಾಗುತ್ತಿದೆ. ನಾವೆಲ್ಲರೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ ರಾಹುಲ್ ಗಾಂಧಿ ಅವರಿಗೆ ಶಕ್ತಿ ತುಂಬಬೇಕು” ಎಂದರು.

“ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಏನಾಗುತ್ತಿದೆ ಎಂದು ನೀವು ನೋಡುತ್ತಿದ್ದೀರ. 47 ಜನ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡಿದ್ದಾರೆ. ಯಾರೆಲ್ಲಾ ಪಕ್ಷ ಸೇರುತ್ತಾರೆ ಎಂದು ಮುಂದೆ ಮಾತನಾಡುತ್ತೇನೆ” ಎಂದು ಹೇಳಿದರು.

“ಮೋದಿ ಹಾಗೂ ಬೊಮ್ಮಾಯಿ ಅವರು ನಮ್ಮದು ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿ ವೇಗವಾಗಿ ಆಗಲಿದೆ ಎಂದು ಹೇಳಿದ್ದರು. ಈ ಡಬಲ್ ಇಂಜಿನ್ ಸರ್ಕಾರ ಬಂದ ನಂತರ ರಾಜ್ಯ ಇಷ್ಟು ಕೆಟ್ಟ ಹೆಸರನ್ನು ಹಿಂದೆಂದೂ ತೆಗೆದುಕೊಂಡಿರಲಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

“ಬಿಜೆಪಿ ಸರ್ಕಾರ ರಾಜ್ಯದ ಘನತೆ ಹಾಳು ಮಾಡಿದೆ. ಗುತ್ತಿಗೆದಾರರ ಸಂಘ, ಅನುದಾನ ರಹಿತ ಶಿಕ್ಷಣ ಸಂಸ್ಥೆ ರುಪ್ಸಾದವರು ರಾಜ್ಯದಲ್ಲಿ ಪ್ರತಿ ಕೆಲಸಕ್ಕೆ ಈ ಸರ್ಕಾರ 40% ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಪ್ರಧಾನಿಗೆ ಪತ್ರ ಬರೆದಿದ್ದು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು” ಎಂದು ವಾಗ್ದಾಳಿ ನಡೆಸಿದರು.

“ಅಷ್ಟರ ಮಟ್ಟಿಗೆ ಬಿಜೆಪಿ ಸರ್ಕಾರ ರಾಜ್ಯದ ಗೌರವ ಹಾಳು ಮಾಡಿದೆ. ಈ ಬಗ್ಗೆ ಜನ ಬೀದಿ ಬೀದಿಗಳಲ್ಲಿ ಮಾತನಾಡುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ರಾಜ್ಯದ ಇತಿಹಾಸದಲ್ಲಿ ಬಂದಿರಲಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X